ಬಾಳೆಲೆ, NEWS DESK ಅ.2: ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣವನ್ನು ಸ್ವಚ್ಛಗೊಳಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಅಧ್ಯಾಪಕ ರಾಘವೇಂದ್ರ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೀವನ ಚರಿತ್ರೆ, ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರತಿಭಾ ಉತ್ತಪ್ಪ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








