ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ’ ಅಡಿಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತ ಆನ್ಲೈನ್ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಈ ಯೋಜನೆ ಸಹಕಾರಿಯಾಗಲಿದೆ. ಯಾವುದೇ ಶುಲ್ಕವಿಲ್ಲದೆ ಅನುಭವಿ ಹಾಗೂ ಪರಿಣಿತ ಉಪನ್ಯಾಸಕರಿಂದ ಆನ್ಲೈನ್ ತರಗತಿಗಳನ್ನು ಪಡೆಯುವ ಅವಕಾಶ ಕಲ್ಪಿಸಲಾಗಿದೆ.
ಯಾವ ಪರೀಕ್ಷೆಗಳಿಗೆ ತರಬೇತಿ?
KPSC ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್-ಎ ಮತ್ತು ಗ್ರೂಪ್-ಬಿ), FDA, SDA, PDO, PSI, ಪೊಲೀಸ್ ಕಾನ್ಸ್ಟೇಬಲ್, VAO ಹಾಗೂ ವಿವಿಧ ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
ತರಬೇತಿಯಲ್ಲಿ ಏನೆಲ್ಲಾ ಸೌಲಭ್ಯ?
ಅಭ್ಯರ್ಥಿಗಳಿಗೆ ಗುಣಮಟ್ಟದ ಆನ್ಲೈನ್ ತರಗತಿಗಳ ಜೊತೆಗೆ ಅಧ್ಯಯನ ಸಾಮಗ್ರಿ ಹಾಗೂ ಅಣಕು ಪರೀಕ್ಷೆಗಳ (Mock Tests) ಸೌಲಭ್ಯವೂ ಲಭ್ಯವಿರಲಿದೆ.
ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ಆಸಕ್ತಿಗೆ ಅನುಗುಣವಾಗಿ ಗರಿಷ್ಠ ಮೂರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏಕಕಾಲದಲ್ಲಿ ಆಯ್ಕೆ ಮಾಡಿಕೊಂಡು ತರಬೇತಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಉಚಿತ ತರಬೇತಿ ಪಡೆಯಲು ಆಸಕ್ತ ಅಭ್ಯರ್ಥಿಗಳು ‘Seva One’ ಅಧಿಕೃತ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅಧಿಕೃತ ಪೋರ್ಟಲ್: sevaone.karnataka.gov.in
ಅರ್ಹ ಅಭ್ಯರ್ಥಿಗಳು ಯೋಜನೆಯ ಪ್ರಯೋಜನ ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ಸಿದ್ಧತೆ ನಡೆಸಬಹುದಾಗಿದೆ.







