Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಕ್ಟೋಬರ್ 9, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.9 NEWS DESK : ಇದೇ ನವೆಂಬರ್, 01 ರಂದು ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಡಳಿತ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದರು. ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವಲ್ಲಿ ವಿವಿಧ ಇಲಾಖೆಗಳ ಸಂಘ ಸಂಸ್ಥೆಗಳು ಸಹ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮನವಿ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದರು. ಮೆರವಣಿಗೆಯನ್ನು ನಗರದ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದಿಂದ ಕಾಲೇಜು ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯತು ಮೈದಾನಕ್ಕೆ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಮೆರವಣಿಗೆಯು ಅಂದು ಬೆಳಗ್ಗೆ 7 ಗಂಟೆಗೆ ಆರಂಭಿಸಿ 8 ಗಂಟೆಗೆ ತಲುಪಿ ಮಕ್ಕಳೆಲ್ಲ ಉಪಾಹಾರ ಸೇವಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಅರಣ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೈಗಾರಿಕೆ, ನಗರಸಭೆ ಹೀಗೆ ವಿವಿಧ ಇಲಾಖೆಗಳು ಸ್ತಬ್ಧಚಿತ್ರ ನಿರ್ಮಿಸಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳ ಸಂಬಂಧ ಮಾಹಿತಿ ಒಳಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಮೆರವಣಿಗೆಯಲ್ಲಿ ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು, ಪೊಲೀಸ್, ಎನ್‍ಸಿಸಿ, ಭಾರತ್ ಸೇವಾದಳ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಗೃಹ ರಕ್ಷಕ ದಳ ಇತರರು ಪಾಲ್ಗೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ಡಿವೈಎಸ್‍ಪಿ, ಶಾಲಾ ಶಿಕ್ಷಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಧ್ವಜಾರೋಹಣ ಮತ್ತು ವೇದಿಕೆ ನಿರ್ಮಾಣ ಸಂಬಂಧ ಲೋಕೋಪಯೋಗಿ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆ ಎಂಜಿನಿಯರ್‍ಗಳು ಮತ್ತು ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು, ವಾಟರ್ ಪ್ರೂೀಫ್ ವೇದಿಕೆ ನಿರ್ಮಾಣ ಮಾಡಬೇಕು. ಗಣ್ಯರು, ಮಾಜಿ ಸೈನಿಕರು, ಪತ್ರಕರ್ತರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು. ಜೊತೆಗೆ ಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪಥ ಸಂಚಲನ ಸಮಿತಿಯವರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಸಾಂಸ್ಕøತಿಕ ಸಮಿತಿಯವರು ಕರ್ನಾಟಕದ ಭವ್ಯತೆ ಬಿಂಭಿಸುವ ಮತ್ತು ಕನ್ನಡ ಸಂಸ್ಕøತಿಯನ್ನು ಎತ್ತಿ ಹಿಡಿಯುವ ಗೀತೆಗಳನ್ನು ಒಳಗೊಂಡ ಗುಣಮಟ್ಟದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಸಮಿತಿ ಸದಸ್ಯರಿಗೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಉಪಾಹಾರ ಸಮಿತಿಯವರು ವಿದ್ಯಾರ್ಥಿಗಳಿಗೆ ಉಪಾಹಾರ ವ್ಯವಸ್ಥೆ ಮಾಡಬೇಕು. ಆ ನಿಟ್ಟಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಸಮಿತಿ ಸದಸ್ಯರು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ ಮೆರವಣಿಗೆಗೆ ಪ್ರೌಢಶಾಲೆ ಹಂತದ ಮೇಲ್ಪಟ್ಟು ವಿದ್ಯಾರ್ಥಿಗಳು ಪಾಲ್ಗೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ಕಲೆ, ಸಂಸ್ಕøತಿ, ಸಾಹಿತ್ಯ, ಕ್ರೀಡೆ, ಜಾನಪದ, ಸೇನೆ ಹೀಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ಸಲಹೆ ಮಾಡಿದರು. ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಜತೆಗೆ ಹಾಜರಾತಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಡಿವೈಎಸ್‍ಪಿ ಸೂರಜ್ ಅವರು ಮಾತನಾಡಿ ನಗರದ ಅಜ್ಜಮಾಡ ಬಿ.ದೇವಯ್ಯ ವೃತ್ತದಿಂದ ಮೆರವಣಿಗೆ ಆರಂಭಿಸುವುದು ಒಳ್ಳೆಯದು, ಜೊತೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸುವಂತೆ ಸಲಹೆ ಮಾಡಿದರು. ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ಬಿಂದು ಅವರು ಕನ್ನಡ ರಾಜ್ಯೋತ್ಸವ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳನ್ನು ಆಹ್ವಾನಿಸಿ, ಮೆರವಣಿಗೆಯಲ್ಲಿ ಪಾಲ್ಗೊಳ್ಳುವುದು, ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು. ಕನ್ನಡ ಮತ್ತು ಸಂಸ್ಕøತಿ ಬಿಂಬಿಸುವ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಮಾಹಿತಿ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಮಾತನಾಡಿ ಸ್ತಬ್ಧಚಿತ್ರ ನಿರ್ಮಾಣದಲ್ಲಿ ವಿವಿಧ ಇಲಾಖೆಗಳು ಶ್ರಮಿಸುತ್ತವೆ. ಆದ್ದರಿಂದ ಎಲ್ಲಾ ಇಲಾಖೆಗಳ ಸ್ತಬ್ಧಚಿತ್ರಗಳಿಗೂ ಪ್ರಶಂಸನ ಪತ್ರ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.
ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾಧಿಕಾರಿ ಸೋಮಶೇಖರ್ ಅವರು ವಿವಿಧ ಇಲಾಖೆಗಳು ಸ್ತಬ್ಧಚಿತ್ರ ನಿರ್ಮಾಣದಲ್ಲಿ ಶ್ರಮಿಸುತ್ತಾರೆ. ಆದ್ದರಿಂದ ಎಲ್ಲರಿಗೂ ಪ್ರೋತ್ಸಾಹ ನೀಡಬೇಕು. ಆ ನಿಟ್ಟಿನಲ್ಲಿ ಪ್ರಶಂಸನ ಪತ್ರ ನೀಡುವಂತೆ ಸಲಹೆ ನೀಡಿದರು. ಪೊಲೀಸ್ ಇಲಾಖೆಯ ಆರ್.ಪಿ.ಐ ಗಣೇಶ್ ಅವರು ಮಾತನಾಡಿ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಪಥ ಸಂಚಲನ ಸಂಬಂಧ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ ಅವರು ವಿವಿಧ ಸಮಿತಿಗಳು ನಿರ್ವಹಿಸಬೇಕಾದ ಜವಾಬ್ದಾರಿ ಬಗ್ಗೆ ಮಾಹಿತಿ ನೀಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯೂ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ತಹಶೀಲ್ದಾರ್ ಶ್ರೀಧರ, ಪ್ರಾದೇಶಿಕ ಸಾರಿಗೆ ಇಲಾಖೆಯ ಇನ್ಸ್‍ಪೆಕ್ಟರ್ ಮೋಹನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿ ಸುಮಂಗಲ ಹಿರೇಮಣಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಅರಣ್ಯ ಇಲಾಖೆಯ ಶಿವಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಜಿಲ್ಲಾ ಮಟ್ಟದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಸಂತ ಅನ್ನಮ್ಮ ಶಾಲೆಯ ಆರ್ಯನ್ ಕುನ್ವರ್‌ಗೆ ಪ್ರಥಮ ಸ್ಥಾನ

