ಸುಂಟಿಕೊಪ್ಪ, NEWS DESK ಅ.2: ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವತಿಯಿಂದ ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸ್ವಸ್ಥ ಸಂಸ್ಥೆಯ ವಿಶೇಷ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಅತಿಥಿಗಳ ವತಿಯಿಂದ ಮಕ್ಕಳಿಗೆ ವಿಶೇಷ ಔತಣದ ವ್ಯವಸ್ಥೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ಅಧ್ಯಕ್ಷೆ ಜುಥಿಕ ಬೋಪಣ್ಣ, ಸುಂಟಿಕೊಪ್ಪ ಪ್ರಾಂತ್ಯದ ಮುಖ್ಯಸ್ಥೆ ಸುಮಾ ತಿಮ್ಮಯ್ಯ, ಕಾನೂರು ಪ್ರಾಂತ್ಯದ ಮುಖ್ಯಸ್ಥೆ ರಮ್ಯಾ ನರೇನ್ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.
ಸ್ವಸ್ಥ ಸಂಸ್ಥೆಯ ನಿರ್ದೇಶಕಿ ಆರತಿ ಸೋಮಯ್ಯ, ಶಿಕ್ಷಕರು ಹಾಗೂ ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








