ವಿರಾಜಪೇಟೆ, NEWS DESK ಅ.02: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಜಯಂತಿಯ ಅಂಗವಾಗಿ ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಕಾಲೇಜಿನ ಒಳ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಗಳು ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಎನ್ಎಸ್ಎಸ್ ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯಾಗಿದ್ದು, ವಿದ್ಯಾರ್ಥಿಗಳು ಸದಾ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅವರು ಗಾಂಧೀಜಿಯವರ ಚಿಂತನೆಗಳು ಹಾಗೂ ಆದರ್ಶಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಬಿ.ಎನ್. ಶಾಂತಿಭೂಷಣ್, ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ನಾಯಕರಾದ ಮುತ್ತಪ್ಪ, ಲಿಪಿಕಾ, ಸಾಧ್ವಿಕ, ಅನನ್ಯ, ಲಿತಿನ್, ಆಪ್ತ ತಮ್ಮಯ್ಯ, ಬೋಪಣ್ಣ, ನೇಹಾ ಸೇರಿದಂತೆ ಸ್ವಯಂಸೇವಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.








