Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*
  • *ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*
  • *ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*
  • *ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*
  • *ಕೊಡಗು ಸೈನಿಕ ಶಾಲೆಯಲ್ಲಿ 20ನೇ ವಾರ್ಷಿಕ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ*
  • *ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*
  • *ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*
  • *ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*
  • *ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*
  • *ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಅ.6: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನವೆಂಬರ್ 2 ಹಾಗೂ 3ರಂದು ಮಡಿಕೇರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗುತ್ತಿದ್ದು, ಪತ್ರಕರ್ತರನ್ನು ಸಂಘಟಿಸುವ ಪ್ರಮುಖ ಕಾರ್ಯಕ್ರಮವಾಗಿ ಇದು ರೂಪುಗೊಂಡಿದೆ. ಈ ಬಾರಿ ಪಂದ್ಯಾಟದ ಆತಿಥ್ಯವನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಹಿಸಿಕೊಂಡಿದ್ದು, ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದರು.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ ಹಾಗೂ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಒಟ್ಟು ನಾಲ್ಕು ಪಿಚ್‌ಗಳನ್ನು ಸಿದ್ಧಪಡಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳ 24 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿದ್ದು, ಕೊಡಗು ಜಿಲ್ಲೆಯ ಎರಡು ತಂಡಗಳು ಸ್ಪರ್ಧಿಸಲಿವೆ. ಪಂದ್ಯಾಟದ ಯಶಸ್ವಿ ಆಯೋಜನೆಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಪಂದ್ಯಾಟದ ಉದ್ಘಾಟನೆಗೆ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಹಾಗೂ ರಾಜಕಾರಣಿಗಳ ನಡುವೆ ವಿಶೇಷ ಪ್ರದರ್ಶನ ಪಂದ್ಯವನ್ನೂ ಆಯೋಜಿಸಲಾಗುವುದು ಎಂದು ಅನು ಕಾರ್ಯಪ್ಪ ಮಾಹಿತಿ ನೀಡಿದರು.

ವಿಜೇತ ತಂಡಕ್ಕೆ ₹1 ಲಕ್ಷ, ರನ್ನರ್‌ಅಪ್ ತಂಡಕ್ಕೆ ₹50 ಸಾವಿರ, ತೃತೀಯ ಸ್ಥಾನಕ್ಕೆ ₹25 ಸಾವಿರ ಹಾಗೂ ಚತುರ್ಥ ಸ್ಥಾನಕ್ಕೆ ₹15 ಸಾವಿರ ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಪ್ರತಿ ಪಂದ್ಯಕ್ಕೂ ‘ಮ್ಯಾನ್ ಆಫ್ ದಿ ಮ್ಯಾಚ್’ ಸೇರಿದಂತೆ ವಿವಿಧ ವೈಯಕ್ತಿಕ ವಿಭಾಗಗಳಲ್ಲಿ ಬಹುಮಾನಗಳನ್ನು ನೀಡಲಾಗುವುದು ಎಂದರು.

ನಕಲಿ ಸದಸ್ಯತ್ವ ಕಂಡುಬಂದರೆ ತಂಡ ಅನರ್ಹ

ಶಿಸ್ತು ಸಮಿತಿ ಸಂಚಾಲಕಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ಪಂದ್ಯಾಟವನ್ನು ಸಂಪೂರ್ಣ ಶಿಸ್ತುಬದ್ಧ ಹಾಗೂ ಪಾರದರ್ಶಕವಾಗಿ ಆಯೋಜಿಸಲಾಗುವುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಪಂದ್ಯಾಟದಲ್ಲಿ ಆಡಲು ಅವಕಾಶವಿದೆ. ನಕಲಿ ಸದಸ್ಯತ್ವ ಕಾರ್ಡ್ ಬಳಸಿ ಪಾಲ್ಗೊಳ್ಳುವುದು ಕಂಡುಬಂದಲ್ಲಿ ಸಂಬಂಧಿಸಿದ ತಂಡವನ್ನು ಪಂದ್ಯಾಟದಿಂದಲೇ ಹೊರಗಿಡಲಾಗುವುದು ಎಂದು ಎಚ್ಚರಿಸಿದರು.

