Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಸೆ.28: ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘ, ವಿರಾಜಪೇಟೆ ಇವರ ಆಶ್ರಯದಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಸಮಾರಂಭ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮವು ಅಕ್ಟೋಬರ್ 20ರಂದು ಮಂಗಳವಾರ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಜೂಡಿವಾಸ್ ತಿಳಿಸಿದ್ದಾರೆ.

ಈ ಕುರಿತು ವಿರಾಜಪೇಟೆಯ ಪತ್ರಕರ್ತರ ವೇದಿಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ವತಿಯಿಂದ 19ನೇ ವರ್ಷದ ಆಯುಧಪೂಜೆ ಸಮಾರಂಭವನ್ನು ಆಚರಿಸಲಾಗುತ್ತಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಸಂಘದ ಕಚೇರಿಯಲ್ಲಿ ಆಯುಧಪೂಜೆ ನೆರವೇರಲಿದೆ. ಬೆಳಿಗ್ಗೆ 10.30ರಿಂದ ಸ್ಥಳೀಯ ಕಲಾ ಪ್ರತಿಭೆಗಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಗುಂಪು ನೃತ್ಯ, ಸ್ಥಳೀಯ ಚಂಡೆಮೇಳ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಗೆ ಸಂಘದ ವತಿಯಿಂದ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಪ್ರಖ್ಯಾತ ಬೈಕ್ ಸವಾರರಿಂದ ಸಾಹಸ ಪ್ರದರ್ಶನ ನಡೆಯಲಿದೆ. ಈ ಸಂದರ್ಭದಲ್ಲಿ ಸ್ಥಳೀಯ ಕಲಾ ಪ್ರತಿಭೆಗಳಿಗೂ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಹುಮಾನ ವಿತರಣೆ, ಸಂಗೀತ ರಸಮಂಜರಿ ಹಾಗೂ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಹಿರಿಯರು, ಪೌರಕಾರ್ಮಿಕರು, ಸಮಾಜ ಸೇವಕರು, ನಿವೃತ್ತ ಬಸ್ ಕಾರ್ಮಿಕರು ಹಾಗೂ ಪ್ರತಿಭಾವಂತ ಬಸ್ ಕಾರ್ಮಿಕರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಳಿಕ ಕ್ಯಾಲಿಕಟ್‌ನ ಪ್ರಖ್ಯಾತ ಸರ್ಗಂ ಸಂಗೀತ ತಂಡದಿಂದ ಸಂಗೀತ ಹಾಗೂ ಮ್ಯಾಜಿಕ್ ಡ್ಯಾನ್ಸ್ ಕಾರ್ಯಕ್ರಮ ನಡೆಯಲಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯರ್ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಛಿಸುವ ಸ್ಥಳೀಯ ಕಲಾ ಪ್ರತಿಭೆಗಳು ವಿರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿರುವ ಜವಾನ್ ಕೋಲ್ಡ್ ಸ್ಟೋರೇಜ್‌ನಲ್ಲಿ ಅಥವಾ ಸಂಘದ ಪದಾಧಿಕಾರಿಗಳ ಬಳಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

ಹೆಚ್ಚಿನ ಮಾಹಿತಿಗಾಗಿ 9844558535, 8762279397, 8310181094 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಖಜಾಂಚಿ ವಿನಂತು ಬಿ.ವಿ. ಹಾಗೂ ನಿರ್ದೇಶಕ ಅಜಯ್ ಕೆ.ಇ. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ಸ್ಥಳೀಯ ‘ನಾಪೋಕ್ಲು ಕ್ಲೀನ್ ಅಪ್’ ಸಂಸ್ಥೆಯ ವತಿಯಿಂದ ನಾಪೋಕ್ಲು–ಹಳೆ ತಾಲೂಕು ರಸ್ತೆಯ ಬದಿಯಲ್ಲಿ ಸಂಗ್ರಹವಾಗಿದ್ದ…

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.