Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ

ಸೆಪ್ಟೆಂಬರ್ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ, ಸೆ.21 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ವತಿಯಿಂದ ಭಾರತ್ ಕೇರ್ಸ್ ಸಂಸ್ಥೆ, ಸಿಎಸ್‌ಆರ್‌ಬಾಕ್ಸ್, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಹಾಗೂ ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯ (DTE) ಸಹಯೋಗದಲ್ಲಿ ‘ಹನಿವೆಲ್ ಟೆಕ್ನಾಲಜೀಸ್ ಫ್ಯೂಚರ್ ಸ್ಕಿಲ್ಸ್ ಎಡ್ಜ್ ಪ್ರೋಗ್ರಾಂ – ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಸುರಕ್ಷತೆ’ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನು ಸೆ.18ರಂದು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ವಹಿಸಿದ್ದರು. ಭಾರತ್ ಕೇರ್ಸ್ ಸಂಸ್ಥೆ, ಸಿಎಸ್‌ಆರ್‌ಬಾಕ್ಸ್‌ನ ಹಿರಿಯ ಸಹಭಾಗಿತ್ವ ಸಹಯೋಗಿ ಶ್ರೀ ಸುಬ್ರಮಣಿ ಪಿ.ವಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕೃತಕ ಬುದ್ಧಿಮತ್ತೆ (AI) ಮತ್ತು ಸೈಬರ್ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ, ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಸಹಾಯಕ ಸಾಧನವಾಗಿ ಬೆಳೆಯುತ್ತಿದೆ. ಶಿಕ್ಷಣ, ಸಂಶೋಧನೆ, ಉದ್ಯೋಗ, ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ AI ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಕಲಿಯುವುದರೊಂದಿಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. AIಯನ್ನು ಮಾನವನಿಗೆ ಪರ್ಯಾಯವಾಗಿ ಮಾತ್ರ ಪರಿಗಣಿಸದೆ, ಮಾನವನ ಜ್ಞಾನ, ಸೃಜನಶೀಲತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಸಹಾಯಕ ಸಾಧನವಾಗಿ ಬಳಸಿಕೊಳ್ಳಬೇಕು. ಡಿಜಿಟಲ್ ಸಾಕ್ಷರತೆ, ವಿಮರ್ಶಾತ್ಮಕ ಚಿಂತನೆ, ಸಮಸ್ಯೆ ಪರಿಹಾರ, ಸಂವಹನ ಕೌಶಲ್ಯ, ಸೃಜನಶೀಲತೆ ಹಾಗೂ ಸೈಬರ್ ಸುರಕ್ಷತೆಯ ಅರಿವು ಸೇರಿದಂತೆ ವಿವಿಧ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು. :: ಮೂರು ವರ್ಷಗಳ ತಿಳಿವಳಿಕೆ ಒಪ್ಪಂದ ::  ಕಾರ್ಯಕ್ರಮದ ಸಂದರ್ಭದಲ್ಲಿ ಭಾರತ್ ಕೇರ್ಸ್ ಸಂಸ್ಥೆ ಮತ್ತು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ನಡುವೆ ಮೂರು ವರ್ಷಗಳ ಅವಧಿಗೆ ತಿಳಿವಳಿಕೆ ಒಪ್ಪಂದ (ಎಂಒಯು) ಮಾಡಿಕೊಳ್ಳಲಾಯಿತು. ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗೋನ್ಮುಖ ಹಾಗೂ ಭವಿಷ್ಯಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ವಿವಿಧ ತರಬೇತಿ ಮತ್ತು ಕಲಿಕಾ ಅವಕಾಶಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. AI, ಸೈಬರ್ ಸುರಕ್ಷತೆ ಹಾಗೂ ಡಿಜಿಟಲ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಅರಿವು ಮತ್ತು ಕೌಶಲ್ಯ ತರಬೇತಿ ನೀಡುವುದರೊಂದಿಗೆ ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಹಾಗೂ ವೃತ್ತಿ ಸಿದ್ಧತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ. ಸಂಪನ್ಮೂಲ ವ್ಯಕ್ತಿ  ಸುಬ್ರಮಣಿ ಪಿ.ವಿ. ಅವರು AIಯ ಮೂಲಭೂತ ಪರಿಕಲ್ಪನೆಗಳು, ಪ್ರಾಯೋಗಿಕ ಬಳಕೆ, ಭವಿಷ್ಯದ ಉದ್ಯೋಗ ಕ್ಷೇತ್ರದಲ್ಲಿ AIಯ ಪಾತ್ರ ಹಾಗೂ ಸೈಬರ್ ಸುರಕ್ಷತೆಯ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. IQAC ಸಂಚಾಲಕಿ ಡಾ. ಸೌಮ್ಯ ಕೆ. ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡಾ. ಶೈಲಶ್ರೀ ಕೆ. ಹಾಗೂ  ಅಲೋಕ್ ಬೆಜೈ, ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಯುವ ರೆಡ್‌ಕ್ರಾಸ್ (YRC) ಘಟಕಗಳ ಕಾರ್ಯಕ್ರಮಾಧಿಕಾರಿಗಳು, ಡಾ. ರೇಣುಶ್ರೀ ಎಚ್.ಕೆ., ಇಸಿಸಿ ಸಂಚಾಲಕರು ಹಾಗೂ ಇತಿಹಾಸ ವಿಭಾಗದ ಡಾ. ಚಂದ್ರಯ್ಯ ಉಪಸ್ಥಿತರಿದ್ದರು. ತೃತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಹಿತೈಷಿಣಿ ಪ್ರಾರ್ಥಿಸಿದರು. ತೃತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ AI, ಸೈಬರ್ ಸುರಕ್ಷತೆ ಹಾಗೂ ಭವಿಷ್ಯದ ಕೌಶಲ್ಯಗಳ ಕುರಿತು ಅರಿವು ಮೂಡಿಸುವುದರ ಜೊತೆಗೆ, ಮೂರು ವರ್ಷಗಳ ತಿಳಿವಳಿಕೆ ಒಪ್ಪಂದದ ಸಹಯೋಗದ ಮೂಲಕ ನಿರಂತರ ಕೌಶಲ್ಯಾಭಿವೃದ್ಧಿಗೆ ವೇದಿಕೆ ಕಲ್ಪಿಸಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.31 NEWS DESK : ಇತ್ತೀಚೆಗೆ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ನಡೆದ…

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿ: ವಿವಿಧ ತಂಡಗಳಿಂದ ಭರ್ಜರಿ ಪ್ರದರ್ಶನ; ನ.1ರಂದು ಸಮಾರೋಪ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.