Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 9, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.9 NEWS DESK : ಕೊಡಗಿನಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ, ನಾಯಿ ಕಡಿತ ಪ್ರಕರಣಗಳು, ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ, ಆಸ್ಪತ್ರೆಗಳ ಗುಣಮಟ್ಟ ಸುಧಾರಣೆ, ತಂಬಾಕು ನಿಯಂತ್ರಣ, ಎಚ್‍ಐವಿ ತಡೆಗಟ್ಟುವಿಕೆ ಹಾಗೂ ಎಚ್‍ಪಿವಿ ಲಸಿಕಾ ಅಭಿಯಾನದ ಪ್ರಗತಿ ಕುರಿತು ಮಾಹಿತಿ ಪಡೆದರು. ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಜ್ವರದ ಪ್ರಕರಣಗಳಲ್ಲಿ 2,502 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಅವಧಿಯಲ್ಲಿ 42 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿಸಿದರು. ಮುಂಗಾರು ಮಳೆಯ ಸಂದರ್ಭದಲ್ಲಿ ಡೆಂಗ್ಯೂ, ಮಲೇರಿಯಾ ಹಾಗೂ ಇತರ ಸೊಳ್ಳೆಜನಿತ ರೋಗಗಳ ಹರಡುವಿಕೆ ತಡೆಯಲು ಮನೆ-ಮನೆ ಸಮೀಕ್ಷೆ, ಸೊಳ್ಳೆಗಳ ಲಾರ್ವಾ ನಾಶಪಡಿಸುವ ಕಾರ್ಯಾಚರಣೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, ಹಾಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ, ಸೆಪ್ಟೆಂಬರ್ 2026ರ ಅಂತ್ಯದವರೆಗೆ ಜಿಲ್ಲೆಯಲ್ಲಿ ಒಟ್ಟು 999 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದರು. ಜಿಲ್ಲಾಧಿಕಾರಿ ಅವರು ಮಾತನಾಡಿ, ನಾಯಿ ಹಾಗೂ ಇತರ ಪ್ರಾಣಿಗಳ ಕಡಿತಕ್ಕೆ ಒಳಗಾದವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಲು ಅಗತ್ಯವಿರುವ ಆಂಟಿ ರೇಬೀಸ್ ಲಸಿಕೆ ಮತ್ತು ಇಮ್ಯುನೊಗ್ಲೋಬ್ಯುಲಿನ್ ದಾಸ್ತಾನು ಸಮರ್ಪಕವಾಗಿ ಲಭ್ಯವಿರುವಂತೆ ನೋಡಿಕೊಳ್ಳಲು ಸೂಚಿಸಿದರು. ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸ್ವಚ್ಛತೆ, ನೈರ್ಮಲ್ಯ, ಸೋಂಕು ನಿಯಂತ್ರಣ ಮತ್ತು ತ್ಯಾಜ್ಯ ನಿರ್ವಹಣೆ ಸುಧಾರಿಸುವಲ್ಲಿ ಕಾಯಕಲ್ಪ ಯೋಜನೆಯ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಅವರು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು, ವೈದ್ಯಕೀಯ ತ್ಯಾಜ್ಯವನ್ನು ನಿಗದಿತ ನಿಯಮಗಳ ಪ್ರಕಾರ ವಿಂಗಡಿಸಿ ವಿಲೇವಾರಿ ಮಾಡುವುದು ಮತ್ತು ರಾಷ್ಟ್ರೀಯ ಗುಣಮಟ್ಟದ ಆರೋಗ್ಯ ಸೇವೆಗಳ ಮಾನದಂಡಗಳನ್ನು ಪಾಲಿಸುವಂತೆ ತಿಳಿಸಿದರು. ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಹಾಗೂ ಸಬಲೀಕರಣ ಸಮಿತಿಯ ಮೂಲಕ ನಿಯಮಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸೂಚಿಸಿದರು. ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿಯನ್ನೂ ಸಭೆಯಲ್ಲಿ ಪರಿಶೀಲಿಸಲಾಯಿತು. ಏಪ್ರಿಲ್‍ನಿಂದ ಸೆಪ್ಟೆಂಬರ್ 2026 ರ ವರೆಗೆ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯಡಿ 64 ದಾಳಿ ನಡೆಸಿ, ನಿಯಮ ಉಲ್ಲಂಘಿಸಿದವರಿಂದ ಒಟ್ಟು ರೂ.1,09,700 ದಂಡ ಸಂಗ್ರಹಿಸಲಾಗಿದೆ ಎಂದು ಡಾ.ಸತೀಶ್ ಕುಮಾರ್ ಅವರು ತಿಳಿಸಿದರು. ಜಿಲ್ಲೆಯ 593 ಶಾಲೆಗಳ ಪೈಕಿ 327 ಶಾಲೆಗಳು ಹಾಗೂ 65 ಕಾಲೇಜುಗಳ ಪೈಕಿ 15 ಕಾಲೇಜುಗಳನ್ನು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳ ತಂತ್ರಾಂಶದಲ್ಲಿ ನೋಂದಾಯಿಸಲಾಗಿದೆ. ತಂಬಾಕು ಮಾರಾಟಕ್ಕೆ ಪರವಾನಗಿ ಕಡ್ಡಾಯಗೊಳಿಸುವುದು ಹಾಗೂ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ತಂಬಾಕು ನಿಷೇಧಿತ ಪ್ರದೇಶ ಎಂಬ ಫಲಕಗಳನ್ನು ಅಳವಡಿಸುವ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಎಚ್‍ಐವಿ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನದಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಸೋಂಕಿನ ಪರೀಕ್ಷೆ, ಚಿಕಿತ್ಸೆ ಹಾಗೂ ಸಮಾಲೋಚನೆ ಸೇವೆಗಳನ್ನು ಬಲಪಡಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮಾತನಾಡಿ, 2026 ರ ಡಿಸೆಂಬರ್ 1 ರೊಳಗೆ ರಾಜ್ಯದ ಎಲ್ಲ ಜಿಲ್ಲೆಗಳನ್ನು ಸುರಕ್ಷಿತ+ ಜಿಲ್ಲೆಗಳನ್ನಾಗಿ ರೂಪಿಸುವ ಗುರಿಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದ ಎಚ್‍ಪಿವಿ ಲಸಿಕಾ ಅಭಿಯಾನದಲ್ಲಿ ಅಕ್ಟೋಬರ್ 6 ರ ವರೆಗೆ ಕೊಡಗು ಜಿಲ್ಲೆಯಲ್ಲಿ ಶೇ.70.79 ರಷ್ಟು ಗುರಿ ಸಾಧಿಸಲಾಗಿದೆ. ಒಟ್ಟು 5,276ರ ಗುರಿಯಲ್ಲಿ 3,735 ಮಂದಿ ಲಸಿಕೆ ಪಡೆದಿದ್ದಾರೆ. ತಾಲೂಕುವಾರು ಪ್ರಗತಿಯಲ್ಲಿ ಸೋಮವಾರಪೇಟೆ ಶೇ. 74.88 ರಷ್ಟು ಸಾಧನೆಯೊಂದಿಗೆ ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಅವರು ಮಾತನಾಡಿ, ಈ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಡಾ.ಅನಿಲ್ ಧವನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಸಮಗ್ರ ಗಿರಿಜನ ಯೋಜನಾ ಅಭಿವೃದ್ಧಿ ಅಧಿಕಾರಿ, ತಾಲ್ಲೂಕು ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ ಆರ್ಯನ್ ಕುನ್ವರ್‌ಗೆ ಪ್ರಥಮ ಸ್ಥಾನ

