Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ

ಸೆಪ್ಟೆಂಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ಸೆ.30 NEWS DESK : ಕೊಡ್ಲಿಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೊಡ್ಲಿಪೇಟೆ ಹೋಬಳಿ ಘಟಕದ ನೂತನ ಸದಸ್ಯರ ಸೇರ್ಪಡೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು. ಕರವೇ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಂಚಾಲಕಿ ಶ್ರೀಮತಿ ದೀಪಾ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕವಿತಾ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಘಟಕ ಹಾಗೂ ಹೋರಾಟಗಾರ ವಸಂತ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.  ಕರವೇ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ದಾಸ್ ಮಾತನಾಡಿ, ಸಂಘಟನೆಯ ಶಿಸ್ತು ಹಾಗೂ ಪಾಲಿಸಬೇಕಾದ ನಿಯಮಾವಳಿಗಳ ಕುರಿತು ಮಾಹಿತಿ ನೀಡಿದರು. ನಾಡು, ನುಡಿ ಹಾಗೂ ಜಲರಕ್ಷಣೆ ಸೇರಿದಂತೆ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದ ಸಂದರ್ಭದಲ್ಲಿ ಕಾರ್ಯಕರ್ತರು ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಕರೆ ನೀಡಿದರು. ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಕುಡುಪಜೆ ಹಾಗೂ ಕುಶಾಲನಗರ ತಾಲೂಕು ಅಧ್ಯಕ್ಷ ಬಿ.ಜೆ. ಅಣ್ಣಯ್ಯ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಂಚಾಲಕಿ ದೀಪಾ ಪೂಜಾರಿ ಮಾತನಾಡಿ, ಕೊಡ್ಲಿಪೇಟೆಯಲ್ಲಿ ಕರವೇ ಹೋಬಳಿ ಘಟಕ ಅಸ್ತಿತ್ವಕ್ಕೆ ಬಂದಿರುವುದು ಸಂತಸ ತಂದಿದೆ. ನೂತನ ಪದಾಧಿಕಾರಿಗಳು ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡಿ ನಾಗರಿಕರಿಗೆ ನೆಮ್ಮದಿ ಹಾಗೂ ಶಾಂತಿಯುತ ಬದುಕು ಕಲ್ಪಿಸಲು ಶ್ರಮಿಸಬೇಕು. ಅಣ್ಣಾ ನಾರಾಯಣಗೌಡ ಅವರ ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಘೋಷಣೆಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು. ಕನ್ನಡ ಭಾಷೆಯ ಬೆಳವಣಿಗೆ ಹಾಗೂ ನಾಡು ಕಟ್ಟುವ ಕಾಯಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕೊಡ್ಲಿಪೇಟೆ ಹೋಬಳಿ ಕರವೇ ಘಟಕದ ನೂತನ ಅಧ್ಯಕ್ಷರಾಗಿ ಶೋಭಿತ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಸಂತ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘಟನೆಗಾಗಿ ಶ್ರಮಿಸಿದ ಶ್ರೀಮತಿ ಸುಪ್ರಿತಾ ಅವರನ್ನು ಶಾಲು ಹಾಗೂ ಹಾರ ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಉಪಾಧ್ಯಕ್ಷ ಪಯಾಜ್ ಉದ್ದಿನ್, ಪ್ರಧಾನ ಕಾರ್ಯದರ್ಶಿ ಕುಮಾರ್ ದೇವಾಂಗ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸಂತೋಷ್, ಮಹಿಳಾ ಅಧ್ಯಕ್ಷೆ ಆಶಾ, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಕುಶಾಲನಗರ ತಾಲೂಕು ಪ್ರಧಾನ ಕಾರ್ಯದರ್ಶಿ ಗೀತಾ, ಕೊಡ್ಲಿಪೇಟೆಯ ಕವಿತಾ, ರೂಪ, ಮೇನಕ ಹಾಗೂ ಮಮತಾ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 60ಕ್ಕೂ ಹೆಚ್ಚು ಕಾರ್ಯಕರ್ತರು ಕರವೇ ಸಂಘಟನೆಗೆ ಸೇರ್ಪಡೆಯಾದರು. ನೂತನ ಸದಸ್ಯರಿಗೆ ಕನ್ನಡ ಶಾಲು ಹಾಕಿ ಗೌರವಪೂರ್ವಕವಾಗಿ ಸಂಘಟನೆಗೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ಸಂಘಟಕರ ವತಿಯಿಂದ ಶಾಲು ಹಾಗೂ ಹಾರ ಹಾಕಿ ಗೌರವಿಸಲಾಯಿತು.
ಸಾಮಾಜಿಕ ಜಾಲತಾಣ ವಿಭಾಗದ ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ಬೋಪಯ್ಯ ಅವರು ಕಾರ್ಯಕ್ರಮದ ಚಿತ್ರಿಕರಣ ಹಾಗೂ ಛಾಯಾಚಿತ್ರಗಳನ್ನು ನಿರ್ವಹಿಸಿದರು. ಸಂಘಟಕ ಅವಿನಾಶ್ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಆವಂಡಿ ಗ್ರಾಮದ ಕೋಟೆ ಅಬ್ಬಿ ಹೊಳೆಯಲ್ಲಿ ಅಕ್ರಮ ಮೀನುಗಾರಿಕೆ : ಕ್ರಮಕ್ಕೆ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ನಗರ ಠಾಣೆಗೆ ದೂರು ನೀಡಿದ ಕಾಂಗ್ರೆಸ್

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಅ.27 : ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ…

ಫ್ಲೆಕ್ಸ್ ಹರಿದು ಹಾಕಿದ ಪ್ರಕರಣ : ಆರ್.ಪಿ.ಚಂದ್ರಶೇಖರ್ ಅಸಮಾಧಾನ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ : ಮನು ಮುದ್ದಪ್ಪ ಖಂಡನೆ

ಅಕ್ಟೋಬರ್ 27, 2026

ನ.2 ರಂದು ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಅಕ್ಟೋಬರ್ 26, 2026

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಪ್ರೀತಿ ಮತ್ತು ಮಾನವೀಯತೆಯ ಸಂದೇಶ ಸಾರುವ ಮಹಾಕಾವ್ಯ : ಪ್ರೊ.ನಂಜುಂಡಸ್ವಾಮಿ

ಅಕ್ಟೋಬರ್ 26, 2026

ನಾಪೋಕ್ ನಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಹಕ್ಕೊತ್ತಾಯ : ಪಾರಂಪರಿಕ ಮಾತೃಭೂಮಿ ಮತ್ತು ದತ್ತು ಮಾತೃಭೂಮಿ ಸಿದ್ಧಾಂತದ ಕುರಿತು ಎನ್.ಯು.ನಾಚಪ್ಪ ಪ್ರತಿಪಾದನೆ

ಅಕ್ಟೋಬರ್ 26, 2026

ಸೋಮವಾರಪೇಟೆಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 26, 2026

ದೇವರಾಜ ಅರಸು ನಿಗಮದ ಪಟ್ಟಿಯಿಂದ ತಿಯನ್ ಜಾತಿ ಕೈಬಿಟ್ಟಿರುವುದಕ್ಕೆ ಮಡಿಕೇರಿ ತಾಲ್ಲೂಕು ತಿಯನ್ ಸಂಘ ಆಕ್ಷೇಪ : ಪ್ರತಿಭಟನೆಯ ಎಚ್ಚರಿಕೆ

ಅಕ್ಟೋಬರ್ 26, 2026

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.