ವಿರಾಜಪೇಟೆ, NEWS DESK ಅ.03: ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ಸಮಸ್ಯೆಗಳು, ಶಾಲೆಗಳಿಗೆ ಅನ್ವಯವಾಗುವ ನಿಯಮಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಕುರಿತು ಶಾಸಕರೊಂದಿಗೆ ಸಮಾಲೋಚನೆ ನಡೆಸಲಾಯಿತು. ಖಾಸಗಿ ಶಾಲೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆಯೂ ಒಕ್ಕೂಟದ ಪದಾಧಿಕಾರಿಗಳು ಗಮನ ಸೆಳೆದರು.
ಈ ಸಂದರ್ಭದಲ್ಲಿ ಕೊಡಗು ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೊಟ್ರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಮಣಿ ಮಹಮ್ಮದ್, ಕಾನೂನು ಸಲಹೆಗಾರ ಎಂ. ಎಸ್. ಪೂವಯ್ಯ, ಸದಸ್ಯರಾದ ಮದಂಡ ತಿಮ್ಮಯ್ಯ, ಶ್ವೇತಾ ಚಂಗಪ್ಪ, ಇಲಾಯಸ್ ಹಾಗೂ ನೀರನ್ ಉತ್ತಪ್ಪ ಉಪಸ್ಥಿತರಿದ್ದರು.







