ಮಡಿಕೇರಿ, NEWS DESK ಅ. 8: ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಕೊಡಗಿನ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರನ್ನು 2026ನೇ ಸಾಲಿನ ಶ್ರಾವಣಿಕ ಅಮಲ್ಗಮೇಷನ್ ಆಫ್ ಆರ್ಟ್ಸ್ ಸಂಸ್ಥೆಯ ‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ರೂ.1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದ್ದು, ಡಿಸೆಂಬರ್ 13ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ.
ಸಿನಿಮಾ ಮೂಲಕ ಜನಪ್ರಿಯ ಸಾಮಾಜಿಕ ವಿಚಾರಗಳನ್ನು ಪರಿಣಾಮಕಾರಿಯಾಗಿ ಪ್ರಸ್ತುತಪಡಿಸುವಲ್ಲಿ ಪ್ರಕಾಶ್ ಕಾರ್ಯಪ್ಪ ಅವರು ತೋರಿರುವ ಕಲಾತ್ಮಕ ಅರ್ಹತೆ ಹಾಗೂ ಸೃಜನಶೀಲ ಕೌಶಲ್ಯವನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ, ಸಿನಿಮಾದ ಪ್ರಜಾಸತ್ತಾತ್ಮಕ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆ ಹಾಗೂ ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ನಿಟ್ಟಿನಲ್ಲಿ ನಡೆಸಿರುವ ಸಾಮಾಜಿಕ ಕಳಕಳಿಯನ್ನೂ ಪ್ರಶಸ್ತಿಗೆ ಪರಿಗಣಿಸಲಾಗಿದೆ.
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ನಿರ್ದೇಶಕ ದೀಪೇಶ್ ಟಿ., ಛಾಯಾಗ್ರಾಹಕ ಪ್ರತಾಪ್ ಹಾಗೂ ಸಾಕ್ಷ್ಯಚಿತ್ರ ನಿರ್ಮಾಪಕ ಮತ್ತು ಪತ್ರಕರ್ತ ಪಿ.ವಿ. ಬಾಲಕೃಷ್ಣನ್ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

















