Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*
  • *ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*
  • *ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
  • *ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*
  • *ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*
  • *ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*
  • *ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*
  • *ಕುಶಾಲನಗರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*
  • *ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ*
  • *ಸುಂಟಿಕೊಪ್ಪದಲ್ಲಿ ಅದ್ಧೂರಿಯಾಗಿ 62ನೇ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಸೆ.24: ವಿಪತ್ತು ನಿರ್ವಹಣೆಯ ಕೌಶಲ್ಯ, ಶಿಕ್ಷಣ ಹಾಗೂ ತರಬೇತಿ ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ ಎಂದು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಹೇಳಿದರು.

ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯುಎಸಿ, ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಎನ್‌ಎಸ್‌ಎಸ್ ದಿನಾಚರಣೆ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರಾದ್ಯಂತ ಎನ್‌ಡಿಆರ್‌ಎಫ್ ತಂಡವು ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ಜನರ ಜೀವ ರಕ್ಷಣೆ ಸೇರಿದಂತೆ ವಿವಿಧ ರಕ್ಷಣಾ ಕಾರ್ಯಗಳಲ್ಲಿ ಸಮಯಪ್ರಜ್ಞೆಯಿಂದ ಸೇವೆ ಸಲ್ಲಿಸುತ್ತಿದೆ. ವಿದ್ಯಾರ್ಥಿಗಳು ಮೊದಲಿನಿಂದಲೇ ಇಂತಹ ತರಬೇತಿಗಳನ್ನು ಪಡೆಯುವುದರಿಂದ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಿಕೊಳ್ಳಲು ಸಾಧ್ಯವಾಗುತ್ತದೆ. ರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ಎನ್‌ಡಿಆರ್‌ಎಫ್ ತಂಡವು ಕಾಲೇಜು ಮಟ್ಟದಲ್ಲಿಯೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎನ್‌ಡಿಆರ್‌ಎಫ್‌ನ ಇನ್ಸ್‌ಪೆಕ್ಟರ್ ಹಾಗೂ ಟೀಮ್ ಕಮಾಂಡರ್ ಪ್ರದೀಪ್ ಕುಮಾರ್ ಮಾತನಾಡಿ, ಎನ್‌ಡಿಆರ್‌ಎಫ್ ವತಿಯಿಂದ ಹಲವು ಸಾಮಾಜಿಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿ ಜೀವ ರಕ್ಷಿಸುವ ಕೌಶಲ್ಯವನ್ನು ಹೊಂದಿರುವುದು ಅತ್ಯಂತ ಮುಖ್ಯವಾಗಿದೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಎನ್‌ಡಿಆರ್‌ಎಫ್ ತಂಡವು ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ನಿರ್ವಹಿಸುತ್ತಿದೆ ಎಂದರು.

ಮತ್ತೋರ್ವ ಅತಿಥಿ ಎನ್‌ಡಿಆರ್‌ಎಫ್ ತಂಡದ ರೆಸ್ಕ್ಯೂ ಕಮಾಂಡರ್ ನಾಗರಾಜು ಎ.ಪಿ. ಮಾತನಾಡಿ, ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆಯ ಜ್ಞಾನ ಅವಶ್ಯಕವಾಗಿದೆ. ಸಮಯಪ್ರಜ್ಞೆ, ಧೈರ್ಯ ಹಾಗೂ ಶಿಸ್ತನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ವಿಪತ್ತುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು. ವಿಪತ್ತು ಸಂಭವಿಸಿದಾಗ ಗಾಬರಿಯಾಗದೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವುದು ಮುಖ್ಯ. ತುರ್ತು ಪರಿಸ್ಥಿತಿಯಲ್ಲಿ ಹೇಗೆ ಕಾರ್ಯನಿರ್ವಹಿಸಬೇಕು ಹಾಗೂ ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಹೊಂದಿರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಪತ್ತು ಸಂಭವಿಸಿದ ಸಂದರ್ಭಗಳಲ್ಲಿ ಎನ್‌ಡಿಆರ್‌ಎಫ್ ತಂಡವು ನಿರ್ವಹಿಸುವ ರಕ್ಷಣಾ ಕಾರ್ಯಗಳನ್ನು ನಾವು ನೋಡಿದ್ದೇವೆ. ಸಮಯಪ್ರಜ್ಞೆಯಿಂದ ಆಪತ್ತನ್ನು ನಿಯಂತ್ರಿಸಿ ಜೀವ ರಕ್ಷಿಸುವ ಕಾರ್ಯವನ್ನು ತಂಡ ಮಾಡುತ್ತಿದೆ. ಎನ್‌ಎಸ್‌ಎಸ್ ದಿನಾಚರಣೆ ಪ್ರಯುಕ್ತ ಕಾಲೇಜಿನಲ್ಲಿ ಆಯೋಜಿಸಿರುವ ಈ ತರಬೇತಿ ಕಾರ್ಯಕ್ರಮದಿಂದ ವಿದ್ಯಾರ್ಥಿಗಳಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಲಿದೆ ಎಂದರು.

