Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
  • *ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
  • *ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*
  • *ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*
  • *ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.2 NEWS DESK : ನಾವು ವನ್ಯಜೀವಿಗಳ ಬಗ್ಗೆ ಪ್ರೀತಿ ಮತ್ತು ಗೌರವವನ್ನು ಬೆಳೆಸಿಕೊಂಡು ಮಾನವ- ವನ್ಯಜೀವಿಗಳ ಸಂಘರ್ಷವನ್ನು ತಡೆಯುವ ಮೂಲಕ ನಮ್ಮ ಉತ್ತಮ ಭವಿಷ್ಯಕ್ಕಾಗಿ ಪ್ರಕೃತಿ, ಪರಿಸರ ಸಂರಕ್ಷಣೆ ಮತ್ತು ಮುಂದಿನ ಪೀಳಿಗೆಯ ರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾರುತಿ ಎಸ್.ಬಾಗಡೆ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಗ್ರೀನ್ ಸಿಟಿ ಫೋರಂ, ಕ್ಲೀನ್ ಕೂರ್ಗ್ ಇನಿಷಿಯೇಟಿವ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ, ಇಕೋ ಕ್ಲಬ್ ಘಟಕ ಹಾಗೂ ವಿವಿಧ ಸಂಘ- ಸಂಸ್ಥೆ ಶಾಲಾ-ಕಾಲೇಜು ಸಹಯೋಗದೊಂದಿಗೆ “ಆವಾಸಸ್ಥಾನಗಳ ಸಂಪರ್ಕ, ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ 72 ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಮಡಿಕೇರಿ ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ಬೈಸಿಕಲ್ ಮತ್ತು ಬೈಕ್ ಜಾಥಾಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು. ಮಾನವ ಮತ್ತು ಆನೆ ಸಂಘರ್ಷ ತಡೆಯಲು ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು. ವನ್ಯಜೀವಿಗಳ ಬಗ್ಗೆ ಪ್ರೀತಿ ಮತ್ತು ಗೌರವವನ್ನು ಬೆಳೆಸಿಕೊಳ್ಳುವುದು ನಮ್ಮ ಪ್ರಕೃತಿಯನ್ನು ರಕ್ಷಿಸಲು ಮತ್ತು ಈ ಭೂಮಿಯನ್ನು ಮುಂದಿನ ಪೀಳಿಗೆಗೆ ಸುಂದರವಾಗಿಡಲು ಅತ್ಯಂತ ಅವಶ್ಯಕವಾಗಿದೆ. ಪ್ರಾಣಿ, ಪಕ್ಷಿ ಮತ್ತು ಪರಿಸರದ ಮೇಲಿನ ಪ್ರೀತಿ ಕೇವಲ ಕರುಣೆಯಲ್ಲ, ಅದು ನಮ್ಮ ಅಸ್ತಿತ್ವದ ಭಾಗವಾಗಿದೆ ಎಂದರು. ಅರಣ್ಯಕ್ಕೆ ಮನುಷ್ಯ ಯಾವುದೇ ಹಾನಿ ಉಂಟು ಮಾಡದೇ ಸಸ್ಯ ಹಾಗೂ ಪ್ರಾಣಿ ಸಂಕುಲದ ಸಂರಕ್ಷಣೆ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಯೊಂದು ಪ್ರಾಣಿ-ಪಕ್ಷಿಗಳು ಪರೋಕ್ಷವಾಗಿ ಮಾನವನಿಗೆ ಉಪಕಾರವನ್ನೇ ಮಾಡುತ್ತಾ ಬಂದಿವೆ. ಯಾವುದೇ ಪ್ರಾಣಿ-ಪಕ್ಷಿಗಳು ನಶಿಸದಂತೆ ಜಾಗ್ರತೆ ವಹಿಸಬೇಕು ಎಂದು ಸತ್ರ ನ್ಯಾಯಾಧೀಶರಾದ ಮಾರುತಿ ಎಸ್.