ಮಡಿಕೇರಿ, NEWS DESK ಅ.8: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಅಕ್ಟೋಬರ್ 9ರಂದು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಮಡಿಕೇರಿ ಜಿಲ್ಲಾ ಪಂಚಾಯತ್‌ನಲ್ಲಿರುವ ಶಾಸಕರ ಕಚೇರಿಗೆ ಭೇಟಿ ನೀಡಲಿರುವ ಅವರು, ಬಳಿಕ ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಭೋಜನ ವಿರಾಮದ ಬಳಿಕ, 2.30ಕ್ಕೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಡಿಯಾಲಜಿ ಘಟಕವನ್ನು ವೀಕ್ಷಿಸಲಿದ್ದಾರೆ.
ಸಂಜೆ 4 ಗಂಟೆಗೆ ಕುಶಾಲನಗರದ ಶಾಲೆಯಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ ಅವರು ಭಾಗವಹಿಸಲಿದ್ದಾರೆ.
















