Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
  • *ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*
  • *ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
  • *ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*
  • *ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*
  • *ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*
  • *ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸುಂಟಿಕೊಪ್ಪ, NEWS DESK ಅ.7: ಅರ್ಹ ಪಡಿತರ ಚೀಟಿದಾರರು ಅ.20ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಂಡು ಪಡಿತರ ಚೀಟಿಯನ್ನು ಉಳಿಸಿಕೊಳ್ಳುವಂತೆ ಕುಶಾಲನಗರ ತಾಲೂಕು ಆಹಾರ ನಿರೀಕ್ಷಕಿ ಸ್ವಾತಿ ಅವರು ಮನವಿ ಮಾಡಿದರು. ಸುಂಟಿಕೊಪ್ಪದ ನ್ಯಾಯಬೆಲೆ ಅಂಗಡಿಗಳಲ್ಲಿ ಗಣಕಯಂತ್ರಗಳಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ತಾಂತ್ರಿಕ ಸಮಸ್ಯೆಗಳ ಕುರಿತು ವೇವ್ ಸಂಘಟನೆಯ ವತಿಯಿಂದ ದೂರು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಸುಂಟಿಕೊಪ್ಪ ವಿಎಸ್‌ಎಸ್‌ಎನ್ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಆಹಾರ ನಿರೀಕ್ಷಕಿ ಸ್ವಾತಿ ಅವರು, ಅಲ್ಲಿನ ಸಮಸ್ಯೆಗಳ ಕುರಿತು ನೇರವಾಗಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗಾಗಲೇ ಇಲಾಖೆಯ ಸೂಚನೆಯಂತೆ ವಿಎಸ್‌ಎಸ್‌ಎನ್ ವತಿಯಿಂದ ಗಣಕಯಂತ್ರವನ್ನು ಬದಲಾಯಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಒಎಫ್‌ಸಿ ಕೇಬಲ್ ಅಳವಡಿಸಿದ ಬಳಿಕ ಗಣಕಯಂತ್ರಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹಾರವಾಗಲಿದೆ ಎಂದು ಭರವಸೆ ನೀಡಿದರು. ಪಡಿತರ ಚೀಟಿದಾರರು ಬಯೋಮೆಟ್ರಿಕ್ ನೀಡಿದ ಕೂಡಲೇ ಪಡಿತರ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಬೇಕು ಹಾಗೂ ನ್ಯಾಯಬೆಲೆ ಅಂಗಡಿಗೆ ಮತ್ತೋರ್ವ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಅಧಿಕಾರಿಗಳ ಮುಂದೆ ತಮ್ಮ ಬೇಡಿಕೆಗಳನ್ನು ಮುಂದಿಟ್ಟರು.

ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ

ಪಡಿತರ ಚೀಟಿಯಲ್ಲಿ ಹೆಸರು ನೋಂದಾಯಿಸಿರುವ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳದಿದ್ದಲ್ಲಿ ಪಡಿತರ ಚೀಟಿ ರದ್ದಾಗುವ ಸಾಧ್ಯತೆ ಇದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆಯೂ ಇದೆ. ಆದ್ದರಿಂದ ಯಾವುದೇ ನಿರ್ಲಕ್ಷ್ಯ ತೋರದೆ, ನಿಗದಿತ ಸಮಯದೊಳಗೆ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸ್ವಾತಿ ಅವರು ಸೂಚಿಸಿದರು.

ಸುಂಟಿಕೊಪ್ಪದ ಈ ನ್ಯಾಯಬೆಲೆ ಅಂಗಡಿಯೊಂದರಲ್ಲೇ ಸುಮಾರು 1167 ಪಡಿತರ ಚೀಟಿದಾರರು ಇದ್ದು, ಈವರೆಗೆ ಸುಮಾರು 405 ಮಂದಿ ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಉಳಿದ ಪಡಿತರ ಚೀಟಿದಾರರು ಅ.20ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅವರು ತಿಳಿಸಿದರು. ವೇವ್ ಸಂಘಟನೆಯ ಸಂಚಾಲಕ ಕೆ.ಎ. ಲತೀಫ್ ಮಾತನಾಡಿ, ಪಡಿತರ ಚೀಟಿದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಘಟನೆಯ ವತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಅಗತ್ಯ ಮಾಹಿತಿಯನ್ನು ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಉಳಿದಿರುವ ಪಡಿತರ ಚೀಟಿದಾರರಿಗೆ ಸಂಘಟನೆಯ ವತಿಯಿಂದ ವ್ಯಾಪಕ ಪ್ರಚಾರ ಹಾಗೂ ಮಾಹಿತಿ ನೀಡುವ ಕುರಿತು ಅಧಿಕಾರಿಗಳು ನೀಡಿದ ಸಲಹೆಗೆ ಸಹಮತ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳಾದ ಇಬ್ರಾಹಿಂ, ಜುಬೇರ್, ರಶೀದ್, ಮಣಿ, ದಿನೇಶ್, ನಿಸಾರ್, ಶರೀಫ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಹೆಚ್.ಯು. ರಫೀಕ್ ಖಾನ್, ರಜಾಕ್ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.7: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು…

*ಅ.20ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ*

ಅಕ್ಟೋಬರ್ 7, 2026

*ರಾಷ್ಟ್ರೀಯ ರಕ್ತದಾನ ದಿನಾಚರಣೆ; ರಕ್ತದಾನ – ಮಹಾದಾನ: ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಕರೆ*

ಅಕ್ಟೋಬರ್ 7, 2026

*ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ; ಪರಿಶಿಷ್ಟ ಪಂಗಡ ಸಮಾಜಗಳ ಕುಂದುಕೊರತೆ ಸಭೆ ಶೀಘ್ರ ಆಹ್ವಾನ: ಜಿಲ್ಲಾಧಿಕಾರಿ*

ಅಕ್ಟೋಬರ್ 7, 2026

*ಮಡಿಕೇರಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ; ಗೃಹಲಕ್ಷ್ಮಿ ಮರು ಪರಿಶೀಲನೆಗೆ ಮನೆಮನೆ ಸಮೀಕ್ಷೆ ಆರಂಭ*

ಅಕ್ಟೋಬರ್ 7, 2026

*ಮಹಿಳೆಯರ ಬ್ಯಾಡ್ಮಿಂಟನ್ ಹಾಗೂ ಪುರುಷರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ದ್ವಿತೀಯ ಸ್ಥಾನ*

ಅಕ್ಟೋಬರ್ 7, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 7, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.