Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.3 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ ಮತ್ತು ಪ್ರಕರಣವನ್ನು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಕೊಡಗು ಜಿಲ್ಲಾ ಸಮಿತಿ ನಗರದ ಇಂದಿರಾಗಾoಧಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು. ಫಾರಂ ನಂ.7ರ ಮೂಲಕ ಅಲ್ಪಸಂಖ್ಯಾತರ ಹೆಸರನ್ನು ಮತಪಟ್ಟಿಯಿಂದ ತೆಗೆಯುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಮಾತನಾಡಿ, ಪ್ರಸ್ತುತ ಜಾರಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಎನ್ನುವುದು ಕಾನೂನು ಬಾಹಿರವಾದುದು. ಈ ಹಿಂದೆಯೆ ಎಸ್‌ಡಿಪಿಐ ಪಕ್ಷ ಎಸ್‌ಐಆರ್ ಪ್ರಕ್ರಿಯೆಗೆ ಸಂಬAಧಿಸಿದAತೆ ಹಲವಾರು ಆಕ್ಷೇಪಣೆಗಳನ್ನು ಸಲ್ಲಿಸಿದೆ. ಅಲ್ಲದೆ ಒಟ್ಟು ಪ್ರಕ್ರಿಯೆಯನ್ನು ಕೈಬಿಡುವಂತೆ ಜಾನಾಗ್ರಹ ಸಮಾವೇಶ ನಡೆಸಿ ಒತ್ತಾಯಿಸಿದೆ. ಆದರೆ ಎಸ್‌ಐಆರ್ ಗೊಂದಲ ಮುಂದುವರೆದಿದ್ದು, ಮತದಾರರ ಹಕ್ಕಿಗೆ ಚ್ಯುತಿ ಬರುತ್ತಿದೆ ಎಂದು ಟೀಕಿಸಿದರು. ಪ್ರಸ್ತುತ ನಮ್ಮ ಆಕ್ಷೇಪಣೆಗಳಿಗೆ ಪೂರಕವಾಗಿ ಬ್ಯಾಡಗೊಟ್ಟದ ಮತಗಟ್ಟೆ ಸಂಖ್ಯೆ 21ಕ್ಕೆ ಸಂಬoಧಿಸಿದoತೆ 63 ಫಾರಂ ನಂ.7 ಸಲ್ಲಿಕೆಯಾಗಿದ್ದು, ಈ ಫಾರಂಗಳನ್ನು ಬಿಜೆಪಿ ಪಕ್ಷದ ಬಿಎಲ್‌ಎಗಳು ಸಲ್ಲಿಸಿದ್ದಾರೆ. ಆಶ್ಚರ್ಯವೆಂದರೆ, ಈ ಫಾರಂಗಳು ಆ ಪಕ್ಷದ ಕಛೇರಿಯಿಂದ ನೀಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೇವಲ ಒಂದು ಮತಗಟ್ಟೆಯಲ್ಲಿ ಈ ಪ್ರಮಾಣದಲ್ಲಿ ಫಾರಂ ನಂ.7 ಸಲ್ಲಿಸುವ ಮೂಲಕ ಮತಪಟ್ಟಿಯಿಂದ ಹೆಸರು ತೆಗೆಯುವ ಹುನ್ನಾರ ನಡೆದಿದೆಯಾದರೆ, ಕ್ಷೇತ್ರವಾರು ಇರುವ ಸರಿ ಸುಮಾರು 200 ಮತಗಟ್ಟೆಗಳನ್ನು ಪರಿಗಣಿಸಿದಲ್ಲಿ ಸಾವಿರಾರು ಮತದಾರರ ಹೆಸರನ್ನು ಮತಪಟ್ಟಿಯಿಂದ ತೆಗೆಯುವ ಹುನ್ನಾರ ನಡೆದಿರಬಹುದೆಂದು ಆರೋಪಿಸಿದರು.