ಕಾಲೇಜಿನ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಎನ್‌ಎಸ್‌ಎಸ್ ಘಟಕದ ಸ್ವಯಂಸೇವಕಿ ಪ್ರಕೃತಿ ಕಾರ್ಯಕ್ರಮ ನಿರೂಪಿಸಿದರು. ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್ ವಂದಿಸಿದರು.

ಕಾರ್ಯಕ್ರಮದಲ್ಲಿ ಎನ್‌ಡಿಆರ್‌ಎಫ್ ತಂಡದ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಹಾಗೂ ನಾಗರಾಜು ಅವರನ್ನು ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ಪದವಿ ಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬಾಕ್ಸ್

ಎನ್‌ಡಿಆರ್‌ಎಫ್‌ನಿಂದ ಪ್ರಾತ್ಯಕ್ಷಿಕೆ ಮೂಲಕ ವಿಪತ್ತು ನಿರ್ವಹಣಾ ತರಬೇತಿ

ಸಭಾ ಕಾರ್ಯಕ್ರಮದ ಬಳಿಕ ಎನ್‌ಡಿಆರ್‌ಎಫ್ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು. ರೆಸ್ಕ್ಯೂ ಕಮಾಂಡರ್ ನಾಗರಾಜು ಎ.ಪಿ. ಅವರು ವಿಪತ್ತು ನಿರ್ವಹಣೆಯ ವಿವಿಧ ವಿಧಾನಗಳು ಹಾಗೂ ಹಂತಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದರು.

ರಕ್ತಸ್ರಾವವಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಕಣ್ಣಿಗೆ ಗಾಯವಾದಾಗ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ, ಹೃದಯಾಘಾತ ಸಂದರ್ಭದಲ್ಲಿ ಸಿಪಿಆರ್ ಮಾಡುವ ವಿಧಾನ, ಸಿಡಿಲು ಬಡಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು, ಬೆಂಕಿ ಅವಘಡವನ್ನು ನಿಯಂತ್ರಿಸುವ ವಿಧಾನ ಹಾಗೂ ಮುಂಜಾಗ್ರತಾ ಕ್ರಮಗಳು ಮತ್ತು ಹಾವು ಕಚ್ಚಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.

ಪ್ರವಾಹ, ಭೂಕುಸಿತ, ಭೂಕಂಪ ಹಾಗೂ ಅಪಘಾತದಂತಹ ಸಂದರ್ಭಗಳನ್ನು ನಿಭಾಯಿಸುವ ವಿಧಾನಗಳನ್ನೂ ಅಧಿಕಾರಿಗಳು ವಿವರಿಸಿದರು. ತುರ್ತು ಪರಿಸ್ಥಿತಿಯಲ್ಲಿ ಜೀವ ರಕ್ಷಿಸುವ ಕಾರ್ಯವನ್ನು ಹೇಗೆ ಕೈಗೊಳ್ಳಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತಿಳಿಸಿಕೊಡಲಾಯಿತು.

ಎನ್‌ಡಿಆರ್‌ಎಫ್ ಅಧಿಕಾರಿಗಳು ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವರ್ಗದವರೊಂದಿಗೆ ಪ್ರಾತ್ಯಕ್ಷಿಕೆ ನಡೆಸಿ ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಸೇರಿದಂತೆ ಪದವಿ ಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*

ಸೆಪ್ಟೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.24: ಸ್ವಯಂ ಸೇವೆಯು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದ್ದು, ವಿದ್ಯಾರ್ಥಿಗಳಿಗೆ ಸಮಾನತೆ, ನೈರ್ಮಲ್ಯ, ನಾಯಕತ್ವ ಗುಣ, ಶಿಸ್ತು…

*ವಿಪತ್ತು ನಿರ್ವಹಣೆಯ ತರಬೇತಿ ಹಾಗೂ ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕ: ರೆ. ಫಾ. ಮದಲೈ ಮುತ್ತು*

ಸೆಪ್ಟೆಂಬರ್ 24, 2026

*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*

ಸೆಪ್ಟೆಂಬರ್ 24, 2026

*ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ತಿರಸ್ಕಾರ*

ಸೆಪ್ಟೆಂಬರ್ 24, 2026

*ದೊಡ್ಡಮಳ್ತೆ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿಗೆ ತೀವ್ರ ಆಕ್ಷೇಪ*

ಸೆಪ್ಟೆಂಬರ್ 24, 2026

*ಬೆಟ್ಟದಳ್ಳಿ, ಶಾಂತಳ್ಳಿ ವಿಶೇಷ ಗ್ರಾಮಸಭೆ: ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ನಿರ್ಣಯ*

ಸೆಪ್ಟೆಂಬರ್ 24, 2026

*ಕುಶಾಲನಗರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ*

ಸೆಪ್ಟೆಂಬರ್ 24, 2026

*ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ*

ಸೆಪ್ಟೆಂಬರ್ 24, 2026

*ಸುಂಟಿಕೊಪ್ಪದಲ್ಲಿ ಅದ್ಧೂರಿಯಾಗಿ 62ನೇ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ*

ಸೆಪ್ಟೆಂಬರ್ 24, 2026

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.