ಅಕ್ಟೋಬರ್ 29, 2026

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.29: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.…

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ನ. 22ರಂದು ಮಡಿಕೇರಿಯಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ; ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಅಕ್ಟೋಬರ್ 29, 2026

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ಗೆ ಅಪನಂಬಿಕೆ: ಸಂಸದ ಬ್ರಿಜೇಶ್ ಚೌಟ ಟೀಕೆ

ಅಕ್ಟೋಬರ್ 29, 2026

ಕ್ರೀಡೆಯಲ್ಲಿ ಸರ್ವದೈವತ ಪ್ರೌಢಶಾಲೆಗೆ ಹ್ಯಾಟ್ರಿಕ್ ಸಮಗ್ರ ಪ್ರಶಸ್ತಿಯ ಗರಿ

ಅಕ್ಟೋಬರ್ 29, 2026

ಬಿಜೆಪಿ ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಮಡಿಕೇರಿಗೆ ಅಂಟಿದ್ದ ಶಾಪ ವಿಮೋಚನೆಯಾಗಿದೆ : ಮೂಡ ಅಧ್ಯಕ್ಷ ಬಿ.ವೈ.ರಾಜೇಶ್ ಅಸಮಾಧಾನ

ಅಕ್ಟೋಬರ್ 29, 2026

ಅ.31 ರಂದು ಮಾಯಮುಡಿಯಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ನ.1 ರಂದು ಸಮಾರೋಪ

ಅಕ್ಟೋಬರ್ 29, 2026

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.