ನಾಪೋಕ್ಲು, NEWS DESK ಸೆ.29: ಇಲ್ಲಿಗೆ ಸಮೀಪದ ಮೂರ್ನಾಡು ಕೊಡವ ಸಮಾಜದ (ರಿ.) ಆಶ್ರಯದಲ್ಲಿ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ತೇಲಪಂದ ಸಿ. ಸುಬ್ಬಯ್ಯ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮೂರ್ನಾಡು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಕಾಫಿ ಬೆಳೆಗಾರರಾದ ಪಳಂಗಂಡ ವಿಠಲ ಪೂವಯ್ಯ ಅವರು ಭಾಗವಹಿಸಿದ್ದರು.
ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ ನೆರವಂಡ ಯಾನ ಪೊನ್ನಮ್ಮ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮೂರ್ನಾಡು ಕೊಡವ ಸಮಾಜದ ಉಪಾಧ್ಯಕ್ಷರಾದ ಕೋಟೆರ ಎ. ರಾಜ, ಗೌರವ ಕಾರ್ಯದರ್ಶಿ ಚಂಗಂಡ ಸೂರಜ್ ತಮ್ಮಯ್ಯ, ಖಜಾಂಚಿ ಅಮ್ಮಟಂಡ ಎಂ. ದೇವಯ್ಯ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ಸಮಾಜದ ಬಾಂಧವರು ಹಾಗೂ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ದುಗ್ಗಳ ಸದಾನಂದ








