
ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5 ಜಿಟಿ ರಸ್ತೆ ಫೀಡರ್ಗಳಲ್ಲಿ ದಸರಾ ಹಬ್ಬದ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಅಕ್ಟೋಬರ್, 08 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಜಯನಗರ, ಅಶೋಕ್ಪುರ, ಜಲಾಶ್ರಯ ಬಡಾವಣೆ, ಸರ್ಕಾರಿ ಆಸ್ಪತ್ರೆ, ಮಂಗಳಾದೇವಿ ನಗರ, ಅರಣ್ಯ ಭವನ, ಚೈನ್ಗೇಟ್, ಕೆಎಸ್ಆರ್ಸಿ ಬಸ್ ನಿಲ್ದಾಣ, ಇಂಡಸ್ಟ್ರಿಯಲ್ ಏರಿಯ, ಕಾವೇರಿ ಹಾಲ್, ಪೆನ್ಷನ್ ಲೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.















