Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*
  • *ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಪೊಲೀಸ್ ನ್ಯೂಸ್

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಂಗಳೂರು, NEWS DESK ಸೆ.30 : ಮಂಗಳೂರಿನ ಹೊರವಲಯದ ಕಳವಾರ್ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಮೂರನೇ ಹಂತದ ಘಟಕದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದ್ದು, ಸ್ಥಳದಿಂದ ದಟ್ಟ ಕಪ್ಪು ಹೊಗೆ ಆವರಿಸಿಕೊಂಡಿದೆ. ಸ್ಫೋಟದ ಸದ್ದು ಹಲವು ಕಿಲೋಮೀಟರ್ ದೂರದವರೆಗೂ ಕೇಳಿಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ ಸುಮಾರು 12.25ರ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಂಗಳೂರಿನಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಕಳವಾರ್ ಪ್ರದೇಶದಲ್ಲಿರುವ MRPL ಘಟಕದಲ್ಲಿ ಘಟನೆ ನಡೆದಿದ್ದು, MRPLನ ತುರ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದೆ. ಸ್ಫೋಟದ ಬಳಿಕ ಸ್ಥಳದಿಂದ ಬೆಂಕಿ ಹಾಗೂ ದಟ್ಟ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದೆ. ಸ್ಫೋಟದ ಸದ್ದು ಅಂಗರಗುಂಡಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ, ಕುಳಾಯಿ, ಕಾವೂರು ಸೇರಿದಂತೆ ಮಂಗಳೂರು ನಗರದ ಕೆಲ ಭಾಗಗಳಲ್ಲಿಯೂ ಕೇಳಿಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟದ ಪರಿಣಾಮ ಸಮೀಪದ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದ್ದು, ಜೋಕಟ್ಟೆ ಗ್ರಾಮ ಪಂಚಾಯಿತಿ ಕಟ್ಟಡ ಸೇರಿದಂತೆ ಹಲವು ಮನೆಗಳು ನಡುಗಿವೆ ಎಂದು ವರದಿಯಾಗಿದೆ. ಕೆಲವು ಮನೆಗಳ ಬಾಗಿಲು ಹಾಗೂ ಕಿಟಕಿಗಳಿಗೆ ಹಾನಿಯಾಗಿದ್ದು, ಜೋಕಟ್ಟೆ ಗ್ರಾಮ ಪಂಚಾಯಿತಿಯ ಗ್ರಂಥಾಲಯಕ್ಕೂ ಹಾನಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ, ಕದ್ರಿ ಹಾಗೂ ಪಾಂಡೇಶ್ವರದಿಂದ ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ MRPL DPS ಶಾಲೆಗೆ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟಕ್ಕೆ ನಿಖರ ಕಾರಣವೇನು, ಘಟನೆಯಿಂದ ಉಂಟಾಗಿರುವ ಹಾನಿಯ ಪ್ರಮಾಣ ಎಷ್ಟು ಹಾಗೂ ಯಾವುದೇ ಸಾವು-ನೋವು ಸಂಭವಿಸಿದೆಯೇ ಎಂಬ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಪೊಲೀಸ್ ನ್ಯೂಸ್

ಮಂಗಳೂರು, NEWS DESK ಸೆ.30 : ಮಂಗಳೂರಿನ ಹೊರವಲಯದ ಕಳವಾರ್ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ…

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026

*ಸಮುದಾಯದ ಸಂಸ್ಕೃತಿ, ಆಚಾರ-ವಿಚಾರ, ಪರಂಪರೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸಿ: ಬಿಲ್ಲರಿಕುಟ್ಟಡ ಪ್ರಭು ಅಯ್ಯಪ್ಪ*

ಸೆಪ್ಟೆಂಬರ್ 29, 2026

*ನ.21 ಮತ್ತು 22ರಂದು ವಿರಾಜಪೇಟೆಯಲ್ಲಿ ಕೂರ್ಗ್ ಮಾಸ್ಟರ್ಸ್ ಕಪ್ 50+ ಕಾಲ್ಚೆಂಡು ಪಂದ್ಯಾಟ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.