Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ ಸೀಮಿತವಾಗದೆ, ಸಮಾಜದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕಾನೂನಿನ ಪ್ರಾಥಮಿಕ ಅರಿವು ಮತ್ತು ದೃಢವಾದ ಆರೋಗ್ಯಕ್ಕಾಗಿ ಪೌಷ್ಠಿಕಾಂಶದ ಮಹತ್ವವನ್ನು ಅರಿಯುವುದು ಅತ್ಯಂತ ಅವಶ್ಯಕ ಎಂದು ಕೊಡಗು ಮಡಿಕೇರಿಯ 2ನೇ ಅಪರ ಜಿಲ್ಲಾ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್. ನಟರಾಜು ಅವರು ಅಭಿಪ್ರಾಯಪಟ್ಟರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಜಂಟಿ ಆಶ್ರಯದಲ್ಲಿ ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕಾನೂನು ಅರಿವು ಮತ್ತು ಪೌಷ್ಠಿಕಾಂಶ ಅಭಿಯಾನ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. :: ಗುಡ್ ಟಚ್, ಬ್ಯಾಡ್ ಟಚ್ ಹಾಗೂ ಪೋಕ್ಸೊ ಕಾಯಿದೆ ಕುರಿತು ಜಾಗೃತಿ :: ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿಗಳು, ಮಕ್ಕಳು ತಮ್ಮ ದೈನಂದಿನ ಜೀವನದಲ್ಲಿ ಎದುರಾಗಬಹುದಾದ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶಗಳ ಬಗ್ಗೆ ಸಂಪೂರ್ಣ ಅರಿವು ಹೊಂದಿರಬೇಕು. ಮಕ್ಕಳ ರಕ್ಷಣೆಗಾಗಿ ಇರುವ ಕಠಿಣ ‘ಪೋಕ್ಸೊ ಕಾಯಿದೆ’ಯ ಕುರಿತು ತಿಳಿವಳಿಕೆ ಅಗತ್ಯ ಎಂದರು. ಇಂದಿನ ಹದಿಹರೆಯದ ಮಕ್ಕಳು ದಾರಿ ತಪ್ಪದಂತೆ ಎಚ್ಚರಿಕೆ ವಹಿಸಬೇಕು, ಅಪರಿಚಿತರ ಆಮಿಷಗಳಿಗೆ ಬಲಿಯಾಗಬಾರದು ಮತ್ತು ಯಾವುದೇ ರೀತಿಯ ಅನ್ಯಾಯ ಅಥವಾ ದೌರ್ಜನ್ಯ ಎದುರಾದಾಗ ಮೌನವಾಗಿರದೆ ತಕ್ಷಣವೇ ಶಿಕ್ಷಕರು, ಪೋಷಕರು ಅಥವಾ ಕಾನೂನು ಅಧಿಕಾರಿಗಳ ಬಳಿ ಧೈರ್ಯವಾಗಿ ಧ್ವನಿ ಎತ್ತುವಂತೆ ಕಿವಿಮಾತು ಹೇಳಿದರು. ಅಲ್ಲದೆ, ವಿದ್ಯಾರ್ಥಿಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸಿ, ಅವರ ವಿವಿಧ ಕಾನೂನು ಸಂಶಯಗಳಿಗೆ ಸವಿವರವಾದ ಉತ್ತರಗಳನ್ನು ನೀಡಿದರು. :: ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ಡ್ರಗ್ಸ್‍ನಿಂದ ದೂರವಿರಿ :: ಕಾರ್ಯಕ್ರಮದಲ್ಲಿ ಘನ ಉಪಸ್ಥಿತರಿದ್ದ ವಿರಾಜಪೇಟೆ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಆದ ಗೌರವಾನ್ವಿತ ನ್ಯಾಯಮೂರ್ತಿ ವಿಶ್ವನಾಥ್ ಎ. ಅವರು ಮಾತನಾಡಿ, ಇಂದಿನ ಯುವ ಜನತೆ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳನ್ನು ಅತಿ ಹೆಚ್ಚು ಬಳಸುತ್ತಿದ್ದು, ಇದರ ಅತಿ ಬಳಕೆ ಹಾಗೂ ದುರ್ಬಳಕೆ ಕಾನೂನು ತೊಡಕುಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಸಿದರು. ಯುವ ಸಮೂಹವನ್ನು ಹಾಳು ಮಾಡುತ್ತಿರುವ ‘ಮಾದಕ ದ್ರವ್ಯ’ ವ್ಯಸನದ ಜಾಲಕ್ಕೆ ಸಿಲುಕಿಕೊಳ್ಳಬೇಡಿ. ಕಾಲೇಜು ಹಾಗೂ ವಸತಿ ನಿಲಯಗಳ ಆವರಣದಲ್ಲಿ ರಾಗಿಂಗ್ ಅಥವಾ ಯಾವುದೇ ರೀತಿಯ ದೌರ್ಜನ್ಯಗಳಿಗೆ ಅವಕಾಶವಿಲ್ಲದ ಕಾನೂನಿನ ಕಠಿಣ ಚೌಕಟ್ಟುಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಸಿ.ಕೆ. ಪೂವಣ್ಣ ಅವರು ಮಾತನಾಡಿ, ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಹಕ್ಕುಗಳ ಜೊತೆಗೆ ನಿರ್ದಿಷ್ಟ ಕರ್ತವ್ಯಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಅರಿತುಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು. :: ಆರೋಗ್ಯಕರ ಬೆಳವಣಿಗೆಗೆ ಪೌಷ್ಠಿಕಾಂಶದ ಪಾತ್ರ :: ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ಯಾನಲ್ ವಕೀಲರಾದ ಬಿ.ಎನ್. ತಿಮ್ಮಯ್ಯ ಅವರು ಕಾನೂನು ನಿಯಮಗಳ ಜೊತೆಗೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೌಷ್ಠಿಕ ಆಹಾರದ ಪ್ರಾಮುಖ್ಯತೆಯನ್ನು ವಿವರಿಸಿದರು. ಹದಿಹರೆಯದಲ್ಲಿ ದೇಹಕ್ಕೆ ಅಗತ್ಯವಿರುವ ಪೌಷ್ಠಿಕಾಂಶಯುಕ್ತ ಆಹಾರದ ಕೊರತೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿ ಜಗದೀಶ್ ಎಂ. ವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ನಿಲಯದ ಮೇಲ್ವಿಚಾರಕರಾದ ಸುಮಯ್ಯ,. ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಆಯೇಷಾ ಖಾನಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.