Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಅ.2 NEWS DESK :: ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು. ​ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳು ಪೂರೈಸಿದ ನೆನಪಿಗಾಗಿ “ಗಾಂಧಿ ಭಾರತ” ಅಭಿಯಾನದಡಿಯಲ್ಲಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ಸ್ಮಾರಕ ಸ್ತಂಭಗಳನ್ನು ನಿರ್ಮಿಸಲಾಗುತ್ತಿದೆ. ಶಾಸಕರು ಹಾಗೂ ಗಾಂಧಿ ಭಾರತ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಚ್. ಕೆ. ಪಾಟೀಲ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಬಿ.ಎಲ್.ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಐ.ಎ.ಎಸ್. ಸೇರಿದಂತೆ ಗಾಂಧಿ ಭಾರತ ಸಮಿತಿಯ ಪದಾಧಿಕಾರಿಗಳು, ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕರು, ಅಪಾರ ಸಂಖ್ಯೆಯ ವಿಧ್ಯಾರ್ಥಿಗಳು ಈ ‌ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಗಾಂಧಿ ಸ್ಮಾರಕ ಸ್ತಂಭ ಸಿದ್ದಡಿಸಿದ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ ಕುಮಾರ್ ಜಿ.ಸಿ. ನಿರ್ಮಿತಿ ಕೇಂದ್ರದ ಅಭಿಯಂತರರಾದ ರಾಜೀವ್ ಅವರನ್ನು ಸನ್ಮಾನಿಸಿದರು. ಅಲ್ಲದೇ ಈ ಮಹತ್ವದ ಕಾರ್ಯಕ್ರಮಕ್ಕೆ ಸಾಕ್ಷಿಯಾದಂತೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಗಿಡ ನೆಟ್ಟು ನೀರೆರದರು. :: ​ಬೆಂಗಳೂರಿನ ಐತಿಹಾಸಿಕ ಕ್ಷಣ :: ಮಹಾತ್ಮ ಗಾಂಧೀಜಿಯವರು ತಮ್ಮ ಪತ್ನಿ ಕಸ್ತೂರಬಾ ಅವರೊಂದಿಗೆ 1915ರ ಮೇ 8ರ ಶನಿವಾರದಂದು ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಅಂದು ಆಗಿನ ಸರ್ಕಾರಿ ಪ್ರೌಢಶಾಲೆಗೆ (ಇಂದಿನ ಸರ್ಕಾರಿ ಕಲಾ ಕಾಲೇಜು) ಭೇಟಿ ನೀಡಿ, ತಮ್ಮ ರಾಜಕೀಯ ಗುರುಗಳಾಗಿದ್ದ ಗೋಪಾಲಕೃಷ್ಣ ಗೋಖಲೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದ್ದರು. ಅದರ ನೆನಪಿಗಾಗಿ ಈ ಸಭಾಂಗಣಕ್ಕೆ ಬಾಪೂಜಿ ಅವರ ಹೆಸರು ಇರಿಸಲಾಗಿದ್ದು, ಈಗ ಇದೇ ಆವರಣದಲ್ಲಿ ಮೊದಲ ಗಾಂಧಿ ಸ್ಮಾರಕ ಸ್ತಂಭ ನಿರ್ಮಿಸಲಾಗಿದೆ. :: ​ಆಕರ್ಷಕ ಸ್ಮಾರಕ ಸ್ತಂಭದ ವಿವರ::  ಶಿಲ್ಪಿ: ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಈ ಸ್ಮಾರಕದ ಆಕರ್ಷಕ ಕಲಾಕೃತಿಯನ್ನು ಸಿದ್ಧಪಡಿಸಿದ್ದು, ಸ್ಮಾರಕವು 10 ಅಡಿ ಎತ್ತರ ಹಾಗೂ 3 1/4 (ಮೂರು ಕಾಲು) ಅಡಿ ಅಗಲದ ಏಕಶಿಲಾ ಗ್ರಾನೈಟ್ ಕಲಾಕೃತಿ ಹೊಂದಿದೆ. ವಿನ್ಯಾಸ: ಸ್ತಂಭದ ಮೇಲ್ಭಾಗದಲ್ಲಿ ನಾಲ್ಕು ಮುಖ ಸಿಂಹವುಳ್ಳ ರಾಷ್ಟ್ರೀಯ ಲಾಂಛನ, ಅದರ ಕೆಳಗೆ ಅಶೋಕ ಚಕ್ರ, ಧ್ಯಾನಸ್ಥ ಮಹಾತ್ಮ ಗಾಂಧೀಜಿ, ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳು, ಗಾಂಧೀಜಿಯವರ ಸಹಿ ಹಾಗೂ ಚರಕದ ಚಿತ್ರಣವಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ. ಎನ್. ಅನುಚೇತ್ ತಿಳಿಸಿದ್ದಾರೆ.

​

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.19: ಸ್ವಸ್ತಿಕ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಕೊಡವ ಚಲನಚಿತ್ರ…

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.