Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ

ಅಕ್ಟೋಬರ್ 7, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ‘ಆಜ್ಞಾ ಮುಹೂರ್ತ’ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಸಂಪ್ರದಾಯದಂತೆ ಶ್ರೀ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಮಂಗಳವಾದ್ಯಗಳೊಂದಿಗೆ ರವಿ ಹೆಬ್ಬಾರ್ ಅವರ ನಿವಾಸಕ್ಕೆ ತೆರಳಲಾಯಿತು. ಅಲ್ಲಿನ ತೋಟದಿಂದ ಶಾಸ್ತ್ರೋಕ್ತವಾಗಿ ಬಾಳೆಗೊನೆಯನ್ನು ಕಡಿಯಲಾಯಿತು. ಬಳಿಕ ಬಾಳೆಗೊನೆಯೊಂದಿಗೆ ದೇವಾಲಯಕ್ಕೆ ಮರಳಿ, ಪ್ರದಕ್ಷಿಣೆ ನೆರವೇರಿಸಿ ‘ತಪ್ಪಡ್ಕ (ತಪ್ಪು ದಂಡ)’ ತೆರೆಯುವ ಧಾರ್ಮಿಕ ವಿಧಿವಿಧಾನಗಳನ್ನು ಪೂರ್ಣಗೊಳಿಸಲಾಯಿತು.

ಮದ್ಯ, ಮಾಂಸ ಸೇವನೆ ನಿಷೇಧ

ಜಾತ್ರೋತ್ಸವದ ಪವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸೋಮವಾರದಿಂದ ತಲಕಾವೇರಿ ಜಾತ್ರೆ ಮುಕ್ತಾಯಗೊಂಡು, ತೀರ್ಥೋದ್ಭವದ ಮರುದಿನದವರೆಗೆ ಭಾಗಮಂಡಲ ವ್ಯಾಪ್ತಿಯಲ್ಲಿ ಮದ್ಯ ಹಾಗೂ ಮಾಂಸ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಭಕ್ತಾದಿಗಳು ಹಾಗೂ ಸಾರ್ವಜನಿಕರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೇವಾಲಯದ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ಯಾವುದೇ ರೀತಿಯ ವಿಘ್ನಗಳು ಸಂಭವಿಸದಂತೆ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಮುಖರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ನಾಲ್ಕು ಗ್ರಾಮಗಳ ದೇವಾಲಯಗಳ ತಕ್ಕ ಮುಖ್ಯಸ್ಥರು, ತಕ್ಕರಾದ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ, ದೇವಾಲಯದ ಆಡಳಿತಾಧಿಕಾರಿ ಚಂದ್ರಶೇಖರ್, ಸಿಬ್ಬಂದಿ ಸೇರಿದಂತೆ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ

  • ಅಕ್ಟೋಬರ್ 15, ಮಧ್ಯಾಹ್ನ 12:35: ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ಗೆ ಅಕ್ಕಿ ಹಾಕುವ ಕಾರ್ಯಕ್ರಮ.
  • ಅಕ್ಟೋಬರ್ 15, ಸಂಜೆ 06:03: ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸುವ ವಿಧಿ.
  • ಅಕ್ಟೋಬರ್ 17, ರಾತ್ರಿ 07:50: ಮೇಷ ಲಗ್ನದಲ್ಲಿ ಪವಿತ್ರ ‘ಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ’ ನೆರವೇರಲಿದೆ.

ವರದಿ: ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.