Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*
  • *ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*
  • *ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*
  • *ಕೊಡಗಿನ ಹಸಿರು ಪರಿಸರ ಸಂರಕ್ಷಿಸಿದರೆ ಕಾವೇರಿ ಉಳಿಯಲಿದೆ: ಸಿ.ಪಿ.ಮುತ್ತಣ್ಣ*
  • *ರೂ.7.50 ಕೋಟಿ ಬಿಲ್ ಪಾವತಿಗೆ ಬಾಕಿ : ಸೆ.22 ರಿಂದ ಗುತ್ತಿಗೆದಾರರ ಅಹೋರಾತ್ರಿ ಪ್ರತಿಭಟನೆ*
  • *ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸೆಂಟ್ ಥಾಮಸ್ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ*
  • *ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಕೂಟಿ ಸವಾರನಿಗೆ ಗಾಯ*
  • *ಸುಂಟಿಕೊಪ್ಪದಲ್ಲಿ ಜಾದು ಪ್ರದರ್ಶನಕ್ಕೆ ಜನಮೆಚ್ಚುಗೆ*
  • *ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಹತ್ತು ಮಂಟಪಗಳ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಹತ್ತು ಮಂಟಪಗಳ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ*

ಸೆಪ್ಟೆಂಬರ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ, NEWS DESK ಸೆ.19: ಐದು ದಿನಗಳ ಕಾಲ ಭಕ್ತಿ–ಶ್ರದ್ಧೆಯಿಂದ ಪೂಜಿಸಲ್ಪಟ್ಟ ವಿಘ್ನೇಶ್ವರನಿಗೆ ಅಂತಿಮ ಪೂಜೆ ಸಲ್ಲಿಸಿ, ಪ್ರಾರ್ಥನೆಯೊಂದಿಗೆ ಗೋಣಿಕೊಪ್ಪ ನಗರ ಶುಕ್ರವಾರ ಭಾವಪೂರ್ಣ ಬೀಳ್ಕೊಡುಗೆ ನೀಡಿತು.

ಗಣೇಶ ವಿಸರ್ಜನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗುತ್ತಿದ್ದಂತೆ ಹಬ್ಬದ ಸಂಭ್ರಮ ಮನೆಮಾಡಿತ್ತು. ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು, ಯುವಕರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಗೋಣಿಕೊಪ್ಪದ ಗಣೇಶೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಂಟಪಗಳು ಒಂದೇ ದಿನ ಸಾಮೂಹಿಕ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಹೊಸ ದಾಖಲೆ ನಿರ್ಮಿಸಿದೆ.

ಈ ಹಿಂದೆ ಬಡಾವಣೆವಾರು ಪ್ರತ್ಯೇಕವಾಗಿ ನಡೆಯುತ್ತಿದ್ದ ವಿಸರ್ಜನಾ ಕಾರ್ಯಕ್ರಮಕ್ಕೆ ಸಾಮೂಹಿಕ ಸ್ವರೂಪ ನೀಡುವ ಪ್ರಯತ್ನ ಇದೀಗ ಫಲ ನೀಡಿದೆ. ಕಳೆದ ವರ್ಷ ನಾಲ್ಕು ಮಂಟಪಗಳು ಪಾಲ್ಗೊಂಡಿದ್ದರೆ, ಈ ಬಾರಿ ಆ ಸಂಖ್ಯೆ ಹತ್ತಕ್ಕೆ ಏರಿರುವುದು ಸಾಮೂಹಿಕ ಆಚರಣೆಯತ್ತ ಜನರ ಒಲವನ್ನು ತೋರಿಸಿದೆ.

ಗಣೇಶ ವಿಸರ್ಜನೆಗೆ ಹೊಸ ಮಾದರಿ ಕಲ್ಪಿಸುವ ಉದ್ದೇಶದಿಂದ ಪತ್ರಕರ್ತ ಜಗದೀಶ್ ಜೋಡುಬೀಟಿ, ಸತೀಶ್ ಸಿಂಗಿ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ರಾಜೇಶ್ ಮತ್ತು ಸುರೇಶ್ ರೈ ನಡೆಸಿದ ಪ್ರಯತ್ನ ಕಳೆದ ವರ್ಷದಿಂದಲೇ ಹೊಸ ರೂಪ ಪಡೆಯತೊಡಗಿತ್ತು. ವಿವಿಧ ಬಡಾವಣೆಗಳ ಗಣೇಶೋತ್ಸವ ಸಮಿತಿಗಳನ್ನು ಒಂದೇ ವೇದಿಕೆಗೆ ತಂದು, ಒಗ್ಗಟ್ಟಿನಿಂದ ವಿಸರ್ಜನೆ ನಡೆಸುವ ಚಿಂತನೆಗೆ ಈ ಬಾರಿ ಮತ್ತಷ್ಟು ಬಲ ದೊರೆತಿದೆ.

ಜಗದೀಶ್ ಜೋಡುಬೀಟಿ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪ ನಗರ ಗಣೇಶೋತ್ಸವ ಸಮಿತಿ ನಡೆಸಿದ ಸಭೆಗಳು, ಸಮಿತಿಗಳೊಂದಿಗೆ ನಡೆದ ಚರ್ಚೆಗಳು ಹಾಗೂ ಕೈಗೊಂಡ ಒಮ್ಮತದ ನಿರ್ಧಾರಗಳು ಸಾಮೂಹಿಕ ವಿಸರ್ಜನೆ ಯಶಸ್ವಿಯಾಗಲು ಪ್ರಮುಖ ಕಾರಣವಾದವು.

