ಕುಶಾಲನಗರ, NEWS DESK ಸೆ.26: ಕೂಡಿಗೆ ಆಂಜೆಲಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕು, ಜಿಲ್ಲಾ ಹಾಗೂ ವಲಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶಾಲಾ ಆವರಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ವಿವಿಧ ಕ್ರೀಡಾ ವಿಭಾಗಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿದ ಸಿಸ್ಟರ್ ಮೇರಿ ಮಚ್ಚಾಡೋ ಹಾಗೂ ಸಿಸ್ಟರ್ ಅನಿತಾ ಡಿಸೋಜಾ ಅವರು, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ತಂಡಭಾವನೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಮುಂದಿನ ಹಂತಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳ ಪರಿಶ್ರಮ, ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನ ಹಾಗೂ ಶಾಲೆಯ ನಿರಂತರ ಪ್ರೋತ್ಸಾಹದಿಂದ ಈ ಗಮನಾರ್ಹ ಕ್ರೀಡಾ ಸಾಧನೆ ಸಾಧ್ಯವಾಗಿದೆ. ಆಂಜೆಲಾ ವಿದ್ಯಾನಿಕೇತನದ ಕ್ರೀಡಾ ಪ್ರತಿಭೆಗಳು ಮುಂದಿನ ದಿನಗಳಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಅವರು ಆಶಿಸಿದರು.








