Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ಮಕ್ಕಳ ಆರೋಗ್ಯಕರ ಬೆಳವಣಿಗೆಗಾಗಿ ಸಮತೋಲಿತ ಆಹಾರ, ಸ್ವಚ್ಛತೆ ಮತ್ತು ಉತ್ತಮ ಆಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಸನತ್ ಕುಮಾರ್ ಅವರು ಸಲಹೆ ನೀಡಿದರು. ಮಕ್ಕಳಲ್ಲಿ ಪೌಷ್ಟಿಕತೆ, ಸಮತೋಲಿತ ಆಹಾರ, ಆರೋಗ್ಯಕರ ಬೆಳೆವಣಿಗೆ ಹಾಗೂ ಅಪೌಷ್ಠಿಕತೆಯ ತಡೆಗಟ್ಟುವಿಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗ ಹಾಗೂ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಮಕ್ಕಳ ಹೊರ ರೋಗಿ ವಿಭಾಗದ ಮುಂಭಾಗದಲ್ಲಿ  ನಡೆದ ‘ಪೋಷಣ ಮಾಸಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದಿರು ಮತ್ತು ಸಾರ್ವಜನಿಕರಿಗೆ ಸ್ಥಳೀಯವಾಗಿ ಲಭ್ಯವಿರುವ ಪೌಷ್ಟಿಕ ಆಹಾರ ಪದಾರ್ಥಗಳ ಬಳಕೆ, ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು. ಮಕ್ಕಳ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ಡಿ.ಆರ್.ಪುರುಷೋತ್ತಮ್ ಅವರು ಮಾತನಾಡಿ, ಮಗುವಿನ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಗಾಗಿ ಎರಡು ವರ್ಷಗಳವರೆಗೆ ಎದೆ ಹಾಲುಣಿಸುವುದು ಅವಶ್ಯಕ. ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ತಾಯಿಗೆ ಸಾಕಷ್ಟು ನೀರು ಹಾಗೂ ಉತ್ತಮ ಆಹಾರ ನೀಡಬೇಕು ಮತ್ತು ಜಂಕ್ ಫುಡ್ ಸೇವನೆ ನಿಲ್ಲಿಸಬೇಕು. (ಎನ್‍ಆರ್‍ಸಿ) ಪೌಷ್ಡಿಕಾಂಶದ ಪುನರ್ವಸತಿ ಕೇಂದ್ರ ವಿಭಾಗದಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸೆಯೊಂದಿಗೆ, 5 ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ಸರ್ಕಾರವು ಪ್ರತಿ ತಿಂಗಳು 375 ರೂಪಾಯಿಗಳ ವೇತನ ನಷ್ಟ ಪರಿಹಾರವನ್ನು ಒದಗಿಸುತ್ತಿದೆ ಎಂದು ಹೇಳಿದರು. ಮಕ್ಕಳ ಹಿರಿಯ ತಜ್ಞರಾದ ಡಾ.ರವಿಚಂದ್ರ ಅವರು ಮಾತನಾಡಿ, ಪೌಷ್ಠಿಕ ಆಹಾರ ಆರೋಗ್ಯಕರ ಸಮಾಜದ ಅಡಿಪಾಯವಾಗಿದ್ದು, ಮಕ್ಕಳ ಪೋಷಣೆ ಹಾಗೂ ಪೌಷ್ಠಿಕಾಂಶದ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದರು. ಸ್ತನ್ಯಪಾನವು ಸರಿಯಾದ ಮತ್ತು ಕ್ರಮಬದ್ಧವಾದ ರೀತಿಯಲ್ಲಿ ನಡೆಯಬೇಕು. ಜೊತೆಗೆ ರಕ್ತಹೀನತೆಯ ಬಗ್ಗೆಯೂ ಗಮನಹರಿಸಬೇಕು. ತಾಯಿ ಮತ್ತು ಮಗು ಇಬ್ಬರೂ ಸಾಕಷ್ಟು ಪೌಷ್ಟಿಕ, ಸಸಾರಜನಕ ಮತ್ತು ಜೀವಸತ್ವ ಪದಾರ್ಥಗಳನ್ನು ಸೇವಿಸಬೇಕು. ಮಗುವಿನಲ್ಲಿ ಪೌಷ್ಟಿಕಾಂಶ ಕಡಿಮೆ ಇರುವುದು ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಬೇಕು. ಮಗುವಿನ ಆರೈಕೆಯನ್ನು ಹೇಗೆ ಮಾಡಬೇಕೆಂಬುದರ ಕುರಿತು ಅವರು ಸೂಕ್ತ ಸಲಹೆಗಳೊಂದಿಗೆ ಮಾರ್ಗದರ್ಶನ ಹಾಗೂ ಚಿಕಿತ್ಸೆ ನೀಡುತ್ತಾರೆ ಮತ್ತು ಇದರ ಸದುಪಯೋಗ ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಹೇಳಿದರು. ಮಕ್ಕಳ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸಲ್ಮ ಶಾಜಿಯಾ ಅವರು ಮಾತನಾಡಿ, ‘ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ, ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯುವುದೇ ಅಭಿಯಾನದ ಮುಖ್ಯ ಉದ್ದೇಶ. ತಾಯಂದಿರು ದೈನಂದಿನ ಆಹಾರದಲ್ಲಿ ಸಿರಿಧಾನ್ಯ, ಹಸಿರು ತರಕಾರಿ, ಸೊಪ್ಪು ಹಾಗೂ ಹಣ್ಣು-ಹಂಪಲು ಬಳಸಬೇಕು. ಅಂಗನವಾಡಿಗಳಲ್ಲಿ ದೊರೆಯುವ ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಮಗುವಿಗೆ 6 ರಿಂದ 8 ತಿಂಗಳ ವಯಸ್ಸಿನಲ್ಲೇ ಅಕ್ಕಿ ಮತ್ತು ರಾಗಿ ಆಧಾರಿತ ಆಹಾರಗಳನ್ನು ನೀಡಲು ಪ್ರಾರಂಭಿಸಬೇಕು, ಮಗುವಿನ ಜೀರ್ಣಕ್ರಿಯೆಗೆ ಅನುಕೂಲವಾಗುವಂತೆ ಈ ಆಹಾರಗಳು ನಯವಾಗಿರಬೇಕು. 8 ತಿಂಗಳ ನಂತರ ನಯವಾದ ಆಹಾರದಿಂದ ಸ್ವಲ್ಪ ಗಟ್ಟಿಯಾದ ಆಹಾರಕ್ಕೆ ಬದಲಾಯಿಸಬಹುದು ಹಾಗೂ ಮೊಟ್ಟೆಯ ಬಿಳಿ ಭಾಗವನ್ನು ನೀಡಬಹುದು. 9 ತಿಂಗಳ ನಂತರ ಮಗುವಿನ ಬೆಳವಣಿಗೆಗಾಗಿ ಮೊಟ್ಟೆಯ ಬಿಳಿ ಮತ್ತು ಹಳದಿ ಭಾಗ ಎರಡನ್ನೂ ನೀಡಬಹುದು. 2 ವರ್ಷದವರೆಗೆ ಕಡ್ಡಾಯವಾಗಿ ಎದೆ ಹಾಲುಣಿಸಬೇಕು. ಹೊರಗಿನ ಆಹಾರಗಳನ್ನು ನೀಡುವುದನ್ನು ನಿಲ್ಲಿಸಿ, ಮನೆಯಲ್ಲಿ ತಯಾರಿಸಿದ ಆಹಾರವನ್ನೇ ನೀಡುವುದು ಅತ್ಯಗತ್ಯ ಎಂದರು. ಜಿಲ್ಲಾ ಆಸ್ಪತ್ರೆಯ ಮೆಟ್ರೋನ್ ಲಕ್ಷ್ಮೀ ಅವರು ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ನವಜಾತ ಶಿಶುವು ಆರೋಗ್ಯವಂತವಾಗಿರಬೇಕು. ಇದಕ್ಕಾಗಿ ಗರ್ಭಿಣಿಯರು ಉತ್ತಮ ಗುಣಮಟ್ಟದ ಆಹಾರ ಮತ್ತು ಪೌಷ್ಟಿಕಾಂಶಯುಕ್ತ ಪದಾರ್ಥ ಸೇವಿಸಬೇಕು. ತಾಯಿ ಮತ್ತು ಮಗು ಇಬ್ಬರಿಗೂ ಸೂಕ್ತ ಆರೈಕೆ ಸಿಗುವುದು ಅತ್ಯಗತ್ಯ. ಯಾವುದೇ ಸಮಸ್ಯೆ ಕಂಡುಬಂದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ (ಎನ್‍ಆರ್‍ಸಿ) ಪೌಷ್ಟಿಕಾಂಶದ ಪುನರ್ವಸತಿ ಕೇಂದ್ರ ವಿಭಾಗಕ್ಕೆ ಭೇಟಿ ನೀಡಿ ಉತ್ತಮ ಸೌಲಭ್ಯಗಳನ್ನು ಸದುಪಯೊಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲಾ ್ಲಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ಅವರು ಮಾತನಾಡಿ, ಗರ್ಭಿಣಿಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು 6 ತಿಂಗಳವರೆಗೆ ತಪ್ಪದೇ ಕ್ರಮಬದ್ಧವಾಗಿ ಎದೆ ಹಾಲುಣಿಸಬೇಕು. ಇದು ತಾಯಿ ಮತ್ತು ಮಗುವಿನಲ್ಲಿ ರಕ್ತಹೀನತೆ ಹಾಗೂ ಅಪೌಷ್ಟಿಕತೆ ತಡೆಯಲು ಸಹಾಯ ಮಾಡುತ್ತದೆ ಎಂದು ವಿವರಿಸಿದರು. ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗಾಗಿ ಸರ್ಕಾರವು ಮಗುವಿನ ದಾಖಲಾತಿ ನೋಂದಾಯಿಸಿದ ನಂತರ (ಎನ್‍ಆರ್‍ಸಿ) ಪೌಷ್ಟಿಕಾಂಶದ ಪುನರ್ವಸತಿ ಕೇಂದ್ರ ವಿಭಾಗದಿಂದ 14 ದಿನಗಳ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುತ್ತದೆ ಹಾಗೂ ಪೋಷಕರಿಗೆ ವೇತನ ನಷ್ಟ ಪರಿಹಾರ ನೀಡಲಾಗುತ್ತದೆ ಎಂದು ಹೇಳಿದರು. ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಮೇಘಶ್ರೀ, ಮೇಲ್ವಿಚಾರಕರಾದ ಪ್ರಫುಲ್ ಮೆಂಡನ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ತಾಯಂದಿರು, ಗರ್ಭಿಣಿಯರು ಮತ್ತು ಇತರರು ಇದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ನಿರೂಪಿಸಿ, ಸ್ವಾಗತಿಸಿ ಮತ್ತು ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.