ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಸ್.ಎಸ್. ದಿವಿತ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಎಸ್.ಎಸ್. ದಿವಿತ್ ಅವರು ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಶಿವರಾಜ್ ಹಾಗೂ ಭವ್ಯ ಅವರ ಪುತ್ರರಾಗಿದ್ದು, ಪಾಲಿಬೆಟ್ಟದ ಲೂಡ್ಸ್ ಹಿಲ್ ಕಾನ್ವೆಂಟ್ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.








