Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ  ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ

ಸೆಪ್ಟೆಂಬರ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಸೆ.25 : ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ಕೆ.ಎಸ್.ಭರತ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇವರೊಂದಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಉಷಾರಾಣಿ ಹಾಗೂ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ವಿ.ಭವಾನಿ ಅವರು ಕೂಡ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಭಿನಂದಿಸಿದರು. ಈ ಮೂವರನ್ನು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಪರಿಗಣಿಸುವಂತೆ ಸೆ.10ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. *ಕೊಡಗಿನ ಭರತ್ ಕುಮಾರ್* ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ವಿರಾಜಪೇಟೆಯವರಾಗಿದ್ದು, ಬೋರೇಗೌಡ ಕಾಂಪ್ಲೆಕ್ಸ್ ಮಾಲೀಕರು, ಜಿಲ್ಲಾ ಪರಿಷತ್ ಮಾಜಿ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಬಿ.ಶಾಂತಪ್ಪ ಹಾಗೂ ರತ್ನಮ್ಮ ಅವರ ಜೇಷ್ಠ ಪುತ್ರರಾಗಿದ್ದಾರೆ. ಇವರು 2002 ರಿಂದ 2004 ರವರೆಗೆ ಜಮ್ಶೆಡ್ ಪುರದ ಟಾಟಾ ಸ್ಟೀಲ್ ಸಂಸ್ಥೆಯಲ್ಲಿ ಮುಖ್ಯ ಕಾನೂನು ಸಲಹೆಗಾರರಾಗಿ, 2004 ರಿಂದ 2015 ರವರೆಗೆ ಕರ್ನಾಟಕ ಹೈಕೋರ್ಟ್ ನ ವಕೀಲರಾಗಿ ಕಾರ್ಯನಿರ್ವಹಿಸಿದರು. 2015ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾಗಿ 2019 ರವರೆಗೆ ತುಮಕೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. 2019 ರಿಂದ 2020ರ ವರೆಗೆ ಮೈಸೂರು ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಣೆ, 2020 ರಿಂದ ಕರ್ನಾಟಕ ಹೈಕೋರ್ಟ್ ನಲ್ಲಿ ರಿಜಿಸ್ಟ್ರಾರ್ ಜುಡಿಶಿಯಲ್, ರಿಜಿಸ್ಟ್ರಾರ್ ವೆಜಿಲೆನ್ಸ್ ಹಾಗೂ ರಿಜಿಸ್ಟ್ರಾರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದಾರೆ. 2026 ಜೂನ್ 1 ರಿಂದ ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಒಂದರಿಂದ ಏಳನೇ ತರಗತಿಯವರೆಗೆ ಅಮ್ಮತ್ತಿಯ ಗುಡ್ ಶಫರ್ಡ್ ಶಾಲೆ, ಎಂಟನೇ ತರಗತಿಯಿಂದ ಪಿಯುಸಿಯವರೆಗೆ ಅಳಿಕೆಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡಿದರು. ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ವಕೀಲ ಪದವಿ ಪಡೆದರು. ಕಾಲೇಜ್ ನ ಕುಲಪತಿಗಳಾದ ಅಂದಿನ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಆನಂದ್ ಅವರಿಂದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯೊಂದಿಗೆ ಚಿನ್ನದ ಪದಕ ಪಡೆದಿರುವ ಹೆಗ್ಗಳಿಕೆಗೆ ಕೆ.ಎಸ್.ಭರತ್ ಕುಮಾರ್ ಪಾತ್ರಾಗಿದ್ದಾರೆ. ತಮ್ಮ ಪುತ್ರನ ಸಾಧನೆಯ ಬಗ್ಗೆ ಕೆ.ಬಿ.ಶಾಂತಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.