
ಮಡಿಕೇರಿ, NEWS DESK ಸೆ.30: ಕಸ್ತೂರಿ ರಂಗನ್ ವರದಿಯ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ, ಅದರ ಆಧಾರದ ಮೇಲಿನ ಕರಡು ಅಧಿಸೂಚನೆಗೆ ವಿರೋಧವಾಗಿ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.
ರೈತರ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ತಮ್ಮ ನಿಲುವನ್ನು ವಿಧಾನಸಭೆಯಲ್ಲಿ ಸ್ಪಷ್ಟವಾಗಿ ಮಂಡಿಸಿರುವುದಾಗಿ ಅವರು ಹೇಳಿದ್ದಾರೆ. ರೈತರ ಪರವಾಗಿ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿರುವ ಡಾ. ಮಂತರ್ ಗೌಡ, ರೈತರ ಹಿತವೇ ತಮ್ಮ ಆದ್ಯತೆಯಾಗಿದ್ದು, ರೈತರ ಬದುಕು ಮತ್ತು ಹಿತಾಸಕ್ತಿಗಳ ರಕ್ಷಣೆಗೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.








