Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
  • *ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*
  • *ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*
  • *ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ತಿತಿಮತಿ, NEWS DESK ಸೆ.30: ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆರ್ಥಿಕ ವಂಚನೆ ಹಾಗೂ ಸೈಬರ್ ಬೆದರಿಕೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತಮ್ಮ ಗೌಪ್ಯ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದೆ ಎಚ್ಚರಿಕೆಯಿಂದ ಇರಬೇಕು ಎಂದು ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಸಲಹೆ ನೀಡಿದರು.

ಪೊನ್ನಂಪೇಟೆ ತಾಲೂಕಿನ ತಿತಿಮತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಬಜಾಜ್ ಫೈನಾನ್ಸ್ ಲಿಮಿಟೆಡ್ (BFL), ಗಿರಿಜನ ಲ್ಯಾಂಪ್ ಸೊಸೈಟಿ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಜಾಹೀರಾತುಗಳ ಮೂಲಕ ಆಮಿಷವೊಡ್ಡಿ, ಒಟಿಪಿ ಹಾಗೂ ಪಿನ್‌ಗಳನ್ನು ಪಡೆದು ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವಂಚಕರು ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಂಕ್, ಸರ್ಕಾರಿ ಇಲಾಖೆ ಅಥವಾ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಲಿಂಕ್‌ಗಳನ್ನು ಮೊಬೈಲ್‌ಗೆ ಕಳುಹಿಸಿ ವೈಯಕ್ತಿಕ ಮಾಹಿತಿಯನ್ನು ಪಡೆಯಲು ವಂಚಕರು ಪ್ರಯತ್ನಿಸುತ್ತಾರೆ. ಇಂತಹ ಯಾವುದೇ ಆಮಿಷಗಳಿಗೆ ಸಾರ್ವಜನಿಕರು ಬಲಿಯಾಗಬಾರದು ಎಂದು ಕಾಳೇಗೌಡ ಎಚ್ಚರಿಸಿದರು.

ಯಾವುದೇ ಬ್ಯಾಂಕಿಂಗ್ ವ್ಯವಹಾರಗಳ ಸಂದರ್ಭದಲ್ಲಿ ಅನುಮಾನವಿದ್ದರೆ ನೇರವಾಗಿ ಬ್ಯಾಂಕ್‌ಗೆ ತೆರಳಿ ವ್ಯವಹರಿಸುವುದು ಸುರಕ್ಷಿತ. ಗ್ರಾಮೀಣ ಪ್ರದೇಶಗಳಲ್ಲಿ ಹೊರಗಿನಿಂದ ಬರುವವರ ಚಟುವಟಿಕೆಗಳ ಬಗ್ಗೆಯೂ ನಿಗಾ ವಹಿಸಬೇಕು. ಯಾವುದೇ ಅಪರಾಧ ಪ್ರಕರಣ ಕಂಡುಬಂದರೆ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.

ತುರ್ತು ಸಂದರ್ಭದಲ್ಲಿ 112 ಹಾಗೂ ಸೈಬರ್ ವಂಚನೆಗೆ ಸಂಬಂಧಿಸಿದಂತೆ 1930 ಸೈಬರ್ ಅಪರಾಧ ಸಹಾಯವಾಣಿ ಮೂಲಕ ತ್ವರಿತವಾಗಿ ದೂರು ದಾಖಲಿಸುವಂತೆ ಮನವಿ ಮಾಡಿದರು.

ಬಜಾಜ್ ಫೈನಾನ್ಸ್ ಸಂಸ್ಥೆಯ ವಲಯ ಮೇಲ್ವಿಚಾರಕ ಅಶೋಕ್ ಕುಮಾರ್ ಡಿ. ಮಾತನಾಡಿ, ಭಾರತೀಯ ರಿಸರ್ವ್ ಬ್ಯಾಂಕ್‌ನ ದೃಷ್ಟಿಕೋನಕ್ಕೆ ಅನುಗುಣವಾಗಿ BFL ವತಿಯಿಂದ ರಾಷ್ಟ್ರವ್ಯಾಪಿ ಹಣಕಾಸು ಸಾಕ್ಷರತಾ ಉಪಕ್ರಮವಾದ ‘ಅರ್ಥಸೂತ್ರ ಸಂವಾದ’ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದರು.