ಬಾಗಡೆ ಕಿವಿಮಾತು ಹೇಳಿದರು. ವನ್ಯಜೀವಿ ಸಪ್ತಾಹ ಜಾಗೃತಿ ಅಭಿಯಾನದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯು ಕೇವಲ ಅಕ್ಟೋಬರ್ ಮಾಹೆಗೆ ಸೀಮಿತಗೊಳ್ಳದೇ ಇದನ್ನು ನಿರಂತರವಾಗಿ ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಮಾನವ ಮತ್ತು ವನ್ಯಜೀವಿಗಳ ಸಹಬಾಳ್ವೆ ಇಂದಿನ ಅಗತ್ಯವಾಗಿದೆ. ವನ್ಯಜೀವಿ ಸಪ್ತಾಹ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ನಿರಂತರ ಪ್ರಯತ್ನ ಅಗತ್ಯ’ ಎಂದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ, ಅರಣ್ಯ, ವನ್ಯಜೀವಿಗಳ ಸಂರಕ್ಷಣೆಗೆ ನಾಗರಿಕರ ಸಹಭಾಗಿತ್ವ ಅಗತ್ಯ ಎಂದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕøತ ಶಿಕ್ಷಕರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ.ಪ್ರೇಮಕುಮಾರ್, ‘ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ನಾವು ಪಣತೊಡಬೇಕು’ ಎಂದರು. ಪ್ರತಿಯೊಬ್ಬರೂ ಅರಣ್ಯ ಮತ್ತು ವನ್ಯಜೀವಿಗಳ ಜತೆಗೆ ಬದುಕುವುದನ್ನು ಕಲಿಯಬೇಕು. ಆಗ ಮಾತ್ರ ನಾವು ಪ್ರಕೃತಿ ಮತ್ತು ಪರಿಸರವನ್ನು ಸಮತೋಲನದಿಂದ ಕಾಪಾಡಲು ಸಾಧ್ಯ ಎಂದರು. ಪ್ರತಿಯೊಬ್ಬರೂ ನಿಸರ್ಗದ ನಿಯಮಗಳನ್ನು ಪರಿಪಾಲಿಸುವ ಮೂಲಕ ಭವಿಷ್ಯದ ದೃಷ್ಟಿಯಿಂದ ನೈಸರ್ಗಿಕವಾದ ವಾಸಸ್ಥಾನ ಕಾಯ್ದುಕೊಂಡು ಪರಿಸರ, ಪ್ರಕೃತಿ, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಈ ಕ್ಷಣದ ತುರ್ತು ಅಗತ್ಯಗಳಾಗಿವೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಡಿಸಿಎಫ್ ವಿ.ಅಭಿಷೇಕ್ (ಮಡಿಕೇರಿ ಟೆರ್ರಿಟರಿ ವಿಭಾಗ), ತೆಹಸೀನ್ ಬಾನು ದವಡಿ (ವನ್ಯಜೀವಿ ವಿಭಾಗ), ಶ್ರೀನಿವಾಸ್ ನಾಯಕ್( ಆನೆ ಕಾರ್ಯಪಡೆ), ಕೆ.ಪಿ.ಗೋಪಾಲ್( ಸಂಚಾರಿ ದಳ ವಿಭಾಗ), ಸಂದೀಪ್ ಪಿ.ಅಭಯಂಕರ್( ಸಾಮಾಜಿಕ ಅರಣ್ಯ ವಿಭಾಗ), ಎಸಿಎಫ್ ಗಳಾದ ವಿ.ಸೆಂದಿಲ್ ಕುಮಾರ್, ಜೆ. ಅನನ್ಯಕುಮಾರ್, ನವೀನ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಎಚ್.ಶಶಿಧರ್, ಲಯನ್ಸ್ ಕ್ಲಬ್ ಟ್ರಸ್ಟ್ ನ ಅಧ್ಯಕ್ಷ ಅಂಬೇಕಲ್ ನವೀನ್, ಕೊಡಗು ಟ್ರಾವೆಲ್ ಅಸೋಸಿಯೇಶನ್ ನ ಅಧ್ಯಕ್ಷ ಕುಪ್ಪಂಡ ವಸಂತ್, ಗ್ರೀನ್ ಸಿಟಿ ಫೋರಂ ನ ಮಾಜಿ ಅಧ್ಯಕ್ಷ ಜಯ ಚಿಣ್ಣಪ್ಪ, ವನ್ಯಜೀವಿ ವಿಭಾಗದ ಎಸಿಎಫ್ ಅನನ್ಯಕುಮಾರ್ ಹಾಗೂ ಪುಷ್ಪಗಿರಿ ವನ್ಯಜೀವಿ ವಲಯದ ಆರ್.ಎಫ್.ಓ. ಕೆ.ದಿನೇಶ್, ಗ್ರೀನ್ ಸಿಟಿ ಫೋರಂ ನ ಅಧ್ಯಕ್ಷ ಚೆಯ್ಯಂಡ ಜಿ.ಸತ್ಯ ಹಾಗೂ ಕ್ಲೀನ್ ಕೂರ್ಗ್ ಇನಿಷಿಯೇಟಿವ್‍ನ ಸಂಚಾಲಕ ಅರುಣ್ ಅಪ್ಪಚ್ಚು ಅವರ ನೇತೃತ್ವದಲ್ಲಿ ಬೈಸಿಕಲ್ ಹಾಗೂ ಬೈಕ್ ಜಾಥಾ ನಡೆಯಿತು. ಜಾಥಾದಲ್ಲಿ ಆರ್.