ಅಕ್ಟೋಬರ್ 29, 2026

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ಕೊಡಗು ಜಿಲ್ಲೆಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅಧಿಕಾರ ಸ್ವೀಕಾರ

ಅಕ್ಟೋಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.29: ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಜಯಲಕ್ಷ್ಮಿ ರಾಯಕೋಡ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.…

ಭರತನಾಟ್ಯ ಹಿರಿಯರ ವಿಭಾಗದ ಪರೀಕ್ಷೆಯಲ್ಲಿ ತುಶಾಲಿಗೆ ಶೇ.90 ಅಂಕ

ಅಕ್ಟೋಬರ್ 29, 2026

ನ. 22ರಂದು ಮಡಿಕೇರಿಯಲ್ಲಿ ‘ಕನ್ನಡ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ; ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಆಯೋಜನೆ

ಅಕ್ಟೋಬರ್ 29, 2026

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ಗೆ ಅಪನಂಬಿಕೆ: ಸಂಸದ ಬ್ರಿಜೇಶ್ ಚೌಟ ಟೀಕೆ

ಅಕ್ಟೋಬರ್ 29, 2026

ಕ್ರೀಡೆಯಲ್ಲಿ ಸರ್ವದೈವತ ಪ್ರೌಢಶಾಲೆಗೆ ಹ್ಯಾಟ್ರಿಕ್ ಸಮಗ್ರ ಪ್ರಶಸ್ತಿಯ ಗರಿ

ಅಕ್ಟೋಬರ್ 29, 2026

ಬಿಜೆಪಿ ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ : ಮಡಿಕೇರಿಗೆ ಅಂಟಿದ್ದ ಶಾಪ ವಿಮೋಚನೆಯಾಗಿದೆ : ಮೂಡ ಅಧ್ಯಕ್ಷ ಬಿ.ವೈ.ರಾಜೇಶ್ ಅಸಮಾಧಾನ

ಅಕ್ಟೋಬರ್ 29, 2026

ಅ.31 ರಂದು ಮಾಯಮುಡಿಯಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ : ನ.1 ರಂದು ಸಮಾರೋಪ

ಅಕ್ಟೋಬರ್ 29, 2026

ನ.2ರಂದು ಪೊನ್ನಂಪೇಟೆಯಲ್ಲಿ ಸಿಎನ್‌ಸಿ ಮಾನವ ಸರಪಳಿ : ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 29, 2026

ನ.7 ರಂದು ಸಂದರ್ಶನ

ಅಕ್ಟೋಬರ್ 28, 2026

ನ.1 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ

ಅಕ್ಟೋಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.