Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
  • *ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*
  • *ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*
  • *ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*
  • **ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**
  • *ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*
  • *ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*
  • *ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*
  • *ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*
  • *ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಸೆ.30: ಜೀರ್ಣಾಂಗದ ಕಾಯಿಲೆಗಳು, ಜಠರ-ಕರುಳಿನ ಕ್ಯಾನ್ಸರ್ ಹಾಗೂ ಲಿವರ್ ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಅತ್ಯಾಧುನಿಕ ವೈದ್ಯಕೀಯ ತಪಾಸಣಾ ವ್ಯವಸ್ಥೆಗಳು ಲಭ್ಯವಿದ್ದು, ಜನರು ಇದರ ಸದುಪಯೋಗ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಸೈನ್ಸಸ್‌ನ ತಜ್ಞ ವೈದ್ಯರು ಸಲಹೆ ನೀಡಿದರು.

ಮಡಿಕೇರಿ ಪ್ರೆಸ್ ಕ್ಲಬ್‌ನಲ್ಲಿ ಮಣಿಪಾಲ್ ಆಸ್ಪತ್ರೆ ಮೈಸೂರು ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಯ ಸೀನಿಯರ್ ಕನ್ಸಲ್ಟೆಂಟ್ ಡಾ. ಸತೀಶ್ ರಾವ್ ಎ.ಕೆ., ಆರಂಭಿಕ ಹಂತದ ಜಠರ-ಕರುಳಿನ ಕ್ಯಾನ್ಸರ್‌ಗಳನ್ನು ಎಂಡೋಸ್ಕೋಪಿಕ್ ಸಬ್‌ಮ್ಯೂಕೋಸಲ್ ಡಿಸೆಕ್ಷನ್‌ನಂತಹ ಆಧುನಿಕ ವಿಧಾನಗಳ ಮೂಲಕ ತೆರೆದ ಶಸ್ತ್ರಚಿಕಿತ್ಸೆಯಿಲ್ಲದೆ ಚಿಕಿತ್ಸೆ ನೀಡಲು ಸಾಧ್ಯವಿದೆ ಎಂದು ತಿಳಿಸಿದರು.

ಹಿಂದೆ ರೋಗಿಗಳು ಆಸ್ಪತ್ರೆಗೆ ಬರುವ ವೇಳೆಗೆ ಕಾಯಿಲೆ ಎರಡನೇ ಹಂತ ಅಥವಾ ಅದಕ್ಕಿಂತ ಮುಂದುವರಿದಿರುತ್ತಿತ್ತು. ಆದರೆ ಪ್ರಸ್ತುತ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಮೂಲಕ ರೋಗವನ್ನು ಸಾಕಷ್ಟು ಮುಂಚಿತವಾಗಿಯೇ ಪತ್ತೆಹಚ್ಚಿ ಅಗತ್ಯ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ. ಈ ಎಲ್ಲಾ ಸೌಲಭ್ಯಗಳು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಲಭ್ಯವಿವೆ ಎಂದು ಅವರು ತಿಳಿಸಿದರು.

ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಯ ಸೀನಿಯರ್ ಕನ್ಸಲ್ಟೆಂಟ್ ಡಾ. ವಾಸುದೇವ ಪೈ ಮಾತನಾಡಿ, ದೀರ್ಘಕಾಲದ ಹೊಟ್ಟೆಯ ಅಸ್ವಸ್ಥತೆ, ಜಾಂಡೀಸ್ ಮೊದಲಾದವು ಕೆಲವೊಮ್ಮೆ ಕ್ಯಾನ್ಸರ್‌ನ ಪೂರ್ವ ಲಕ್ಷಣಗಳಾಗಿರಬಹುದು. ಹೀಗಾಗಿ ಇಂತಹ ಲಕ್ಷಣಗಳು ಕಂಡುಬಂದ ಕೂಡಲೇ ವಿಳಂಬ ಮಾಡದೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮುಂಬರುವ ದಿನಗಳಲ್ಲಿ ಆಸ್ಪತ್ರೆಯಲ್ಲಿ ರೊಬೋಟಿಕ್ ಸರ್ಜರಿ ವ್ಯವಸ್ಥೆಗಳನ್ನು ಹೊಂದುವ ಉದ್ದೇಶವಿದೆ ಎಂದು ತಿಳಿಸಿದರು.

