Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*
  • *ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*
  • *ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*
  • *ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*
  • *ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*
  • *ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*
  • *ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*

ಸೆಪ್ಟೆಂಬರ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.22 NEWS DESK : ಯೋಗಾಸನದಲ್ಲಿ ಈಗಾಗಲೆ ವಿವಿಧ ಹದಿನೈದು ದಾಖಲೆಗಳನ್ನು ಮಾಡಿರುವ ಕೊಡಗಿನ ಹೆಮ್ಮೆಯ ಕುವರಿ ಸಿಂಚನಾರಿಂದ ನೂತನ ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ ಕಾರ್ಯಕ್ರಮ ಸೆ.25ರಂದು ಮದೆ ಗ್ರಾಮದ ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮದೆನಾಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಗೋಳಿಕಜೆ ಪಿ.ಧನಂಜಯ ಅವರು, ಮದೆನಾಡಿನ ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಿಂಚನಾ ಅವರು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸೇರ್ಪಡೆಯ ಸಲುವಾಗಿ ಯೋಗಾಸನಗಳನ್ನು ಪ್ರದರ್ಶಿಸಲಿದ್ದಾರೆ ಎಂದು ತಿಳಿಸಿದರು. ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ಕಲಾ ಮಂದಿರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಯಶೋಧರ ಬಿ.ಜೆ. ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್.ಪೊನ್ನಣ್ಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ನ ಏಷ್ಯಾ ಹೆಡ್ ಡಾ.ಮನಿಷ್ ವೈಷ್ಣೋವಿ ಅವರ ಉಪಸ್ಥಿತಿಯಲ್ಲಿ ಸಿಂಚನ ಅವರು ಯೋಗಾಸನಗಳನ್ನು ಪ್ರದರ್ಶಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ನಿವೃತ್ತ ಪ್ರಾಂಶುಪಾಲ, ಸಾಹಿತಿ ಬಿ.ಆರ್.ಜೋಯಪ್ಪ, ನಿವೃತ್ತ ಶಿಕ್ಷಕ ಎಂ.ಎಸ್.ಶಿವರಾವ್, ಯೋಗ ಗುರು ಕೆ.ಕೆ.ಮಹೇಶ್ ಕುಮಾರ್, ರೊಟರಿ ಮಿಸ್ಟಿ ಹಿಲ್ಸ್ ನಿರ್ದೇಶಕ ಅನಿಲ್ ಹೆಚ್.ಟಿ. ಹಾಗೂ ನಾಪೋಕ್ಲು ಬಿಲ್ಲವ ಸಂಘದ ಅಧ್ಯಕ್ಷ ಬಿ.ಪ್ರದೀಪ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಿಂಚನಾರ ತಾಯಿ ಬಿ.ಎಸ್.ರೇಣುಕ ಕೀರ್ತಿಕುಮಾರ್ ಮಾತನಾಡಿ, ಈ ಬಾರಿ ಮಗಳು “ಡಿಂಬಾಸನ”ದಲ್ಲಿ 5ನಿಮಿಷಗಳ ಕಾಲ ಚಲಿಸುವ, ಧನುರಾಸನದಲ್ಲಿ 5 ನಿಮಿಷಗಳ ಕಾಲ ಸುತ್ತುವ ಹಾಗೂ ಡಿಂಬಾಸನ ಮತ್ತು ಸುಪ್ತ ಡಿಂಬಾಸನವನ್ನು ನಿಮಿಷಕ್ಕೆ 10 ಬಾರಿ ಪ್ರದರ್ಶಿಸುವ ಮೂರು ಯೋಗಾಸನಗಳನ್ನು ಗೋಲ್ಡನ್ ಬುಕ್ ಆಫ್ ರೆಕಾರ್ಡ್‍ಗಾಗಿ ಪ್ರದರ್ಶಿಸಲಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಯೋಗಪಟು ಸಿಂಚನ, ದೇವರಕೊಲ್ಲಿಯ ಶ್ರೀಚಾಮುಂಡೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಯಶೋಧರ ಬಿ.ಜೆ., ಯೋಗಗುರು ಕೆ.ಕೆ.ಮಹೇಶ್ ಕುಮಾರ್ ಹಾಗೂ ಮದೆಮಹೇಶ್ವರ ಶಾಲೆಯ ನಿವೃತ್ತ ಶಿಕ್ಷಕ ಎಂ.ಎಸ್.ಶಿವರಾವ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆಕಾಡು ಬಳಿಯ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ :  ರಸ್ತೆ ಸುರಕ್ಷತಾ ಮಾರ್ಗಸೂಚಿ ಅಳವಡಿಕೆಗೆ ಸೂಚನೆ*

ಸೆಪ್ಟೆಂಬರ್ 22, 2026

*ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*

ಸೆಪ್ಟೆಂಬರ್ 22, 2026

*ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*

ಸೆಪ್ಟೆಂಬರ್ 22, 2026

*ಹಬ್ಬಗಳನ್ನು ಎಲ್ಲರ ಜೊತೆಗೂಡಿ ಆಚರಿಸಿದಾಗ ಮನಸ್ಸಿಗೆ ಸಂತೋಷ ಲಭಿಸುತ್ತದೆ : ತಾತಂಡ ಜ್ಯೋತಿ ಪ್ರಕಾಶ್*

ಸೆಪ್ಟೆಂಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.22 NEWS DESK :  ಹಬ್ಬಗಳನ್ನು ಎಲ್ಲರೊಂದಿಗೆ ಒಗ್ಗಟ್ಟಾಗಿ ಸೇರಿ ಆಚರಿಸುವುದರಿಂದ ಸಿಗುವ ಸಂತಸವೇ ವಿಭಿನ್ನ ಎಂದು ವಿರಾಜಪೇಟೆ…

*ಮಡಿಕೇರಿ ನಗರಸಭೆಯ ಪೌರಾಯುಕ್ತರ ಕಚೇರಿ, ಮನೆ ಮೇಲೆ ಲೋಕಾಯುಕ್ತರ ದಾಳಿ*

ಸೆಪ್ಟೆಂಬರ್ 22, 2026

*ಮೂರು “ಗೋಲ್ಡನ್ ಬುಕ್ ಆಪ್ ರೆಕಾರ್ಡ್” ಸೇರ್ಪಡೆಯ ಯೋಗ ಪ್ರದರ್ಶನ*

ಸೆಪ್ಟೆಂಬರ್ 22, 2026

*ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಸೆ.24 ರಂದು ಬಿಜೆಪಿಯಿಂದ ಪ್ರತಿಭಟನೆ*

ಸೆಪ್ಟೆಂಬರ್ 22, 2026

*ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*

ಸೆಪ್ಟೆಂಬರ್ 22, 2026

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.