ಪ್ರಸನ್ನ ಗಣಪತಿ ಸೇವಾ ಸಂಘ, ಭಗತ್‌ಸಿಂಗ್ ಯುವಕ ಸಂಘ, ಉಮಾಮಹೇಶ್ವರಿ ದೇವಸ್ದಾನ, ವಿನಾಯಕ ಭಕ್ತ ಮಂಡಳಿ, ನೇತಾಜಿ ಭಕ್ತ ಮಂಡಳಿ, ವಿವೇಕಾನಂದ ಬಡಾವಣೆ ನಾಗರಿಕ ವೇದಿಕೆ, ಹರಿಶ್ಚಂದ್ರಪುರ, ಇಂಡಿಯನ್ ಯುವಕ ಸಂಘ ಸೀಗೆತೋಡು, ಸಿದ್ದಿ ವಿನಾಯಕ ಯುವಸೇನೆ ಹರಿಶ್ಚಂದ್ರಪುರ ಹಾಗೂ ವಿನಾಯಕ ಯುವಕ ಸಂಘ ಮೂರನೇ ವಿಭಾಗ ಸೇರಿದಂತೆ ಹತ್ತು ಮಂಟಪಗಳು ಮೆರವಣಿಗೆಯಲ್ಲಿ ಭಾಗವಹಿಸಿದವು.

ಯಾವುದೇ ಗೊಂದಲಕ್ಕೆ ಅವಕಾಶ ನೀಡದೆ, ಪರಸ್ಪರ ಸಹಕಾರ, ಶಿಸ್ತು ಮತ್ತು ಏಕತಾಭಾವನೆಯೊಂದಿಗೆ ನಡೆದ ಸಾಮೂಹಿಕ ವಿಸರ್ಜನಾ ಕಾರ್ಯಕ್ರಮ ಶಾಂತಿಯುತವಾಗಿ ಸಂಪನ್ನಗೊಂಡಿತು. ಗಣೇಶೋತ್ಸವ ಕೇವಲ ಧಾರ್ಮಿಕ ಆಚರಣೆಯಲ್ಲ, ಬಡಾವಣೆಗಳನ್ನು ಬೆಸೆಯುವ ಸಾಮೂಹಿಕ ಶಕ್ತಿಯೂ ಹೌದು ಎಂಬ ಸಂದೇಶವನ್ನು ಗೋಣಿಕೊಪ್ಪದ ಹತ್ತು ಮಂಟಪಗಳ ಈ ಹೆಜ್ಜೆ ಸಾರಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜನ-ಜಾನುವಾರು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಬಾಲ್ ಬ್ಯಾಡ್ಮಿಂಟನ್‌ : ವಿಭಾಗ ಮಟ್ಟಕ್ಕೆ ಸರ್ವದೈವತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು*

ಸೆಪ್ಟೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, ಸೆ.19 NEWS DESK : ಮೂರ್ನಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕರ…

*ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಮೌಲ್ಯ, ಧ್ಯಾನ ಹಾಗೂ ರಾಜಯೋಗದ ಅರಿವು*

ಸೆಪ್ಟೆಂಬರ್ 19, 2026

*ಕೊಡಗು ಸಹಕಾರ ಬ್ಯಾಂಕ್‍ಗೆ ರೂ.22.39 ಕೋಟಿ ನಿವ್ವಳ ಲಾಭ : ಶೇ.20 ಡಿವಿಡೆಂಟ್ ಘೋಷಣೆ*

ಸೆಪ್ಟೆಂಬರ್ 19, 2026

*ಕೊಡಗಿನ ಹಸಿರು ಪರಿಸರ ಸಂರಕ್ಷಿಸಿದರೆ ಕಾವೇರಿ ಉಳಿಯಲಿದೆ: ಸಿ.ಪಿ.ಮುತ್ತಣ್ಣ*

ಸೆಪ್ಟೆಂಬರ್ 19, 2026

*ರೂ.7.50 ಕೋಟಿ ಬಿಲ್ ಪಾವತಿಗೆ ಬಾಕಿ : ಸೆ.22 ರಿಂದ ಗುತ್ತಿಗೆದಾರರ ಅಹೋರಾತ್ರಿ ಪ್ರತಿಭಟನೆ*

ಸೆಪ್ಟೆಂಬರ್ 19, 2026

*ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸೆಂಟ್ ಥಾಮಸ್ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 19, 2026

*ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಸ್ಕೂಟಿ ಸವಾರನಿಗೆ ಗಾಯ*

ಸೆಪ್ಟೆಂಬರ್ 19, 2026

*ಸುಂಟಿಕೊಪ್ಪದಲ್ಲಿ ಜಾದು ಪ್ರದರ್ಶನಕ್ಕೆ ಜನಮೆಚ್ಚುಗೆ*

ಸೆಪ್ಟೆಂಬರ್ 19, 2026

*ಶರಣ್ ಪೂಣಚ್ಚ ದತ್ತಿನಿಧಿ ಸ್ವೀಕಾರ, ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕಸಾಪ ಸದಸ್ಯತ್ವ ಅಭಿಯಾನ; ಸಾಹಿತ್ಯಾಭಿರುಚಿ ಬೆಳೆಸಲು ದತ್ತಿನಿಧಿ ಸಹಕಾರಿ: ಕೇಶವ ಕಾಮತ್*

ಸೆಪ್ಟೆಂಬರ್ 19, 2026

*ಕಬಡ್ಡಿಯಿಂದ ಧೈರ್ಯ, ಶಿಸ್ತು, ನಾಯಕತ್ವ ಗುಣ ವೃದ್ಧಿ: ಎ.ಆರ್. ಮುತ್ತಣ್ಣ*

ಸೆಪ್ಟೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.