ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಸೆ.24ರಂದು ಸಂಜೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಸೆ.25ರಂದು ಬೆಳಿಗ್ಗೆ ಚಂಡಿಕಾ ಹೋಮ, ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಿತು. ಸಂಜೆ ವಾರ್ಷಿಕೋತ್ಸವದ ಅಂಗವಾಗಿ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಟಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಸೆ.26ರಂದು ಗುರು ಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ ಹಾಗೂ ತತ್ವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ ಮಹಾಪೂಜೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಿತು. ಬಳಿಕ ನೂರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.








