Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 20265 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಅ.8 NEWS DESK : ಕೇಂದ್ರ ಪುರಸ್ಕೃತ ಯೋಜನೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಉದಾಸೀನ ಮಾಡಿದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಎಚ್ಚರಿಕೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಆವಾಜ್, ಪ್ರಧಾನಮಂತ್ರಿ ಗ್ರಾಮ ಸಡಕ್, ವಿಬಿ-ಜಿ ರಾಂ ಜಿ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳಿದ್ದು, ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಕಾಲದಲ್ಲಿ ಕಾರ್ಯಗತಗೊಳಿಸುವಂತೆ ಅಧಿಕಾರಿಗಳಿಗೆ ಸಂಸದರು ಸ್ಪಷ್ಟ ನಿರ್ದೇಶನ ನೀಡಿದರು. ಕೇಂದ್ರ ಸರ್ಕಾರವು ಸಾರ್ವಜನಿಕರಿಗೆ ಮೂಲ ಸೌಲಭ್ಯ ಸೇರಿದಂತೆ ಹಲವು ಕಾರ್ಯಕ್ರಮ ಜಾರಿಗೊಳಿಸಿದೆ. ಅದನ್ನು ತಲುಪಿಸುವುದು ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಹೊಣೆಗಾರಿಕೆ ಅರಿತು ಪ್ರಗತಿ ಸಾಧಿಸಬೇಕು ಎಂದು ಸಂಸದರು ತಾಕೀತು ಮಾಡಿದರು. ಮಡಿಕೇರಿ ಕಸ ವಿಲೇವಾರಿ ಸಂಬಂಧಿಸಿದಂತೆ ಆರಂಭದಲ್ಲಿ ಮಾಹಿತಿ ಪಡೆದ ಸಂಸದರು ಇದುವರೆಗೆ ಯಾವುದೇ ರೀತಿಯ ಪ್ರಗತಿ ಕಾಣದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಈ ಕುರಿತು ಮಾತನಾಡಿದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಆರ್.ಕೆ.ಚಂದ್ರು ಅವರು ಕಸ ವಿಲೇವಾರಿ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಗತಿ ಕಾಣದಿರುವ ಬಗ್ಗೆ ಬೇಸರ ತಂದಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಎಇಇ ಸತೀಶ್ ಅವರು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಟೆಂಡರ್‍ದಾರರು ಮುಂದೆ ಬರುತ್ತಿಲ್ಲ. ಆದ್ದರಿಂದ ಮರು ಟೆಂಡರ್ ಆಹ್ವಾನಿಸಲಾಗುವುದು ಎಂದು ಸಭೆಯ ಗಮನಕ್ಕೆ ತಂದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕಸ ವಿಲೇವಾರಿ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದರು. ಅಮೃತ 2.0 ಯೋಜನೆಯಡಿ ನಗರದ ಎರಡು ಕಡೆ ಉದ್ಯಾನವನ ನಿರ್ಮಿಸಲಾಗಿದ್ದು, ಕೂಡಲೇ ಲೋಕಾರ್ಪಣೆ ಮಾಡಬೇಕು ಎಂದು ನಾಗೇಶ್ ಕುಂದಲ್ಪಾಡಿ ಅವರು ಒತ್ತಾಯಿಸಿದರು. ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ಅಮೃತ 2.0 ಯೋಜನೆಯಡಿ ಶೇಕಡಾವಾರು ಪ್ರಗತಿ ಸಾಧಿಸಬೇಕು. ನಗರ, ಪಟ್ಟಣ ಪ್ರದೇಶಗಳಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಆಗಬೇಕು ಎಂದು ನಿರ್ದೇಶನ ನೀಡಿದರು. ಮತ್ತೊಬ್ಬ ಸಮಿತಿ ಸದಸ್ಯರಾದ ಡಾ.