ವಿರಾಜಪೇಟೆ, NEWS DESK ಅ.02: ಸಮೀಪದ ಬೇಟೋಳಿ ರಾಮನಗರದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹೆಗ್ಗಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಸೇವಾ ಭಾರತಿ ಸಂಸ್ಥೆಯ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.
ಮಾಯಿಲಮಕ್ಕಿಯಿಂದ ರಾಮನಗರದವರೆಗೆ ನಡೆದ ಅಭಿಯಾನದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಹಾಗೂ ಸೇವಾ ಭಾರತಿ ತಂಡದ ಸದಸ್ಯರು ರಸ್ತೆಯ ಇಕ್ಕೆಲಗಳಲ್ಲಿ ಎಸೆಯಲಾಗಿದ್ದ ಪ್ಲಾಸ್ಟಿಕ್, ಪೇಪರ್, ಬಾಟಲಿ ಸೇರಿದಂತೆ ತ್ಯಾಜ್ಯವನ್ನು ಸಂಗ್ರಹಿಸಿ ಪಂಚಾಯತ್ ವಾಹನಕ್ಕೆ ಹಾಕಿದರು.
ರಾಮನಗರದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸೇವಾ ಭಾರತಿ ಸಂಸ್ಥೆಯ ರಕ್ಷಿತ್, ಗೌರಿಶಂಕರ್, ವಿದ್ಯಾ ಪ್ರಸಾದ್, ಸಂಗೀತ, ಹೆಗ್ಗಳ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುನಿತಾ ಹಾಗೂ ಸಹಶಿಕ್ಷಕರು, ಅಭಿಯಾನಕ್ಕೆ ಸಹಕಾರ ನೀಡಿದ ವೇಣುಗೋಪಾಲ್, ರಘು, ಲತೀಶ್, ಸುದೀಶ್, ಮಹೇಶ್, ರಜಾಕ್, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








