Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
  • *ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*
  • *ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*
  • *ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*
  • *ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*
  • *ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ*
  • *ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ; ವಿಪತ್ತನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆ ಮುಖ್ಯ: ಮೇಜರ್ ಪ್ರೊ. ರಾಘವ ಬಿ.*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.21 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‍ಲಾವೆಡ್ ಇಂಡಿಯಾ ಫೌಂಡೇಷನ್ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್.ಬಾಗಡೆ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ, ಮಾತನಾಡಿ ಹಿಂದಿನ ಕಾಲದಲ್ಲಿ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭವಿದ್ದರೂ ಗಂಡಸರು ಭಾಗಿಯಾಗುತ್ತಿದ್ದರು. ಆದರೆ ಇಂದು ಬದಲಾಗಿದೆ. ಮಹಿಳೆಯರಿಗೆ ನೀಡಿದ ಅವಕಾಶ ಮತ್ತು ಕಾನೂನು ಸೌಲಭ್ಯ ಪಡೆಯುವ ಮೂಲಕ ಸ್ವಾವಲಂಬಿ, ಸದೃಢವಾಗಿ ಸಬಲರಾಗುತ್ತಿರುವುದು ಸಮಾಜದಲ್ಲಿ ಬದಲಾವಣೆಗೆ ಪೂರಕ ಎಂದರು. ಮಹಿಳೆಯೊಬ್ಬರು ಶಿಕ್ಷಣ ಪಡೆದರೆ ಇಡೀ ಕುಟುಂಬವೇ ಶಿಕ್ಷಣವಂತರಾಗುತ್ತಾರೆ. ಕಾನೂನಿನ ಅರಿವು, ಸರ್ಕಾರದ ಸೌಲಭ್ಯದ ಬಗ್ಗೆ ತಿಳಿದು ಇಂದು ಮನೆಯವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪನ್ನು ಮೂಡಿಸಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದಾರೆ. ಆ ದಿಸೆಯಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡು ಕಾನೂನು ಸೇವಾ ಪ್ರಾಧಿಕಾರ ಮತ್ತು ಸಮಾಜದ ಮಧ್ಯೆ ಸೇತುವೆಯಂತೆ ಕೆಲಸ ನಿರ್ವಹಿಸಬೇಕು ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಅರೆಕಾಲಿಕ ಕಾನೂನು ಸ್ವಯಂ ಸೇವಕರು ಹಳ್ಳಿಯಿಂದ ನಗರದವರೆಗೆ ಕಾನೂನಿನ ಅರಿವಿನೊಂದಿಗೆ ಸಮಾಜದ ಪಿಡುಗುಗಳ ವಿರುದ್ಧ ಮಾಹಿತಿ ನೀಡಿ, ಪ್ರಾಧಿಕಾರಕ್ಕೆ ಸಹಾಯ ಮಾಡುತ್ತಿದ್ದು, ನೊಂದವರಿಗೆ ಕಾನೂನು ಬದ್ಧವಾಗಿ ನೆರವಾಗಬೇಕು ಎಂದು ತಿಳಿಸಿದರು. ಆಯ್ಕೆಯಾದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಪ್ರಾಧಿಕಾರದ ವತಿಯಿಂದ ಗುರುತಿನ ಚೀಟಿ ನೀಡಲಾಗುವುದು. ಅದನ್ನು ಸದುಪಯೋಗ ಪಡಿಸಿಕೊಂಡು ಕಾನೂನು ಅರಿವು, ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು. ಕೊಡಗು ಜಿಲ್ಲೆಯಲ್ಲಿ 67 ಮಂದಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿದ್ದು, ಎರಡು ದಿನಗಳ ಕಾಲ ಪುನಶ್ಚೇತನ ತರಬೇತಿ ನಡೆಯಲಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ವಕೀಲರಾದ ಕೆ.ಎಂ.ಮೀನಾಕುಮಾರಿ ಅವರು ಮಾತನಾಡಿ ‘ಅರೆಕಾಲಿಕ ಕಾನೂನು ಸ್ವಯಂ ಸೇವಕರು ಪ್ರಾಧಿಕಾರದೊಂದಿಗೆ ಕೈಜೋಡಿಸಿ ಸಮಾಜದಲ್ಲಿನ ಅನ್ಯಾಯದ ವಿರುದ್ಧ ಮಾಹಿತಿ ನೀಡಿ ಹೆಚ್ಚಿನ ಕಾನೂನು ನೆರವು ಬೇಕಾದಾಗ ಪ್ರಾಧಿಕಾರ ಸಂಪರ್ಕಿಸಿ ಪೆನೆಲ್ ವಕೀಲರಿಂದ ಪಡೆಯಬಹುದು. ನಿಸ್ವಾರ್ಥ ಸೇವೆಯ ಮೂಲಕ ಸಮಾಜ ಸೇವೆಗೆ ಇದೊಂದು ಅವಕಾಶ ಎಂದು ಅಭಿಪ್ರಾಯಪಟ್ಟರು. ಔಟ್‍ಲಾಡ್ ಇಂಡಿಯಾ ಬೆಂಗಳೂರು ತರಬೇತುದಾರರಾದ ಶಮಾ ಡಿ. ಮತ್ತು ನಿಹಾರಿಕಾ ಅವರು ಜಿಲ್ಲೆಯ ವಿವಿಧ ಸ್ಥಳಗಳಿಂದ ಬಂದಂತಹ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.21 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಆಂತರಿಕ ಗುಣಮಟ್ಟ ಭರವಸೆ ಕೋಶದ…

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಕರವೇ ವತಿಯಿಂದ ಹಣ್ಣು ಹಂಪಲು ವಿತರಣೆ*

ಸೆಪ್ಟೆಂಬರ್ 21, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹1.23 ಕೋಟಿ ಲಾಭ; ಸದಸ್ಯರಿಗೆ ಶೇ.25ರಷ್ಟು ಲಾಭಾಂಶ*

ಸೆಪ್ಟೆಂಬರ್ 21, 2026

*ಮೂರ್ನಾಡು ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕಾರ್ಯಕ್ರಮ; ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗೆ ಪ್ರೋತ್ಸಾಹ*

ಸೆಪ್ಟೆಂಬರ್ 21, 2026

*ಕೊಡವ ಭಾಷೆಗೂ ರಾಜ್ಯ ಭಾಷೆ ಮಾನ್ಯತೆ ನೀಡಲು ಸಿಎನ್‌ಸಿ ಆಗ್ರಹ*

ಸೆಪ್ಟೆಂಬರ್ 21, 2026

*ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ; ವಿಪತ್ತನ್ನು ಎದುರಿಸಲು ಧೈರ್ಯ ಮತ್ತು ಸಮಯಪ್ರಜ್ಞೆ ಮುಖ್ಯ: ಮೇಜರ್ ಪ್ರೊ. ರಾಘವ ಬಿ.*

ಸೆಪ್ಟೆಂಬರ್ 21, 2026

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆಯ ವಾರ್ಷಿಕ ಸಭೆ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.