ತಜ್ಞ ವೈದ್ಯ ಡಾ. ನಿಶ್ಚಯ್ ಆರ್. ಮಾತನಾಡಿ, ಲಿವರ್‌ಗೆ ಸಂಬಂಧಿಸಿದ ಕಾಯಿಲೆಗಳು ಹಲವು ಸಂದರ್ಭಗಳಲ್ಲಿ ಆರಂಭಿಕ ಹಂತದಲ್ಲಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸದೆ ಮೌನವಾಗಿ ಮುಂದುವರಿಯುತ್ತವೆ. ಫ್ಯಾಟಿ ಲಿವರ್‌ನಂತಹ ಸಮಸ್ಯೆಗಳಲ್ಲಿಯೂ ಆರಂಭದಲ್ಲಿ ಲಕ್ಷಣಗಳು ಗೋಚರಿಸದಿರಬಹುದು. ಆದ್ದರಿಂದ ನಿಯಮಿತವಾಗಿ ಲಿವರ್ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಸಲಹೆ ನೀಡಿದರು.

ಲಿವರ್ ವೈಫಲ್ಯಕ್ಕೆ ಲಿವರ್ ಕಸಿ ಪ್ರಮುಖ ಚಿಕಿತ್ಸೆಯಾಗಿದ್ದು, ಅಂಗಾಂಗ ದಾನಕ್ಕೆ ಜನರು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಅವರು ಮನವಿ ಮಾಡಿದರು. ಮೈಸೂರು ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ 5 ಲಿವರ್ ಕಸಿ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಕ್ಲಿನಿಕಲ್ ಸರ್ವಿಸಸ್ ಮುಖ್ಯಸ್ಥ ಡಾ. ಉಪೇಂದ್ರ ಶೆಣೈ ಹಾಗೂ ಆಸ್ಪತ್ರೆಯ ನಿರ್ದೇಶಕ ಸಂದೀಪ್ ಪಾಟೀಲ್ ಬಿ.ಜೆ. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.30: ಗೋವಾದ ವಾಸ್ಕೊ ರವೀಂದ್ರ ಭವನದಲ್ಲಿ ನಡೆದ ‘ಕನ್ನಡ ಸಾಂಸ್ಕೃತಿಕ ಸಮ್ಮೇಳನ ಗೋವಾ 2026’ ರಾಷ್ಟ್ರಮಟ್ಟದ…

*ಸುಂಟಿಕೊಪ್ಪದಲ್ಲಿ ಅ.16ರಿಂದ 18ರವರೆಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ*

ಸೆಪ್ಟೆಂಬರ್ 30, 2026

*ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಿರಿ; ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಆಧುನಿಕ ವೈದ್ಯಕೀಯ ವ್ಯವಸ್ಥೆ*

ಸೆಪ್ಟೆಂಬರ್ 30, 2026

**ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ**

ಸೆಪ್ಟೆಂಬರ್ 30, 2026

*ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಸಾಧನೆ : ಜನರಲ್ ತಿಮ್ಮಯ್ಯ ಶಾಲಾ ವಿದ್ಯಾರ್ಥಿನಿಯರಿಗೆ ಗೌರವ*

ಸೆಪ್ಟೆಂಬರ್ 30, 2026

*ನಿಯಮ ಉಲ್ಲಂಘಿಸಿ ಮರದ ದಿಮ್ಮಿ ಸಾಗಾಟ : ಐದು ಲಾರಿ ವಶ : ರೂ.2.97 ಲಕ್ಷ ದಂಡ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ಯಶಸ್ವಿ*

ಸೆಪ್ಟೆಂಬರ್ 30, 2026

*ತಾಳತ್ತಮನೆಯಲ್ಲಿ ಯುವಜನತೆ ಹಾಗೂ ಮಹಿಳೆಯರಿಗೆ ಅಣಬೆ ಕೃಷಿ ತರಬೇತಿ : ಸ್ವಾವಲಂಬಿಗಳಾಗಲು ಕರೆ*

ಸೆಪ್ಟೆಂಬರ್ 30, 2026

*ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.