Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
  • *ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*
  • *ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*
  • *ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*
  • *ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*
  • *ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಅ.7: ಸಿಖ್ ಧರ್ಮದ ಕಿರ್ಪಾನ್, ಗೂರ್ಖಾರ ಕುಕ್ರಿ ಮತ್ತು ಸಿರೂರ್ ಮಠ’ದ ಆಚರಣೆಗಳಂತೆ, ಕೊಡವರ *ಗನ್-ತೋಕ್ ಕೂಡ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಘೋಷಿಸಬೇಕು ಅ.9 ರಂದು ಬೆಳಿಗ್ಗೆ 10.30ಕ್ಕೆ ಕೊಡಗು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಸಿಖ್ ಧರ್ಮದ ಕಿರ್ಪಾನ್, ಗೂರ್ಖರ ಕುಕ್ರಿ ಸೇರಿದಂತೆ ಧಾರ್ಮಿಕ ಆಚರಣೆಗಳಿಗೆ ದೊರೆಯುತ್ತಿರುವ ಸಾಂವಿಧಾನಿಕ ರಕ್ಷಣೆಯ ಮಾದರಿಯಲ್ಲಿ ಕೊಡವರ ಗನ್-ತೋಕ್‌ಗೂ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡವರು, ಸಿಖ್ ಹಾಗೂ ಗೂರ್ಖ ಸಮುದಾಯಗಳಿಗೆ ಶಸ್ತ್ರಾಸ್ತ್ರ ಕಾಯ್ದೆಯಡಿ ಕೆಲವು ವಿನಾಯಿತಿಗಳು ಲಭ್ಯವಿದ್ದರೂ, ಸಿಖ್ ಮತ್ತು ಗೂರ್ಖ ಸಮುದಾಯಗಳಿಗೆ ಇರುವಂತಹ ಸಾಂವಿಧಾನಿಕ ಖಾತರಿ ಕೊಡವರಿಗೆ ಇಲ್ಲ. ಹೀಗಾಗಿ ಕೊಡವರ ಗನ್-ತೋಕ್‌ಗೂ ಇದೇ ರೀತಿಯ ಸಾಂವಿಧಾನಿಕ ರಕ್ಷಣೆ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ನಾಚಪ್ಪ ಹೇಳಿದ್ದಾರೆ.

ಧಾರ್ಮಿಕ-ಸಾಂಸ್ಕೃತಿಕ ಮಹತ್ವ

ಗನ್-ತೋಕ್ ಕೊಡವರ ಜೀವನದ ವಿವಿಧ ಹಂತಗಳಲ್ಲಿ ಆಧ್ಯಾತ್ಮಿಕ ಮಹತ್ವ ಹೊಂದಿರುವ ಪವಿತ್ರ ಸಂಸ್ಕಾರವಾಗಿದೆ. ಕರೋಣವ, ಬಲ್ಯಮನೆ, ಮಂದ್ ಹಾಗೂ ಕೈಲೋದ್ಗಳಲ್ಲಿ ಇದನ್ನು ಪೂಜಿಸಲಾಗುತ್ತದೆ. ಹುಟ್ಟಿನಿಂದ ಸಾವಿನವರೆಗಿನ ಜೀವನಚಕ್ರದಲ್ಲಿ ಗನ್-ತೋಕ್ ಪವಿತ್ರ ‘ತಾಯತ’ದ ಸ್ಥಾನವನ್ನು ಹೊಂದಿದೆ ಎಂದು ಅವರು ವಿವರಿಸಿದ್ದಾರೆ.

ಆದ್ದರಿಂದ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, 1959ರ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಶಾಸನಬದ್ಧ ವಿನಾಯಿತಿಯೊಂದಿಗೆ ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆಯನ್ನೂ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ-ಮಹಾರಾಜರ ಬಂದೂಕುಗಳು ಮನರಂಜನೆಯ ಭಾಗವಾಗಿದ್ದರೆ, ಕೊಡವರ ಗನ್-ತೋಕ್ ಮನರಂಜನೆಯ ವಸ್ತುವಲ್ಲ; ಅದು ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಕಾರವಾಗಿದೆ ಎಂದು ನಾಚಪ್ಪ ಹೇಳಿದ್ದಾರೆ.

1971ರಲ್ಲಿ ರಾಜಮನೆತನಗಳ ಪಿವಿ ಪರ್ಸ್ ರದ್ದಾದ ಸಂದರ್ಭದಲ್ಲಿ ಅವರಿಗೆ ನೀಡಲಾಗಿದ್ದ ಕೆಲವು ವಿನಾಯಿತಿಗಳು ರದ್ದಾದರೂ, ಕೊಡವರ ಗನ್-ತೋಕ್‌ಗೆ ಸಂಬಂಧಿಸಿದ ವಿನಾಯಿತಿ ಮುಂದುವರಿದಿರುವುದು ಅದರ ವಿಶಿಷ್ಟ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗನ್-ತೋಕ್‌ಗೆ ಅಸ್ತಿತ್ವದಲ್ಲಿರುವ ಶಾಸನಬದ್ಧ ವಿನಾಯಿತಿಯೊಂದಿಗೆ ಸಂವಿಧಾನದ 25, 26 ಮತ್ತು 28ನೇ ವಿಧಿಗಳಡಿ ಅತ್ಯಗತ್ಯ ಧಾರ್ಮಿಕ ಆಚರಣೆಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ನಾಚಪ್ಪ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.7 NEWS DESK : ಆಧುನಿಕ ಜೀವನ ವ್ಯವಸ್ಥೆ ಅತಿ ವೇಗವಾಗಿ ಸಾಗುತ್ತಿದ್ದರೂ, ನೈತಿಕ ನೆಲೆಗಟ್ಟುಗಳು ಕುಸಿಯುತ್ತಿರುವುದು ಆತಂಕಕಾರಿ…

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026

*ಮಾದರಿ ದಾನಿಗಳು: ಕಡಿಯತ್ತೂರು ಶ್ರೀ ಭಗವತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಪ್ರಕಾಶ್ ರೈ ದಂಪತಿಯಿಂದ ರೂ.12.78 ಲಕ್ಷ ನೆರವು*

ಅಕ್ಟೋಬರ್ 7, 2026

*ಅ.11ರಿಂದ 20ರವರೆಗೆ ಮಡಿಕೇರಿ ದಸರಾ ಕ್ರೀಡಾಕೂಟ; ರಾಜ್ಯ ಮಟ್ಟದ ಹೋರಿ ಪ್ರದರ್ಶನ ಈ ಬಾರಿಯ ವಿಶೇಷ*

ಅಕ್ಟೋಬರ್ 7, 2026

*ಮಡಿಕೇರಿ, ಗೋಣಿಕೊಪ್ಪ ದಸರಾ: ನಿಯಮ ಪಾಲಿಸಿ, ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ*

ಅಕ್ಟೋಬರ್ 7, 2026

*ದಸರಾ: ಮೈಸೂರು-ಬೆಂಗಳೂರು ನಡುವೆ 5 ವಿಶೇಷ ರೈಲು; 17 ಟ್ರಿಪ್‌ಗಳ ಸಂಚಾರ*

ಅಕ್ಟೋಬರ್ 7, 2026

*ಮಡಿಕೇರಿಯಲ್ಲಿ ಬಿಜೆಪಿಯಿಂದ ‘ಸೇವಾ ಜ್ಯೋತಿ’ ಕಾರ್ಯಕ್ರಮ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.