Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.26: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನವು ಶ್ರೀಮಂಗಲದ ಕೃಷ್ಣ ಕನ್ವೆನ್ಷನ್ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಹವಾಲು ಹಾಗೂ ಮನವಿಗಳನ್ನು ಸಲ್ಲಿಸಿದರು. ಅರಣ್ಯ, ಕಂದಾಯ, ಭೂ ದಾಖಲೆ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ವಿದ್ಯುತ್, ಬಸ್ ಸಂಪರ್ಕ, ಆರೋಗ್ಯ ಸೇವೆ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದಂತೆ 134ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು.

ಅಭಿಯಾನದಲ್ಲಿ ಮಾತನಾಡಿದ ಶಾಸಕ ಎ.ಎಸ್. ಪೊನ್ನಣ್ಣ ಅವರು, ನಿವೇಶನ, ಮನೆ ನಿರ್ಮಾಣ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ತಂದೆ-ತಾಯಿ ಇಲ್ಲದ ಕುಟುಂಬವೊಂದಕ್ಕೆ ₹1.80 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣಕ್ಕೆ ಸಹಾಯಧನ ಒದಗಿಸಲಾಗಿದೆ. ಇತ್ಯರ್ಥವಾಗದ ಅರ್ಜಿಗಳನ್ನು ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ ತಡೆಗೋಡೆ ಹಾಗೂ ಕಿರು ಸೇತುವೆ ನಿರ್ಮಾಣ, ಆದಿವಾಸಿ ಕುಟುಂಬಗಳಿಗೆ ಮನೆ, ಮುಖ್ಯಮಂತ್ರಿ ಹಾಗೂ ಶಾಸಕರ ನಿಧಿಯಿಂದ ರಸ್ತೆ ನಿರ್ಮಾಣ ಸೇರಿದಂತೆ ಹಲವು ಬೇಡಿಕೆಗಳಿಗೆ ಪರಿಹಾರ ಕಲ್ಪಿಸಲಾಗಿದೆ ಎಂದರು.

ಸರ್ಕಾರ ಪ್ರಜಾಸೇವೆ ಅಭಿಯಾನವನ್ನು ಆರಂಭಿಸಿದ್ದು, ಜನರ ಅಹವಾಲು ಹಾಗೂ ಮನವಿಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಇತ್ಯರ್ಥಪಡಿಸುವುದು ಇದರ ಉದ್ದೇಶವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಹಿತಾಸಕ್ತಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಪೊನ್ನಣ್ಣ ಸೂಚಿಸಿದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕ ಜೀವನಕ್ಕೆ ಬಂದಿರುವುದರಿಂದ ಶಿಸ್ತಿನಿಂದ ಮತ್ತು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಯಾವುದೇ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ ಬದಲು ಜನರ ವಿಶ್ವಾಸ ಗಳಿಸಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಜನರ ಸಮಸ್ಯೆಗಳು ಬಗೆಹರಿಯದಿದ್ದಾಗ ಬೇಸರವಾಗುತ್ತದೆ. ಸಮಸ್ಯೆ ಬಗೆಹರಿಸಿದಾಗ ಜನರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಸ್ಮರಿಸುತ್ತಾರೆ. ಆದ್ದರಿಂದ ಸಾರ್ವಜನಿಕರನ್ನು ಸತಾಯಿಸದೆ, ಅವರು ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಎ.ಎಸ್. ಪೊನ್ನಣ್ಣ ಹೇಳಿದರು.

ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರಜಾಸೇವೆ ಅಭಿಯಾನಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯೂ ಹಾಜರಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಶಿಷ್ಟಾಚಾರ ಪಾಲಿಸುವುದರ ಜೊತೆಗೆ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಜನರ ವಿಶ್ವಾಸ ಇರುವವರೆಗೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವುದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ ಎಂದು ಅವರು ಹೇಳಿದರು.

ಪ್ರಜಾಸೇವೆ ಅಭಿಯಾನವು ಜನರು ಮತ್ತು ಆಡಳಿತ ವ್ಯವಸ್ಥೆಯ ನಡುವಿನ ಸಂಪರ್ಕ ಸೇತುವೆಯಾಗಿದೆ. ವಿವಿಧ ಇಲಾಖೆಗಳು ಜನರ ವಿಶ್ವಾಸ ಗಳಿಸಿ ಕಾರ್ಯನಿರ್ವಹಿಸಬೇಕು ಎಂದು ಪೊನ್ನಣ್ಣ ತಿಳಿಸಿದರು.

ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ನಿರ್ಮಿಸಲಾಗಿದ್ದರೂ ಅರಣ್ಯ ಇಲಾಖೆಯವರು ಓಡಾಡಲು ಅವಕಾಶ ನೀಡುತ್ತಿಲ್ಲ ಎಂದು ಅರ್ಜಿದಾರರೊಬ್ಬರು ಶಾಸಕರ ಗಮನಕ್ಕೆ ತಂದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಸಮಜಾಯಿಷಿ ನೀಡಲು ಮುಂದಾದಾಗ, ಸಭೆಯಲ್ಲಿಯೇ ಈ ರೀತಿಯಾಗಿ ಉತ್ತರ ನೀಡುವುದಾದರೆ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಹೇಗೆ ನಡೆದುಕೊಳ್ಳುತ್ತೀರಿ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯ ಬಳಿಕ 94ಸಿ ಅಡಿಯಲ್ಲಿ ಎಂಟು ಮಂದಿಗೆ ಹಕ್ಕುಪತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆಯ ಆದೇಶ ಪತ್ರ ಹಾಗೂ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಗ್ರ ಗಿರಿಜನ ಕಲ್ಯಾಣ ಇಲಾಖೆಗಳ ವತಿಯಿಂದ ಅಂತರಜಾತಿ ವಿವಾಹಿತರಿಗೆ ಪ್ರೋತ್ಸಾಹಧನದ ಚೆಕ್‌ಗಳನ್ನು ವಿತರಿಸಲಾಯಿತು.

ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಕೃಷಿ ಉಪಕರಣಗಳು ಹಾಗೂ ಅರಣ್ಯ ಇಲಾಖೆಯ ವತಿಯಿಂದ ಹೊಲಿಗೆ ಯಂತ್ರವನ್ನು ಶಾಸಕರು ವಿತರಿಸಿದರು.

ಮುಂದಿನ ಅಕ್ಟೋಬರ್ 3ರಂದು ಬಲ್ಲಮಾವಟಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾಸೇವೆ ಅಭಿಯಾನ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಲಾಲಾ ಅಪ್ಪಣ್ಣ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಸಂಜನಾ, ತಾ.ಪಂ. ಇಒ ರಾಜೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.