Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ, NEWS DESK  ಅ.3: ಪ್ರಜಾ ಸೇವೆ ಅಭಿಯಾನದಲ್ಲಿ ಕೇವಲ ಅರ್ಜಿಗಳನ್ನು ಸ್ವೀಕರಿಸುವುದಷ್ಟೇ ಅಲ್ಲದೆ, ಅರ್ಜಿಗಳಲ್ಲಿರುವ ಸಮಸ್ಯೆ ಮತ್ತು ಬೇಡಿಕೆಗಳಿಗೆ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸುವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗುರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಶನಿವಾರ ಸುಂಟಿಕೊಪ್ಪ ಹೋಬಳಿ ಮಟ್ಟದ ಪ್ರಜಾ ಸೇವೆ ಅಭಿಯಾನದ ಅಂಗವಾಗಿ ಕೊಡಗರಹಳ್ಳಿ ಗ್ರಾಮದ ನೇತಾಜಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯದಂತೆ ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವ ಕಾರ್ಯ ನಡೆಯುತ್ತಿದೆ. ಇಂದಿನ ಸಭೆಯಲ್ಲಿ 60ರಿಂದ 70ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಕಂದಾಯ, ಅರಣ್ಯ, ರಸ್ತೆ, ಶಿಕ್ಷಣ, ಆರೋಗ್ಯ, ವಸತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಬೇಡಿಕೆಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಶಾಸಕ ಮಂತರ್‌ಗೌಡ ತಿಳಿಸಿದರು.

ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ತಹಶೀಲ್ದಾರ್ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಪಡೆ ರಚಿಸುವ ಅಗತ್ಯವಿದೆ. ತಹಶೀಲ್ದಾರ್‌ಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯವಿರುವ ಕಡೆ ಕೊಳವೆ ಬಾವಿ ಅಥವಾ ಇತರ ಮೂಲಗಳ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮಂತರ್‌ಗೌಡ ಅವರು ಸರದಿ ಪ್ರಕಾರ ಅರ್ಜಿದಾರರನ್ನು ಕರೆದು, ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮೇಲಾಧಿಕಾರಿಗಳ ಸಮ್ಮುಖದಲ್ಲಿ ಅಹವಾಲುಗಳನ್ನು ಆಲಿಸಿದರು. ಸಮಸ್ಯೆಗಳಿಗೆ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿ ಪಟ್ಟಿಯಲ್ಲಿ ಉಂಟಾಗಿರುವ ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಹಲವು ವಯೋವೃದ್ಧರು ಶಾಸಕರಿಗೆ ಮನವಿ ಸಲ್ಲಿಸಿದರು. ವಸತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಮನೆ ದೊರೆಯದಿರುವ ಬಗ್ಗೆ ಕೆಲವರು ಗಮನ ಸೆಳೆದರು. ಈ ಕುರಿತು ಪರ್ಯಾಯ ವ್ಯವಸ್ಥೆ ಸೇರಿದಂತೆ ವಸತಿ ಯೋಜನೆಗೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮೇಲಾಧಿಕಾರಿಗಳು ಗಮನಹರಿಸುವಂತೆ ಶಾಸಕ ಮಂತರ್‌ಗೌಡ ಸೂಚಿಸಿದರು.

ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ರವರ್ತಿ, ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ತಾಲೂಕು ಪ್ರಭಾರ ತಹಶೀಲ್ದಾರ್ ಕೃಷ್ಣಮೂರ್ತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಪಿ. ಅಪ್ಪಣ್ಣ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್, ಆರ್‌ಎಫ್‌ಒ ರಕ್ಷಿತ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ 16 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಸಾರ್ವಜನಿಕರ ರಕ್ತದೊತ್ತಡ ಹಾಗೂ ರಕ್ತದಲ್ಲಿನ ಸಕ್ಕರೆ ಪ್ರಮಾಣ ಪರೀಕ್ಷಿಸುವ ಶಿಬಿರವನ್ನು ಆಯೋಜಿಸಲಾಗಿತ್ತು. ಸಾರ್ವಜನಿಕರಿಗೆ ಅಗತ್ಯವಿರುವ ದಾಖಲಾತಿಗಳ ತಿದ್ದುಪಡಿ, ಜನನ ಮತ್ತು ಮರಣ ಪ್ರಮಾಣಪತ್ರ ಸೇರಿದಂತೆ ವಿವಿಧ ಅರ್ಜಿಗಳ ವಿಲೇವಾರಿಗೆ ಗ್ರಾಮ ಒನ್ ಕೇಂದ್ರದ ವತಿಯಿಂದ ಸಕಾಲ ವ್ಯವಸ್ಥೆಯನ್ನೂ ಕಲ್ಪಿಸಲಾಗಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್ ಪ್ರಾರ್ಥಿಸಿದರು. ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್ ಸ್ವಾಗತಿಸಿ, ಬಳಿಕ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK  ಅ.3: ಪ್ರಜಾ ಸೇವೆ ಅಭಿಯಾನದಲ್ಲಿ ಕೇವಲ ಅರ್ಜಿಗಳನ್ನು ಸ್ವೀಕರಿಸುವುದಷ್ಟೇ ಅಲ್ಲದೆ, ಅರ್ಜಿಗಳಲ್ಲಿರುವ ಸಮಸ್ಯೆ ಮತ್ತು ಬೇಡಿಕೆಗಳಿಗೆ…

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.