ಮಡಿಕೇರಿ, NEWS DESK ಅ. 5: ಇತ್ತೀಚೆಗೆ ವಿರಾಜಪೇಟೆಯಲ್ಲಿ ನಡೆದ ಗಣೇಶೋತ್ಸವ ಶೋಭಾಯಾತ್ರೆಯ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹುಬ್ಬಳ್ಳಿ ಮೂಲದ ಬಸವರಾಜ (22) ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಗೌರಿ-ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಡಿಜೆ ವಾಹನದ ಮೇಲಿದ್ದ ಬಸವರಾಜ ಅವರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರ ಸುಟ್ಟ ಗಾಯಗಳಾಗಿದ್ದವು. ತಕ್ಷಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವರಾಜ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.







