Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.29 NEWS DESK : ಇತಿಹಾಸ ಪ್ರಸಿದ್ಧ ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವದ ಸಂದರ್ಭದಲ್ಲಿ ಪೊಲೀಸ್ ಹಾಗೂ ಚೆಸ್ಕಾಂ ಇಲಾಖೆಗಳು ಏಕಪಕ್ಷೀಯವಾಗಿ ನಡೆದುಕೊಂಡಿವೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹೇರಲಾಗಿದೆ ಹಾಗೂ ವ್ಯವಸ್ಥೆಯಲ್ಲಿ ವೈಫಲ್ಯ ಉಂಟಾಗಿದೆ ಎಂದು ಆರೋಪಿಸಿ ವಿರಾಜಪೇಟೆಯ ವಿವಿಧ ಗೌರಿ-ಗಣೇಶ ಉತ್ಸವ ಸಮಿತಿಗಳ ವತಿಯಿಂದ ಸೋಮವಾರ ತುರ್ತು ಪತ್ರಿಕಾಗೋಷ್ಠಿ ನಡೆಸಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ವಿವಿಧ ಉತ್ಸವ ಸಮಿತಿಗಳ ಮುಖಂಡರು ಮಾತನಾಡಿ, ಇಲಾಖೆಗಳ ಕ್ರಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ವಿನಾಯಕ ಯುವಕ ಮಂಡಳಿ ಅಧ್ಯಕ್ಷ ಹಾಗೂ ವಕೀಲ ಟಿ.ಪಿ. ಕೃಷ್ಣ ಮಾತನಾಡಿ, ಇತಿಹಾಸ ಪ್ರಸಿದ್ಧ ಗೌರಿ-ಗಣೇಶ ವಿಸರ್ಜನಾ ಮಹೋತ್ಸವವನ್ನು ಸಾರ್ವಜನಿಕರು ಹಾಗೂ ದಾನಿಗಳ ನೆರವಿನಿಂದ, ಸಮಿತಿಗಳ ಸದಸ್ಯರು ತಮ್ಮ ಸ್ವಂತ ಶ್ರಮದಿಂದ ಆಯೋಜಿಸುತ್ತಿದ್ದಾರೆ. ಗೌರಿ ಪಲ್ಲಕಿಯೊಂದಿಗೆ ಆರಂಭವಾಗಿ 11 ದಿನಗಳ ಬಳಿಕ ಅನಂತ ಚತುರ್ದಶಿಯಂದು ಪ್ರತಿಷ್ಠಾಪಿತ ಎಲ್ಲ ಗಣೇಶ ಮೂರ್ತಿಗಳನ್ನು ಏಕಕಾಲದಲ್ಲಿ ವಿಸರ್ಜಿಸುವ ಸಂಪ್ರದಾಯವನ್ನು ಉಳಿಸಿಕೊಳ್ಳಲು ಹಲವು ವರ್ಷಗಳಿಂದ ಶ್ರಮಿಸಲಾಗುತ್ತಿದೆ ಎಂದರು. ಈ ಬಾರಿ ಧ್ವನಿವರ್ಧಕ ಬಳಕೆಯ ವೇಳೆ ವಿದ್ಯುತ್ ಪ್ರವಹಿಸಿ ಪ್ರಾಣಹಾನಿ ಸಂಭವಿಸಿದೆ ಎಂಬ ರೀತಿಯಲ್ಲಿ ಪೊಲೀಸರು ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿದ ಅವರು, ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿತು ಎಂದು ಹೇಳಿದರು. ಕಳೆದ ಎರಡು ವರ್ಷಗಳಿಂದ ಗೌರಿ-ಗಣೇಶ ವಿಸರ್ಜನಾ ಸಂದರ್ಭದಲ್ಲಿ ಪಟ್ಟಣದಲ್ಲಿ ವಿದ್ಯುತ್ ಪೂರೈಕೆಗೆ ತೊಂದರೆಯಾಗುತ್ತಿದೆ. ಜನರೇಟರ್ ಮೂಲಕ ವಿದ್ಯುತ್ ವ್ಯವಸ್ಥೆ ಮಾಡದಿದ್ದರೆ ಪಟ್ಟಣದಲ್ಲಿ ಕತ್ತಲು ಆವರಿಸುತ್ತಿತ್ತು. ಸಾವಿರಾರು ಜನರು ಸೇರಿದ್ದ ಸಂದರ್ಭದಲ್ಲಿ ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರಬೇಕಿತ್ತು ಎಂದು ಅವರು ತಿಳಿಸಿದರು. ನಾಡಹಬ್ಬಗಳ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಜಿ. ಸಾಯಿನಾಥ್ ನಾಯಕ್ ಮಾತನಾಡಿ, ಕಳೆದ ಹಲವು ವರ್ಷಗಳಿಂದ 22 ಸಮಿತಿಗಳು ಒಗ್ಗಟ್ಟಿನಿಂದ ಗೌರಿ-ಗಣೇಶ ಉತ್ಸವವನ್ನು ನಡೆಸಿಕೊಂಡು ಬರುತ್ತಿದ್ದವು. ಆದರೆ ಯಾವುದೇ ಮುನ್ಸೂಚನೆ ಅಥವಾ ಮಾಹಿತಿ ನೀಡದೆ ಸಮಿತಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿದರು. ಈ ಬಾರಿ ಉತ್ಸವದ ವೇಳೆ ಹಿಂದಿನ ಸಂಭ್ರಮದ ವಾತಾವರಣ ಕಂಡುಬರಲಿಲ್ಲ. ಇಂತಹ ಸಂದರ್ಭದಲ್ಲಿ ನೂತನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮೌನ ವಹಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪಂಜರಪೇಟೆ ಶ್ರೀ ವಿನಾಯಕ ಸೇವಾ ಸಮಿತಿ ಸದಸ್ಯ ಹೇಮಂತ್ ಬಿ.