ಈ ಎಲ್ಲಾ ಕಾರಣಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ಸಮಿತಿಯನ್ನು ರಚಿಸಿ ಜಿಲ್ಲೆಯ ಪ್ರತಿಯೊಂದು ಬೂತ್‌ಗಳಲ್ಲಿ ಪರಿಶೀಲನೆ ನಡೆಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು. ಇದರೊಂದಿಗೆ ಇದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಅಮೀನ್ ಮೊಹಿಸಿನ್ ಒತ್ತಾಯಿಸಿದರು.
ಎಸ್‌ಡಿಪಿಐ ಉಪಾಧ್ಯಕ್ಷ ಹಾಗೂ ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಅವರು ಮಾತನಾಡಿ, ಫಾರಂ ನಂ.7 ನ್ನು ಬಳಸಿಕೊಳ್ಳುವ ಮೂಲಕ ಅಲ್ಪಸಂಖ್ಯಾತರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯುವ ಕಾರ್ಯ ನಡೆದಿರುವುದು ಬ್ಯಾಡಗೊಟ್ಟ ಪ್ರಕಣದಿಂದ ಸಾಬೀತಾಗಿದೆ. ಕೇವಲ ಬಿಜೆಪಿ ಬಿಎಲ್‌ಎಗಳು ಮಾತ್ರ ಪಾಲ್ಗೊಂಡಿಲ್ಲ, ಬದಲಾಗಿ ಆ ಪಕ್ಷದ ಪ್ರಮುಖರ ಪಾತ್ರವೂ ಈ ಪ್ರಕರಣದಲ್ಲಿದೆ ಎಂದು ಆರೋಪಿಸಿದರು. ಪ್ರತಿಭಟನೆಯ ಬಳಿಕ ಪಕ್ಷದ ಪ್ರಮುಖರು ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಬ್ಯಾಡಗೊಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಪ್ರಕಣ ದಾಖಲಿಸಬೇಕೆಂದು ಒತ್ತಾಯಿಸಿದರು. ಪ್ರಕರಣಕ್ಕೆ ಸಂಬoಧಿಸಿದoತೆ ನಮೂನೆ-7ನ್ನು ಸಿದ್ಧಪಡಿಸುವುದು, ಮುದ್ರಿಸುವುದು ಹಾಗೂ ಸಲ್ಲಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಎಲ್ಲರ ಪಾತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಂಬAಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುವ ಅಥವಾ ಸೇರ್ಪಡೆಗೊಳಿಸುವ ಪ್ರಯತ್ನಗಳು ನಡೆದಿರುವ ಬಗ್ಗೆ ಬಂದಿರುವ ಎಲ್ಲಾ ದೂರುಗಳನ್ನು ಪರಿಶೀಲಿಸಬೇಕು. ದಾಖಲೆಗಳು, ನಮೂನೆಗಳು, ಡಿಜಿಟಲ್ ದಾಖಲೆಗಳು, ಸಿಸಿಟಿವಿ ದೃಶ್ಯಗಳು ಸೇರಿದಂತೆ ಸಂಬAಧಿತ ಸಾಕ್ಷ್ಯಗಳನ್ನು ಸಂರಕ್ಷಿಸಬೇಕು. ಪ್ರಕರಣವು ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿದೆಯೇ ಅಥವಾ ರಾಜ್ಯದ ಇತರ ಭಾಗಗಳಲ್ಲಿಯೂ ಇಂತಹ ಅಕ್ರಮಗಳು ನಡೆದಿವೆಯೇ ಎಂಬುವುದನ್ನು ಪತ್ತೆಹಚ್ಚಲು ರಾಜ್ಯ ಮಟ್ಟದ ಎಸ್‌ಐಟಿ ರಚಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮಾಜಿ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ನಗರಸಭಾ ಸದಸ್ಯರಾದ ಬಷೀರ್, ಮೇರಿ ವೆಗಸ್, ಸಮಾಜಿಕ ಹೋರಾಟಗಾರರಾದ ಕೆ.ಮೊಣ್ಣಪ್ಪ, ಡಿ.ಎಸ್.ನಿರ್ವಾಣಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.3 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ…

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.