ಎಫ್.ಓ.ಗಳಾದ ಕೋಟ್ರೇಶ್, ಎಚ್.ಎಸ್.ತ್ಯಾಗರಾಜ್, ವಿವೇಕ್, ಅರವಿಂದ್, ಶಿವಶಂಕರ್, ಪರಿಸರ ಕಾರ್ಯಕರ್ತರಾದ ಎಂ.ಎನ್. ವೆಂಕಟನಾಯಕ್, ಟಿ.ವಿ.ಶೈಲಾ, ಹರ್ಷಿತ ಶೆಟ್ಟಿ, ಕೆ.ವಿ.ಉಮೇಶ್, ಸಿ.ಡಿ.ಲೋಕೇಶ್, ಸಾಹುಲ್, ಅಶ್ವತ್, ಬನೀತ್ ಭೋಜಣ್ಣ, ಡಿಆರ್ ಎಫ್ ಗಳು, ಗ್ರೀನ್ ಸಿಟಿ ಫೋರಂ, ರಾಜ್ಯ ವಿಜ್ಞಾನ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕ್ಲೀನ್ ಕೂರ್ಗ್ ಇನಿಷಿಯೇಟಿವ್‍ನ ಸದಸ್ಯರು, ಅರಣ್ಯ ಸಿಬ್ಬಂದಿ, ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು , ವಿವಿಧ ಸಂಘ- ಸಂಸ್ಥೆಯ ಪದಾಧಿಕಾರಿಗಳು ಹಾಗೂ ನಾಗರಿಕರು ಪಾಲ್ಗೊಂಡಿದ್ದರು. ವಿರಾಜಪೇಟೆಯ ಲೀಟಲ್ ಕಾಲರ್ಸ್ ಅಕಾಡೆಮಿ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ಟಿ.ಎಂ.ಹಸ್ಮಿತ, ಅರಣ್ಯ, ವನ್ಯಜೀವಿಗಳು ಮತ್ತು ಪರಿಸರ ಸ್ವಚ್ಛತೆ ಕುರಿತು ಮಾತನಾಡಿ ಗಮನ ಸೆಳೆದರು. ಬೈಸಿಕಲ್ ಮತ್ತು ರ್ಯಾಲಿಯಲ್ಲಿ 100 ಕ್ಕೂ ಹೆಚ್ಚು ಉತ್ಸಾಹಿಗಳು ಭಾಗವಹಿಸಿ ವನ್ಯಜೀವಿಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸಿದರು. ಕುಶಾಲನಗರದ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಇ.ರಾಜು ಮತ್ತು ತಂಡದವರು ಪರಿಸರ ಗೀತೆ ಹಾಡುವ ಮೂಲಕ ಜಾಥಾಕ್ಕೆ ಮೆರಗು ನೀಡಿದರು. ಬೈಸಿಕಲ್ ಜಾಥಾವು ಮಡಿಕೇರಿ ನಗರದ ಅರಣ್ಯ ಭವನದಿಂದ ಆರಂಭಗೊಂಡು ಮಡಿಕೇರಿ ನಗರದ ಮುಖ್ಯ ರಸ್ತೆಯ ಮೂಲಕ ಟೌನ್‍ಹಾಲ್, ಚೌಕಿ ಮತ್ತು ಮಹದೇವಪೇಟೆ ಮಾರ್ಗವಾಗಿ 4.5 ಕಿ.ಮೀ.ನಷ್ಟು ದೂರ ಕ್ರಮಿಸಿ ಸ್ವಾಗತಬೆಟ್ಟದ ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ನಲ್ಲಿ ಸಮಾಪನಗೊಂಡಿತು. ಜಾಥಾದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದಂತೆ ಘೋಷಣಾ ಫಲಕಗಳೊಂದಿಗೆ ವನ್ಯಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ…

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026

*ಭಾಗ್ಯವತಿ ಸಿ.ಜೆ. ಅವರಿಗೆ ರಾಷ್ಟ್ರಮಟ್ಟದ ‘ಕಾಯಕ ಕಣ್ಣಮಣಿ’ ಪ್ರಶಸ್ತಿ*

ಅಕ್ಟೋಬರ್ 2, 2026

*ಸ್ವಸ್ಥ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ*

ಅಕ್ಟೋಬರ್ 2, 2026

*ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಗೋಣಿಕೊಪ್ಪದಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.