ವಿ. ಮಾತನಾಡಿ, ಆಕಸ್ಮಿಕವಾಗಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕೆಲವರು ಮೂವರು, ನಾಲ್ವರು ಮೃತಪಟ್ಟಿದ್ದಾರೆ ಎಂಬ ವದಂತಿ ಹರಡಿದ್ದರಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಯಿತು ಎಂದು ಹೇಳಿದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿದ್ದರೂ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಆರೋಪಿಸಿದ ಅವರು, ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕರ ಚಂದಾದಿಂದ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಪೊಲೀಸರು ಸಹಕಾರ ನೀಡಬೇಕು. ಪ್ರತಿ ಸಮಿತಿಯಿಂದ ಮೆರವಣಿಗೆ ವೆಚ್ಚಕ್ಕಾಗಿ ₹1,500, ಧ್ವನಿವರ್ಧಕ ಬಳಕೆಗೆ ₹650 ಸೇರಿದಂತೆ ವಿವಿಧ ಶುಲ್ಕಗಳನ್ನು ಪಡೆಯಲಾಗಿದ್ದು, ಬಳಿಕ ಧ್ವನಿವರ್ಧಕ ಸ್ಥಗಿತಗೊಳಿಸಿರುವುದು ಅನ್ಯಾಯವಾಗಿದೆ ಎಂದು ಅವರು ಹೇಳಿದರು. ಸಾಮಾಜಿಕ ಕಾರ್ಯಕರ್ತ ಯೋಗೇಶ್ ನಾಯ್ಡು ಮಾತನಾಡಿ, ಉತ್ಸವ ಸಮಿತಿಗಳ ಮೇಲೆ ನಿರಂತರವಾಗಿ ಒತ್ತಡ ಹಾಗೂ ಬೆದರಿಕೆ ಹೇರಲಾಗುತ್ತಿದೆ ಎಂದು ಆರೋಪಿಸಿದರು. ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದರ ಜೊತೆಗೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಬೇಕಾಗಬಹುದು ಎಂದು ಎಚ್ಚರಿಸಿದರು. ನೆಹರು ನಗರದ ನೇತಾಜಿ ಉತ್ಸವ ಸಮಿತಿ ಉಪಾಧ್ಯಕ್ಷ ಸುರೇಶ್ ಮಾತನಾಡಿ, ಉತ್ಸವಕ್ಕಾಗಿ ಕಷ್ಟಪಟ್ಟು ಹಣ ಸಂಗ್ರಹಿಸಿ ಸಿದ್ಧಪಡಿಸಿದ್ದ ವಾಹನಗಳು ಮೆರವಣಿಗೆಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಸಮಿತಿಗಳಿಗೆ ಆರ್ಥಿಕ ನಷ್ಟವಾಗಿದೆ ಎಂದು ಹೇಳಿದರು. ಪೊಲೀಸ್ ಹಾಗೂ ಚೆಸ್ಕಾಂ ಇಲಾಖೆಗಳ ಕ್ರಮವನ್ನು ಖಂಡಿಸಿ ಮುಂದಿನ ದಿನಗಳಲ್ಲಿ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದು. ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಕಾನೂನು ಪರಿಹಾರಕ್ಕಾಗಿ ಉಚ್ಚ ನ್ಯಾಯಾಲಯ ಅಥವಾ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. ತುರ್ತು ಪತ್ರಿಕಾಗೋಷ್ಠಿಯಲ್ಲಿ ಅರಸುನಗರ ವಿಘ್ನೇಶ್ವರ ಸೇವಾ ಸಮಿತಿಯ ಮಣಿ, ಶ್ರೀ ವಿಜಯ ವಿನಾಯಕ ಸೇವಾ ಸಮಿತಿ ದಕ್ಕನಿ ಮೊಹಲ್ಲಾದ ಚೇತನ್, ಅಯ್ಯಪ್ಪ ಬೆಟ್ಟದ ವರದ ವಿನಾಯಕ ಸೇವಾ ಸಮಿತಿಯ ಮದನ್, ಶ್ರೀ ಕಾವೇರಿ ಗಣೇಶೋತ್ಸವ ಸಮಿತಿಯ ವಿವೇಕ್ ರೈ ಹಾಗೂ ಕಿರಣ್, ಪಂಜರುಪೇಟೆ ಶ್ರೀ ಮಹಾಗಣಪತಿ ಸೇವಾ ಸಮಿತಿಯ ನಿಖಿಲ್ ಹಾಗೂ ದಯಾನಂದ, ವರದ ವಿನಾಯಕ ಸೇವಾ ಸಮಿತಿಯ ಆಕಾಶ್, ಸರ್ವಸಿದ್ಧಿ ವಿನಾಯಕ ಸುಂಕದಕಟ್ಟೆ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ವಿವಿಧ ಗೌರಿ-ಗಣೇಶ ಉತ್ಸವ ಸಮಿತಿಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.