ಶ್ರೀಮಂಗಲ, NEWS DESK ಸೆ.23: ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿ ವ್ಯಾಪ್ತಿಯ ನಾಗರಿಕರ ಕುಂದು-ಕೊರತೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ಆಯೋಜಿಸಲಾಗಿದೆ.
ಸೆಪ್ಟೆಂಬರ್ 26ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀಮಂಗಲದ ಕೃಷ್ಣ ಕನ್ವೆನ್ಷನ್ ಹಾಲ್ನಲ್ಲಿ ಅಭಿಯಾನ ನಡೆಯಲಿದೆ. ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.
ಶ್ರೀಮಂಗಲ ಹೋಬಳಿಯ ಎಲ್ಲಾ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು-ಕೊರತೆಗಳ ಕುರಿತು ಅಹವಾಲುಗಳನ್ನು ಸಲ್ಲಿಸಿ, ಪರಿಹಾರ ಪಡೆದುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪ್ರಜಾಸೇವೆ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕೋರಲಾಗಿದೆ.








