Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಅ. 9: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಹಾಗೂ ಸಂಘಟನೆಯನ್ನು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸಂಘಟನಾ ಸೃಜನ್ ಅಭಿಯಾನ-2ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ತಿಳಿಸಿದರು.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿಯಾನದ ಮೂಲಕ ಬೂತ್ ಮಟ್ಟದ ಸಂಘಟನೆಗಳನ್ನು ಬಲಪಡಿಸುವ ಗುರಿ ಹೊಂದಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರಿಗೆ ಸೂಕ್ತ ಜವಾಬ್ದಾರಿ ನೀಡಲಾಗುವುದು. ವಿವಿಧ ಘಟಕಗಳ ಪದಾಧಿಕಾರಿಗಳ ಆಯ್ಕೆಯಲ್ಲಿ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದರು.

ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಕುರಿತು ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷವು ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನವನ್ನು ಹಮ್ಮಿಕೊಂಡಿದೆ. ಸಂಘಟನಾ ಸೃಜನ್ ಅಭಿಯಾನದ ಮೂಲಕ ಪಕ್ಷದ ಆಂತರಿಕ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಮತದಾನದ ಹಕ್ಕುಗಳ ರಕ್ಷಣೆಯ ವಿಚಾರವನ್ನು ಜನರ ಬಳಿಗೆ ಕೊಂಡೊಯ್ಯಲಾಗುವುದು. ಈ ಎರಡೂ ಅಭಿಯಾನಗಳನ್ನು ಜಿಲ್ಲೆ ಮತ್ತು ಬ್ಲಾಕ್ ಮಟ್ಟದಲ್ಲಿ ಮುಂದಿನ ದಿನಗಳಲ್ಲಿ ನಡೆಸಲಾಗುತ್ತದೆ ಎಂದು ಹೇಳಿದರು.

ಮತ್ತೊಬ್ಬ ಕೊಡಗು ಜಿಲ್ಲಾ ಉಸ್ತುವಾರಿ ಆರ್. ವೆಂಕಟೇಶ್ ಮಾತನಾಡಿ, ಕೆಪಿಸಿಸಿ ವತಿಯಿಂದ ಬ್ಲಾಕ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ವಲಯ ಮಟ್ಟದಲ್ಲಿ ಚರ್ಚಿಸಿ ನೇಮಕ ಮಾಡಲಾಗುತ್ತದೆ. ಅಕ್ಟೋಬರ್ 31ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಜಿಲ್ಲೆಯಲ್ಲಿ ಸುಮಾರು 60 ಸಾವಿರ ಮತದಾರರನ್ನು ಅಗತ್ಯ ದಾಖಲೆಗಳೊಂದಿಗೆ ಮರು ಸೇರ್ಪಡೆಗೊಳಿಸಲು ಪಕ್ಷ ಪ್ರಯತ್ನಿಸುತ್ತಿದೆ. ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸುತ್ತಿಲ್ಲ. ಆದರೆ, ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿರುವ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಈ ಸಂಬಂಧ ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿವೆ ಎಂದು ಸ್ಪಷ್ಟಪಡಿಸಿದರು.

ಹಿಂದೆ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮೃತಪಟ್ಟವರು, ವಲಸೆ ಹೋದವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ತೆಗೆದುಹಾಕಲಾಗುತ್ತಿತ್ತು. ಆದರೆ, ಇದೀಗ ಎಸ್‌ಐಆರ್ ಹೆಸರಿನಲ್ಲಿ ನೈಜ ಮತದಾರರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಯುತ್ತಿದೆ. ಚುನಾವಣಾ ಆಯೋಗವನ್ನು ಬಳಸಿಕೊಂಡು ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬ್ಯಾಡಗೊಟ್ಟ ಗ್ರಾಮದಲ್ಲಿ ಫಾರಂ-7 ದುರುಪಯೋಗವಾಗಿರುವ ಕುರಿತು ತನಿಖೆ ನಡೆಯುತ್ತಿದೆ. ನೈಜ ಮತದಾರರನ್ನು ಮತದಾನದ ಹಕ್ಕಿನಿಂದ ಹೊರಗಿಡುವುದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ತಳಮಟ್ಟದಿಂದ ಪಕ್ಷವನ್ನು ಬಲಪಡಿಸಲು ಬ್ಲಾಕ್ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ದಸರಾ ಹಬ್ಬದ ಬಳಿಕ ಈ ಪ್ರಕ್ರಿಯೆ ನಡೆಯಲಿದೆ ಎಂದರು.

ಬ್ಯಾಡಗೊಟ್ಟ ಗ್ರಾಮದಲ್ಲಿ ಫಾರಂ-7 ಸಲ್ಲಿಸಿದವರು ಪ್ರತಿದಿನ ಜೊತೆಯಲ್ಲಿರುವವರೇ ಆಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಕೃತ್ಯದಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕೊಡಗು ವೀಕ್ಷಕ ಪದ್ಮನಾಭ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕೊಡವರ ಸಾಂಪ್ರದಾಯಿಕ ತೋಕ್‌ಗೆ (ಬಂದೂಕು) ಸಾಂವಿಧಾನಿಕ ಹಾಗೂ ಶಾಸನಬದ್ಧ ರಕ್ಷಣೆ ನೀಡಬೇಕು ಎಂದು…

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.