ನವೀನ್ ಕುಮಾರ್ ಅವರು ಮಾತನಾಡಿ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಇದೇ ಅಕ್ಟೋಬರ್, 23 ರಂದು ಪಾಲುದಾರರ ಸಭೆಯು (ಸ್ಟೇಕ್ ಹೋಲ್ಡರ್) ನಗರದಲ್ಲಿ ನಡೆಯಲಿದ್ದು, ಆಸಕ್ತರು ಆಗಮಿಸಬೇಕಾಗಿ ಕೋರಿದರು. ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಬಡವರ ಬೇಡಿಕೆಗೆ ತಕ್ಕಂತೆ ಮನೆ ನಿರ್ಮಿಸಿಕೊಡಬೇಕು. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪ್ರಗತಿ ಸಾಧಿಸುವಂತೆ ಸಂಸದರು ಸೂಚಿಸಿದರು. ಸ್ವಾತಂತ್ರ್ಯ ಬಂದು 80 ವರ್ಷ ಆಗಿದ್ದರೂ ಸಹ ಬಡವರು ಮತ್ತು ನಿರ್ಗತಿಕರಿಗೆ ಒಂದು ನಿವೇಶನ, ಮನೆ ನಿರ್ಮಿಸಿಕೊಡಲು ಸಾಧ್ಯವಾಗುತ್ತಿಲ್ಲ. ಕರಡಿಗೋಡು ಸೇರಿದಂತೆ ಹಾಡಿಗಳಲ್ಲಿ ಇಂದಿಗೂ ಸಹ ಕಷ್ಟದ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಶಿಕ್ಷಣ, ಆರೋಗ್ಯ, ವಸತಿ, ಕುಡಿಯುವ ನೀರು, ನಿವೇಶನ, ವಿದ್ಯುತ್ ಸಂಪರ್ಕ ಹೀಗೆ ಕನಿಷ್ಠ ಮೂಲ ಸೌಲಭ್ಯವನ್ನಾದರೂ ಕಲ್ಪಿಸಬೇಕು ಎಂದು ಡಾ.ನವೀನ್ ಕುಮಾರ್ ಅವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಸತಿ ಯೋಜನೆ ಅನುಷ್ಠಾನ ಅಧಿಕಾರಿ ಅವರು ಜಿಲ್ಲೆಯಲ್ಲಿ 2873 ಮನೆ ನಿರ್ಮಾಣಕ್ಕೆ ಸರ್ವೆ ಕಾರ್ಯ ಆಗಿದೆ. ಕೆಲವು ಕುಟುಂಬಗಳಲ್ಲಿ ನಿವೇಶನ ಇಲ್ಲದಿರುವುದು ಮನೆ ನಿರ್ಮಾಣದ ಪ್ರಗತಿಗೆ ಅಡಚಣೆ ಆಗಿದೆ ಎಂದು ಸಭೆಯ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಜಿಲ್ಲೆಯ ವಿವಿಧ ಕಡೆಗಳಲ್ಲಿ ನಿವೇಶನ ರಹಿತರಿಗೆ ಜಾಗ ನೀಡಲು ಭೂಮಿ ಗುರುತಿಸಲಾಗಿದೆ. ನಿವೇಶನ ರಹಿತರಿಗೆ ನಿವೇಶನ ಒದಗಿಸಿ, ಮನೆ ನಿರ್ಮಾಣಕ್ಕೆ ಆದಷ್ಟು ಶೀಘ್ರ ಮುತುವರ್ಜಿ ವಹಿಸಲಾಗುವುದು ಎಂದರು. ‘ನಿವೇಶನ ಅಥವಾ ವಸತಿ ಯೋಜನೆ ಅನುಷ್ಠಾನದಲ್ಲಿ ರಾಜಕಾರಣ ಮಾಡದೆ ಅರ್ಹರಿಗೆ ನಿವೇಶನ ಹಾಗೂ ಮನೆ ನಿರ್ಮಿಸಬೇಕು. ಅಧಿಕಾರಿಗಳು ಬದ್ಧತೆಯಿಂದ ನಡೆದುಕೊಳ್ಳಬೇಕು ಎಂದು ಸಂಸದರು ಸೂಚ್ಯವಾಗಿ ನುಡಿದರು.’ ಈ ಸಂದರ್ಭದಲ್ಲಿ ಮಾತನಾಡಿದ ನಾಗೇಶ್ ಕುಂದಲ್ಪಾಡಿ ಅವರು ಪ್ರಧಾನಮಂತ್ರಿ ಆವಾಜ್ ಯೋಜನೆಯ ಪ್ರಗತಿ ಸಾಧಿಸದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್.ಕೆ.ಚಂದ್ರು ಅವರು ಇಂದಿಗೂ ಸಹ ಆದಿವಾಸಿಗಳು ಗುಡಿಸಲಿನಲ್ಲಿ ವಾಸಿಸುತ್ತಿದ್ದು, ಈ ಕುಟುಂಬಗಳಿಗೆ ಮನೆ ನಿರ್ಮಿಸಬೇಕು ಎಂದು ಅವರು ಮನವಿ ಮಾಡಿದರು. ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಪ್ರಾಣಿ ಸಂಘರ್ಷ ತಡೆಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಮಸ್ಯೆ ಇರುವ ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಪ್ರವಾಸೋದ್ಯಮ ಅಭಿವೃದ್ಧಿಗೂ ಸಹ ಒತ್ತು ನೀಡಬೇಕು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಮಾತನಾಡಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವಲ್ಲಿ ‘ಯೋಜನಾ ವರದಿ’ ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 3015 ವಿವಿಧ ರೀತಿಯ ಪ್ರಕರಣಗಳಿದ್ದು, ಇವುಗಳಿಗೆ ಅಗತ್ಯ ಪರಿಹಾರ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅರಣ್ಯ ಪ್ರದೇಶದಲ್ಲಿನ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಕೆಲವು ಸಂಸ್ಥೆಯವರು ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಎಲ್ಲೆಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಜೊತೆಗೆ ಟ್ರಂಚ್‍ಗಳನ್ನು ನಿರ್ಮಿಸಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಕಾಡಾನೆಗಳಿಂದ ಬೆಳೆ ಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸುಜಾ ಕುಶಾಲಪ್ಪ ಅವರು ನಿರ್ದೇಶನ ನೀಡಿದರು. ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ದಬ್ಬಡ್ಕದ 28 ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಮಾನವೀಯ ದೃಷ್ಟಿಯಿಂದ ವಿದ್ಯುತ್ ಒದಗಿಸಬೇಕು ಎಂದು ಕೋರಿದರು. ಸೆಸ್ಕ್ ಇಲಾಖೆ ಎಂಜಿನಿಯರ್ ವಿನಯ ಕುಮಾರ್ ಅವರು ಹಲವು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಬಾಕಿ ಇರುವ ಕುಟುಂಬಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದರು. ಡಾ.ನವೀನ್ ಕುಮಾರ್ ಅವರು ಮಾತನಾಡಿ ಪ್ರಧಾನಮಂತ್ರಿ ‘ಕುಸುಮ್ ಬಿ’ ಸೋಲಾರ್ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಲಹೆ ಮಾಡಿದರು. ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಭಾರತ ಸಂಚಾರ ನಿಗಮವು ಸುಧಾರಣೆಯಾಗುತ್ತಿದ್ದು, ಇನ್ನೂ ಸಾಕಷ್ಟು ಬದಲಾಗಬೇಕಿದೆ ಎಂದು ತಿಳಿಸಿದರು. ತೋಟಗಾರಿಕಾ ಮಿಷನ್ ಯೋಜನೆಯಡಿ ಜೇನುಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ಕರಿಮೆಣಸು ಕೃಷಿಗೂ ಸಹ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಡಾ.ನವೀನ್ ಕುಮಾರ್ ಅವರು ಸಲಹೆ ನೀಡಿದರು.
ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಮಹಿಳಾ ಒಕ್ಕೂಟಗಳಿಗೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಿ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಬೇಕು ಎಂದು ನಾಗೇಶ್ ಕುಂದಲ್ಪಾಡಿ ಅವರು ಹೇಳಿದರು. ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್ ಅವರು ಜಿಲ್ಲೆಯಲ್ಲಿ ಎನ್‍ಆರ್‍ಎಲ್‍ಎಂ ಕಾರ್ಯಕ್ರಮದಡಿ 3,417 ಸಂಘದಲ್ಲಿ, 36,088 ಸದಸ್ಯರಿದ್ದು, ವಿವಿಧ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಎಲ್-ನಿನೊ ಪರಿಣಾಮದಿಂದ ಮಳೆಯಾಗದೆ 60 ವರ್ಷದ ನಂತರ ಬರ ಪರಿಸ್ಥಿತಿ ನಿರ್ಮಾಣವಾಗಿ, ಭತ್ತ ಬೆಳೆ ಒಣಗುತ್ತಿದೆ. ಆದ್ದರಿಂದ ಸೂಕ್ತ ಪರಿಹಾರ ನೀಡಬೇಕು. ಆ ನಿಟ್ಟಿನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು. ಜಿಲ್ಲೆಯಲ್ಲಿ ಬರ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರು ಸೂಚಿಸಿದರು. ನಾಗೇಶ್ ಕುಂದಲ್ಪಾಡಿ ಅವರು ಮಾತನಾಡಿ ಈ ಬಾರಿ ಬರ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು. ಶಿಶುಗಳ ಮರಣ ತಡೆಯಬೇಕು. ಆಶಾ ಕಾರ್ಯಕರ್ತರಿಗೆ ಕಾಲ ಕಾಲಕ್ಕೆ ವೇತನ ಪಾವತಿಸಬೇಕು ಎಂದು ಅವರು ಸಲಹೆ ಮಾಡಿದರು.
ಆರ್.ಕೆ.ಚಂದ್ರು ಅವರು ಮಾತನಾಡಿ ನಂಜರಾಯಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ವಾರದಲ್ಲಿ ಎರಡು ದಿನ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದ ದಿನದಲ್ಲಿ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ಈ ಹಿಂದಿನಂತೆ ಸಂಚಾರಿ ವಾಹನದಲ್ಲಿ ವೈದ್ಯರು ಮತ್ತು ಶ್ರುಶ್ರೂಷಕರು ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ಮಾಡಿದರು. ವಿಬಿ-ಜಿ ರಾಂ ಜಿ ಕಾರ್ಯಕ್ರಮ ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಉದ್ಯೋಗ ಕಲ್ಪಿಸಬೇಕು. ಕೆರೆಗಳ ನಿರ್ಮಾಣ ಸೇರಿದಂತೆ ಹಲವು ಕಾರ್ಯ ಅನುಷ್ಠಾನಗೊಳಿಸಬೇಕು ಎಂದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕೆಆರ್‍ಐಡಿಎಲ್ ಸಂಸ್ಥೆ ಹಾಗೂ ನಿರ್ಮಿತಿ ಕೇಂದ್ರಕ್ಕೆ ಹಲವು ಕಾಮಗಾರಿ ನೀಡಲಾಗಿದ್ದು, ತ್ವರಿತವಾಗಿ ಪ್ರಗತಿ ಸಾಧಿಸುವಂತೆ ಸಂಸದರು ಸೂಚಿಸಿದರು.
‘ಕೇಂದ್ರ ಸರ್ಕಾರ ಒಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಲು ಆದೇಶಿಸಿದೆ. ಆ ನಿಟ್ಟಿನಲ್ಲಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು. ಕೇಂದ್ರ ಸರ್ಕಾರದ ಸಭೆ ಸಮಾರಂಭಗಳಲ್ಲಿ ಕಡ್ಡಾಯವಾಗಿ ವಂದೇ ಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡಬೇಕು ಎಂದು ಇದೇ ಸಂದರ್ಭದಲ್ಲಿ ಸಂಸದರು ಸೂಚಿಸಿದರು.’ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ಜಲಜೀವನ್ ಮಿಷನ್ ಎಂಜಿನಿಯರ್ ಭಾಸ್ಕರ, ಸಮಗ್ರ ಗಿರಿಜನ ಕಲ್ಯಾಣಾಧಿಕಾರಿ ಭಾಗೀರಥಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ರಾಮಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಇತರರು ತಮ್ಮ ಇಲಾಖೆಯ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರದ ಕೃಷಿ ಮತ್ತು ತೋಟಗಾರಿಕಾ ಕಾರ್ಯಕ್ರಮದ ಭಿತ್ತ ಪತ್ರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.