Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಸೆ.30 NEWS DESK : ಕೆದಮುಳ್ಳುರು, ತೋರ ಹಾಗೂ ಪಾಲಂಗಾಲ ಕಡೆಗೆ ಸಾಗುವ ಪ್ರಮುಖ ರಸ್ತೆಯು ಒತ್ತುವರಿ, ರಸ್ತೆಯಂಚಿನ ಕಳೆಗಿಡಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಎಂ.ಎಂ. ಪರಮೇಶ್ವರ, ಹಿಂದೆ ವರ್ಷಕ್ಕೆ ಎರಡು ಬಾರಿ ರಸ್ತೆಯಂಚಿನ ಕಾಡು ಕಡಿದು, ಚರಂಡಿಗಳನ್ನು ಸ್ವಚ್ಛಗೊಳಿಸಿ ರಸ್ತೆಯನ್ನು ಸುಸ್ಥಿತಿಯಲ್ಲಿಡಲಾಗುತ್ತಿತ್ತು. ಆದರೆ ಕಳೆದ ಎರಡು-ಮೂರು ವರ್ಷಗಳಿಂದ ವರ್ಷಕ್ಕೊಮ್ಮೆಯೂ ರಸ್ತೆ ಬದಿ ಕಾಡು ಕಡಿತ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿಲ್ಲ. ಪರಿಣಾಮವಾಗಿ ರಸ್ತೆಯಂಚಿನ ಮಣ್ಣು ಹಾಗೂ ಪೊದೆಗಳು ರಸ್ತೆಯನ್ನೇ ಆಕ್ರಮಿಸಿಕೊಂಡಿವೆ ಎಂದು ದೂರಿದರು. ಕಿರಿದಾಗಿರುವ ಈ ರಸ್ತೆಯಲ್ಲಿ ದೊಡ್ಡ ವಾಹನಗಳು ಎದುರಿಗೆ ಬಂದಾಗ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಬದಿಗೆ ಸರಿಯಲು ಸಹ ಜಾಗವಿಲ್ಲದಂತಾಗಿದೆ. ಇದರಿಂದ ಅಪಘಾತದ ಅಪಾಯ ಹೆಚ್ಚಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮಾಯಕ ಜೀವಗಳು ಬಲಿಯಾಗುವ ಆತಂಕ ಎದುರಾಗಿದೆ. ರಸ್ತೆ ಬದಿ ಕಾಡು ಕಡಿತಕ್ಕೆ ಮನವಿ ಮಾಡಿದಾಗ ‘ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ, ಆದ ಕೂಡಲೇ ಕಡಿಸುತ್ತೇವೆ’ ಎಂದು ಅಧಿಕಾರಿಗಳು ಹೇಳುತ್ತಿದ್ದು, ಹಲವು ದಿನಗಳಿಂದ ಇದೇ ನೆಪ ಮುಂದುವರಿದಿದೆ ಎಂದು ಅವರು ಆರೋಪಿಸಿದರು. :: ಪಿಡಬ್ಲ್ಯುಡಿ ರಸ್ತೆ ಒತ್ತುವರಿ; ನೋಟಿಸ್‌ಗೂ ಕ್ಯಾರೆ ಎನ್ನದ ಒತ್ತುವರಿದಾರರು ::  ರಸ್ತೆಯ ಬದಿಯಲ್ಲಿರುವ ಕೆಲ ತೋಟದ ಮಾಲೀಕರು ಸಾರ್ವಜನಿಕ ಪಿಡಬ್ಲ್ಯುಡಿ ರಸ್ತೆಯನ್ನು ಮನಬಂದಂತೆ ಒತ್ತುವರಿ ಮಾಡಿಕೊಂಡು ಹೊಸ ಬೇಲಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದ ರಸ್ತೆ ಮತ್ತಷ್ಟು ಕಿರಿದಾಗಿದ್ದು, ಮುಂದಿನ ದಿನಗಳಲ್ಲಿ ಈ ರಸ್ತೆಯ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ಪ್ರಶ್ನೆ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರು ಈಗಾಗಲೇ ಎರಡು-ಮೂರು ಬಾರಿ ಸಂಬಂಧಪಟ್ಟ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಿದ್ದರೂ, ಒತ್ತುವರಿದಾರರು ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಲಾಗಿದೆ. ರಸ್ತೆಯಂಚಿನ ಕಾಡು ತೆರವುಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದ್ದರೂ, ‘ಟೆಂಡರ್ ಆಗುತ್ತಿದೆ, ಆದ ಕೂಡಲೇ ಕಾಡು ಕಡಿಸುತ್ತೇವೆ’ ಎಂದು ಹೇಳಿ ಕಾಲಹರಣ ಮಾಡಲಾಗುತ್ತಿದೆ ಎಂದು ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು. ‘ಅಭಿವೃದ್ಧಿ ಕಾಮಗಾರಿಗಳಿಗೆ ಇಲಾಖೆಯಲ್ಲಿ ಹಣದ ಕೊರತೆ ಇದ್ದರೆ ಅಧಿಕಾರಿಗಳು ಅದನ್ನು ಬಹಿರಂಗವಾಗಿ ಘೋಷಿಸಲಿ. ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಜನಸಾಮಾನ್ಯರ ಪ್ರಾಣದ ಬೆಲೆ ಇಲ್ಲದಿರಬಹುದು. ಆದರೆ ನಮ್ಮ ಗ್ರಾಮದ ಅಮಾಯಕ ಜೀವಗಳ ಬೆಲೆ ನಮಗೆ ಗೊತ್ತಿದೆ. ಹಣದ ಕೊರತೆ ಇದ್ದರೆ ಗ್ರಾಮಸ್ಥರೆಲ್ಲರೂ ಸೇರಿ ಐದು-ಹತ್ತು ರೂಪಾಯಿ ಚಂದಾ ಸಂಗ್ರಹಿಸಿಕೊಂಡಾದರೂ ರಸ್ತೆ ಬದಿ ಕಾಡು ಕಡಿಸುವ ಕೆಲಸ ಮಾಡುತ್ತೇವೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಉನ್ನತಾಧಿಕಾರಿಗಳು ಮಧ್ಯಪ್ರವೇಶಿಸಿ, ಸಾರ್ವಜನಿಕ ರಸ್ತೆಯ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು. ಪಿಡಿಒ ನೋಟಿಸ್‌ಗೂ ಸ್ಪಂದಿಸದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ರಸ್ತೆಯಂಚಿನ ಕಾಡು ಹಾಗೂ ಪೊದೆಗಳನ್ನು ತೆರವುಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರ ಪರವಾಗಿ ಎಂ.ಎಂ. ಪರಮೇಶ್ವರ ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.