ಭಾಗಮಂಡಲ, NEWS DESK ಸೆ.23: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಸಂಪಾಜೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಂಡರ್–14 ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಉಡುಪಿಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಕ್ರೀಡಾ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ. ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ಕೆ. ಪಿ. ಸಂತೋಷ ವ್ಯಕ್ತಪಡಿಸಿದ್ದಾರೆ.