24 ಜಿಲ್ಲೆಗಳ ತಂಡಗಳ ಭಾಗಿ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಚಾರ ಸಮಿತಿ ಸಂಚಾಲಕ ಹೆಚ್.ಜೆ. ರಾಕೇಶ್ ಮಾತನಾಡಿ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಬಾಗಲಕೋಟೆ, ದಕ್ಷಿಣ ಕನ್ನಡ, ಬಳ್ಳಾರಿ, ಮಂಡ್ಯ, ಧಾರವಾಡ, ಉಡುಪಿ, ಹಾವೇರಿ, ಕೋಲಾರ, ಗದಗ, ಬೆಂಗಳೂರು ದಕ್ಷಿಣ (ರಾಮನಗರ), ಬೆಂಗಳೂರು ನಗರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಪ್ಪಳ, ಚಿತ್ರದುರ್ಗ, ಕಲಬುರಗಿ ಹಾಗೂ ಕೊಡಗು ಜಿಲ್ಲೆಗಳ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿವೆ. ಸುಮಾರು 500ರಿಂದ 600 ಪತ್ರಕರ್ತರು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ ಮಾತನಾಡಿ, ಪಂದ್ಯಾಟವನ್ನು ವ್ಯವಸ್ಥಿತವಾಗಿ ರೂಪಿಸಲಾಗುತ್ತಿದ್ದು, ಆಟಗಾರರು ಹಾಗೂ ತಂಡಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಗೋಷ್ಠಿಯಲ್ಲಿ ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಸುನೀಲ್ ಪೊನ್ನೇಟಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; 3 ದಿನಗಳ ರಾಷ್ಟ್ರೀಯ ಶೋಕಾಚರಣೆ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 6: ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ…

*ಪ್ರಧಾನಿ ಹಾಗೂ ಗೃಹ ಸಚಿವರು ಹೇಳಿದಂತೆ ಚುನಾವಣಾ ಆಯೋಗ ನಡೆದುಕೊಂಡಿದೆ : ಎಂ.ಸಿ. ನಾಣಯ್ಯ ಆರೋಪ*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ನ.2, 3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ*

ಅಕ್ಟೋಬರ್ 6, 2026

*ಕೊಡಗು ಸೈನಿಕ ಶಾಲೆಯಲ್ಲಿ 20ನೇ ವಾರ್ಷಿಕ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ*

ಅಕ್ಟೋಬರ್ 6, 2026

*ಅ.6ರಂದು ಆಂಜನೇಯ ದೇವಾಲಯದಲ್ಲಿ ನವಗ್ರಹ ಪೂಜೆ*

ಅಕ್ಟೋಬರ್ 6, 2026

*ಹುದಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ*

ಅಕ್ಟೋಬರ್ 5, 2026

*ವಿರಾಜಪೇಟೆ ಗಣೇಶೋತ್ಸವ ಸಂದರ್ಭ ವಿದ್ಯುತ್ ಆಘಾತದಿಂದ ಗಾಯಗೊಂಡಿದ್ದ ಯುವಕ ಸಾವು*

ಅಕ್ಟೋಬರ್ 5, 2026

*ಶಿಥಿಲಾವಸ್ಥೆಯಲ್ಲಿದ್ದ ಅಕ್ಷರ ದಾಸೋಹ ಅಡುಗೆ ಮನೆಗೆ ಶ್ರಮದಾನದ ಮೂಲಕ ಕಾಯಕಲ್ಪ*

ಅಕ್ಟೋಬರ್ 5, 2026

*ಮೃತ ಪೊಲೀಸ್ ಸಿಬ್ಬಂದಿಯ ವಿಮಾ ಹಣ ಬಿಡುಗಡೆಗೆ ಲಂಚದ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ*

ಅಕ್ಟೋಬರ್ 5, 2026

*ಗಣಪತಿ ಕೊಡವ ಕೇರಿಯ ವಾರ್ಷಿಕ ಮಹಾಸಭೆ ಹಾಗೂ ಒತ್ತೋರ್ಮೆ ಕೂಟ*

ಅಕ್ಟೋಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.