Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು, NEWS DESK ಸೆ.26: ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಕೃಷಿ ಇಲಾಖೆಯ ‘ಆತ್ಮ’ ಯೋಜನೆಯಡಿ ನಾಪೋಕ್ಲು ಗ್ರಾಮದ ಮಹಿಳಾ ಸಮಾಜದ ಸದಸ್ಯರಿಗೆ ಆಯೋಜಿಸಲಾಗಿದ್ದ ಅಣಬೆ ಬೇಸಾಯದ ‘ರೈತ ಕ್ಷೇತ್ರ ಪಾಠಶಾಲೆ’ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಅಣಬೆ ಬೇಸಾಯದ ಪ್ರಾಯೋಗಿಕ ತರಬೇತಿ ಹಾಗೂ ಅಣಬೆ ಕಟಾವು ಪ್ರಕ್ರಿಯೆ ನಡೆಯಿತು. ಅಣಬೆ ಬೀಜಗಳನ್ನು ಬಿಸಿ ನೀರಿನಲ್ಲಿ ಸಂಸ್ಕರಿಸಿ, ಸಿದ್ಧಪಡಿಸಿದ ಹುಲ್ಲಿನೊಂದಿಗೆ ಪಾಲಿಥಿನ್ ಚೀಲಗಳಲ್ಲಿ ತುಂಬಿ 21 ದಿನಗಳ ಕಾಲ ಕತ್ತಲೆ ಕೊಠಡಿಯಲ್ಲಿ ಇರಿಸಲಾಗಿತ್ತು. ಬಳಿಕ 5ರಿಂದ 8 ದಿನಗಳ ಕಾಲ ಬೆಳಕಿನ ವಾತಾವರಣದಲ್ಲಿಟ್ಟು ಪ್ರತಿದಿನ ಎರಡು ಬಾರಿ ನೀರು ಸಿಂಪಡಿಸಿ ಬೆಳೆಸಲಾಗಿದ್ದ ಅಣಬೆಯನ್ನು ಕ್ಷೇತ್ರ ಪಾಠಶಾಲೆಯ ಭಾಗವಾಗಿ ಕಟಾವು ಮಾಡಲಾಯಿತು. ಅಣಬೆ ಕೃಷಿಗೆ ಅಗತ್ಯವಿರುವ ಸಾಮಗ್ರಿಗಳು ಹಾಗೂ ಉಪಕರಣಗಳನ್ನು ‘ಆತ್ಮ’ ಯೋಜನೆಯ ವತಿಯಿಂದ ಉಚಿತವಾಗಿ ಒದಗಿಸಿ, ಮಹಿಳೆಯರಿಗೆ ಪ್ರಾಯೋಗಿಕ ತರಬೇತಿ ನೀಡಲಾಯಿತು. ನರಿಯಂದಡ ಗ್ರಾಮದ ಪ್ರಗತಿಪರ ಕೃಷಿ ಮಹಿಳೆ ಅಂಬಿಕಾ ಬಿ.ಎ. ಅವರು ಅಣಬೆ ಬೇಸಾಯದ ತಾಂತ್ರಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು. ಮಡಿಕೇರಿ ತಾಲೂಕು ‘ಆತ್ಮ’ ಸಿಬ್ಬಂದಿ ಮೋನಿಕಾ ಕೆ.ಎಸ್. ಹಾಗೂ ತಾಲೂಕು ತಾಂತ್ರಿಕ ವ್ಯವಸ್ಥಾಪಕಿ ಮೋನಿಷಾ ಸಿ.ಎಚ್. ಅವರು ಕಾರ್ಯಕ್ರಮವನ್ನು ಸಂಘಟಿಸಿದ್ದರು. ಈ ಸಂದರ್ಭದಲ್ಲಿ ಕೃಷಿ ನಿರ್ದೇಶಕ ಸೋಮಶೇಖರ್, ‘ಆತ್ಮ’ ಯೋಜನೆಯ ಯೋಜನಾ ನಿರ್ದೇಶಕಿ ಮೈತ್ರಿ, ನಾಪೋಕ್ಲು ಮಹಿಳಾ ಸಮಾಜದ ಅಧ್ಯಕ್ಷ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.