ನಾಪೋಕ್ಲು, NEWS DESK ಸೆ.27: ಮಹಿಳಾ ಸಹಕಾರ ಸಂಘ ನಿಯಮಿತ, ನಾಪೋಕ್ಲು ಇದರ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷೆ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ, ಸಮಾಜದಲ್ಲಿ ಒಟ್ಟು 335 ಸದಸ್ಯರಿದ್ದು, ನೂತನ ಸದಸ್ಯರ ಸೇರ್ಪಡೆ ಪ್ರಕ್ರಿಯೆ ಮುಂದುವರಿದಿದೆ. ಸದಸ್ಯರಲ್ಲದವರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರ ಸಲಹೆ ಮತ್ತು ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸದಸ್ಯರು ಸಹಕರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಸದಸ್ಯರ ಪ್ರಶ್ನೆ, ಸಲಹೆ ಹಾಗೂ ಸೂಚನೆಗಳಿಗೆ ಅಧ್ಯಕ್ಷರು ಉತ್ತರಿಸಿದರು. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿ, ಸದಸ್ಯರ ಒಪ್ಪಿಗೆ ಪಡೆಯಲಾಯಿತು.
ಸದಸ್ಯ ಮಹಿಳೆಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಹಿಳೆಯರು ತಯಾರಿಸಿದ ವಿವಿಧ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಹಕಾರ ಮಹಿಳಾ ಸಮಾಜದ ಉಪಾಧ್ಯಕ್ಷೆ ಕ್ಯಾಲೇಟಿರ ಮುತ್ತಮ್ಮ ಬೋಪಯ್ಯ, ನಿರ್ದೇಶಕರಾದ ಮುಂಡಂಡ ಕವಿತಾ ಅಯ್ಯಣ್ಣ, ಮನವಟ್ಟಿರ ಝಾನ್ಸಿ ತಿಮ್ಮಯ್ಯ, ಕ್ಯಾಲೆಟ್ಟೀರ ದಿವ್ಯ ಮುತ್ತಪ್ಪ, ಕುಟ್ಟಂಜೆಟ್ಟಿರ ವಿನಿತಾ ಸೋಮಣ್ಣ, ಬಿದ್ದಾಟಂಡ ಗಿರಿಜಾ ಬೋಪಣ್ಣ, ಕಾಂಡಂಡ ಲೀಲಾವತಿ ಪೊನ್ನಣ್ಣ, ಬೊಪ್ಪಂಡ ಶೈಲಾ ಬೋಪಯ್ಯ, ಕುಲ್ಲೇಟಿರ ಹೇಮಾವತಿ ಅರುಣ್, ಹೇಮಾವತಿ ರಾಮಕೃಷ್ಣ, ಕಾರ್ಯದರ್ಶಿ ಉಮಾ ಲಕ್ಷ್ಮಿ. ವಿ. ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.








