Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
  • *ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.3 : ಈ ಬಾರಿ ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಎಚ್ಚರಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಆಡಳಿತ ವತಿಯಿಂದ ವಿರಾಜಪೇಟೆ ಬಳಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ. ಇದರಿಂದಾಗಿ ಆಹಾರ ಉತ್ಪಾದನೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ, ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಮತ್ತಿತರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು. ಮುಂದಿನ ದಿನಗಳಲ್ಲಿ ಮೂರರಿಂದ ಆರು ಡಿಗ್ರಿ ಸೆಂಟಿಗ್ರೇಡ್ ನಷ್ಟು ಬಿಸಿಲಿನ ಪ್ರಖರತೆ ಹೆಚ್ಚಾಗಲಿದೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಕಿವಿಮಾತು ಹೇಳಿದರು.       ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಲಿದೆ. ಸೈಕ್ಲೋನ್ ಪರಿಣಾಮದಿಂದ ಅಲ್ಪಸ್ವಲ್ಪ ಮಳೆ ಆಗಬಹುದು ಎಂದರು. ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕೃಷಿ ಸಚಿವರ ಸಮ್ಮೇಳನದಲ್ಲಿ ಈ ಮಾಹಿತಿ ದೊರೆತಿದೆ ಎಂದು ಸಚಿವರು ತಿಳಿಸಿದರು. ಕೊಡಗು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ಪ್ರಜಾಸೇವಾ ಅಭಿಯಾನ ಆಯೋಜಿಸಿದ್ದು, ತಾಲ್ಲೂಕು, ಹೋಬಳಿ, ಗ್ರಾ.ಪಂ.ಮಟ್ಟದಲ್ಲಿಯೂ ಸಭೆ ನಡೆಸಿ ಪರಿಹಾರ ಒದಗಿಸಲು ಮುಂದಾಗಲಾಗಿದೆ ಎಂದು ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಹೇಳಿದರು.       ಸರ್ಕಾರ ಗ್ಯಾರಂಟಿ ಯೋಜನೆ ಜೊತೆಗೆ ಹಲವು ಕಾರ್ಯಕ್ರಮ ನೀಡುತ್ತಿದೆ. ಪಾರದರ್ಶಕ ಆಡಳಿತ ನೀಡಲು ಸರ್ಕಾರ ಮುಂದಾಗಿದೆ ಎಂದರು. ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ಕೃಷಿ ಯಂತ್ರೋಪಕರಣ ಬದಲಾಗಿ, 3 ಎಕರೆ ಒಳಗೆ ಇರುವ ಭೂಮಿಯನ್ನು ಸರ್ಕಾರವೇ ಉಳುಮೆ ಮಾಡಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ಪ್ರಜಾಸೇವಾ ಆಂದೋಲನವನ್ನು ವಿವಿಧ ಹಂತದಲ್ಲಿ ಆಯೋಜಿಸಿದ್ದು, ಅಧಿಕಾರಿಗಳು ಬದ್ಧತೆ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಆಡಳಿತ ನಡೆಸಬೇಕು ಎಂದು ಸಲಹೆ ನೀಡಿದರು. ಸರ್ಕಾರ ಎಲ್ಲಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಸಲಹೆ ಮಾಡಿದರು. ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕ್ರೀಡಾ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಜಾನ್ಸನ್, ಬಗರ್ ಹುಕುಂ ಸಮಿತಿ ಅಧ್ಯಕ್ಷರಾದ ಅಬ್ದುಲ್ ಸಲಾಂ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್, ತಹಶಿಲ್ದಾರರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು. ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸೆಸ್ಕ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಆಹಾರ ಹೀಗೆ ವಿವಿಧ ಇಲಾಖೆಗಳಿಂದ ಮಾಹಿತಿ ಮಳಿಗೆ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು, ಸಚಿವರು ಮಾಹಿತಿ ಮಳಿಗೆ ವೀಕ್ಷಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.3 : ಈ ಬಾರಿ ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ…

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026

*ಮಡಿಕೇರಿಯಲ್ಲಿ 72ನೇ ವನ್ಯಜೀವಿ ಸಪ್ತಾಹ : ವನ್ಯಜೀವಿಗಳ ಸಂರಕ್ಷಣೆ ಜಾಗೃತಿಗಾಗಿ ಬೈಸಿಕಲ್, ಬೈಕ್ ಜಾಥಾ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.