ವೈಯಕ್ತಿಕ ಬಜೆಟ್, ಉಳಿತಾಯ, ಹಣಕಾಸು ಯೋಜನೆ, ವಿಮಾ ಜಾಗೃತಿ, ಬ್ಯಾಂಕಿಂಗ್ ಸೇವೆಗಳು, ಡಿಜಿಟಲ್ ಪಾವತಿಗಳು, ಸೈಬರ್ ಸುರಕ್ಷತೆ ಮತ್ತು ವಂಚನೆ ತಡೆ ಸೇರಿದಂತೆ ಆರ್ಥಿಕ ಯೋಗಕ್ಷೇಮದ ವಿವಿಧ ಅಂಶಗಳ ಕುರಿತು ಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಕಳೆದ ಒಂದು ವರ್ಷದಿಂದ ದೇಶದ ವಿವಿಧ ಭಾಗಗಳಲ್ಲಿ ನೂರಕ್ಕೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಂಕಜ ಮಾತನಾಡಿ, ಗ್ರಾಮೀಣ ಭಾಗದ ಜನರು ಸಾಮಾಜಿಕ ಜಾಲತಾಣ, ಬ್ಯಾಂಕಿಂಗ್ ಹಾಗೂ ಇತರ ಹಣಕಾಸು ವ್ಯವಹಾರಗಳ ಕುರಿತು ಸಮರ್ಪಕ ಮಾಹಿತಿ ಇಲ್ಲದೆ ವಂಚನೆಗೆ ಒಳಗಾಗುತ್ತಿದ್ದಾರೆ. ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳು ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದರು.

ಬುಡಕಟ್ಟು ಕೃಷಿಕರ ಸಂಘದ ಮುಖಂಡ ಸಿದ್ದಪ್ಪ ಮಾತನಾಡಿ, ಕಾಡಂಚಿನ ಜನರಿಗೆ ಉಪಯುಕ್ತವಾಗುವಂತಹ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ. ಇಂತಹ ಜಾಗೃತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಗಳಲ್ಲಿ ಇನ್ನಷ್ಟು ನಡೆಯಬೇಕು ಎಂದು ಹೇಳಿದರು.

ತಿತಿಮತಿ ಸುತ್ತಮುತ್ತಲಿನ ಹಾಡಿಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭ ಗಿರಿಜನ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಣಿಕುಂನ್ಯಾ, ಉಪಾಧ್ಯಕ್ಷೆ ಪುಷ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪೊನ್ನು, ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಪಿ.ಆರ್. ಪಂಕಜ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಸುಬ್ರಮಣಿ, ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಟಿ.ಸಿ. ರಾಮು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.30: ಅಮೃತ ಸಿನಿಕ್ರಾಫ್ಟ್ಸ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ಶೆರಟನ್ ಗ್ರಾಂಡ್ ಹೋಟೆಲ್ ಬ್ರಿಗೇಡ್ ಗೇಟ್‌ವೇನಲ್ಲಿ ಆಯೋಜಿಸಲಾಗಿದ್ದ ‘ಎಸಿ…

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026

*ಮಡಿಕೇರಿಯಲ್ಲಿ ವಿಶ್ವ ಹೃದಯ ದಿನದ ಪ್ರಯುಕ್ತ ಜಾಗೃತಿ ಅಭಿಯಾನ*

ಸೆಪ್ಟೆಂಬರ್ 30, 2026

*ಅವಧಿ ಮುಗಿದ ಆಹಾರ ವಿತರಣೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ತೀರ್ಮಾನ*

ಸೆಪ್ಟೆಂಬರ್ 30, 2026

*ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.