Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೂರ್ನಾಡು ಪಿಯು ಕಾಲೇಜಿನ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ; ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಪಿಯು ಕಾಲೇಜಿನ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ; ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕರೆ

ಅಕ್ಟೋಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೂರ್ನಾಡು, NEWS DESK ಅ.11: ಮೂರ್ನಾಡು ಎಜುಕೇಶನ್ ಸೊಸೈಟಿಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಆಯೋಜಿಸಿರುವ ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರಕ್ಕೆ ಹಾಕತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಲಾಯಿತು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಅವರು ಗಿಡಕ್ಕೆ ನೀರುಣಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಮೂರ್ನಾಡು ಎಜುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಪುದಿಯೊಕ್ಕಡ ಹರೀಶ್ ದೇವಯ್ಯ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂದ್ರೀರ ತೇಜಸ್ ನಾಣಯ್ಯ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಗುರಿ ಸಾಧಿಸುವ ಛಲ, ಆತ್ಮವಿಶ್ವಾಸ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಂಡು ಜೀವನದಲ್ಲಿ ಗುರಿ ಸಾಧಿಸಲು ಶ್ರಮಿಸಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕೃಷಿಯ ಮಹತ್ವ ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೆರವಂಡ ಜಯ ಮುತ್ತಪ್ಪ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನಜ್ಯೋತಿ ಸ್ವಸಹಾಯ ಸಂಘದ ಅಧ್ಯಕ್ಷೆ ಉಳುವಾರನ ಗೀತಾ, ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪಿ.ಎಚ್. ರಶ್ಮಿ ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕಿ ಸರೋಜಿನಿ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಸ್ವಾಗತಿಸಿದರು. ಅನುರಾಧ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ 42ನೇ ಪುಣ್ಯಸ್ಮರಣೆ

ಅಕ್ಟೋಬರ್ 31, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ರೈತರ ಪರಿಹಾರಕ್ಕೆ 17 ಷರತ್ತು ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಕೊಡಗು ಬಿಜೆಪಿ ಆಕ್ರೋಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.31 : ರಾಜ್ಯ ಕಾಂಗ್ರೆಸ್ ಸರಕಾರ ಅಧಿವೇಶನದಲ್ಲಿ ನೀಡಿದ ಭರವಸೆಯಂತೆ ರೈತರಿಗೆ ನೇರವಾಗಿ ಪರಿಹಾರ ನೀಡುವ…

ನ.2 ರಂದು ವಿರಾಜಪೇಟೆಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಸ್ಪರ್ಧೆ

ಅಕ್ಟೋಬರ್ 30, 2026

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರು ಕನ್ನಡಿಗರು ಸೇರಿ ಆರು ಮಂದಿ ಸಾವು

ಅಕ್ಟೋಬರ್ 30, 2026

ಚಿತ್ರಕಲಾ ಸ್ಪರ್ಧೆ : ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಅಕ್ಟೋಬರ್ 30, 2026

ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಆತ್ಮೀಯ ಬೀಳ್ಕೊಡುಗೆ

ಅಕ್ಟೋಬರ್ 30, 2026

ಸ್ಥಳೀಯ ಉತ್ಪನ್ನಗಳ ಗುಣಮಟ್ಟ ಹೆಚ್ಚಿಸಿ ರಫ್ತು ವಹಿವಾಟು ವಿಸ್ತರಿಸಿ : ಬಿ.ಆರ್.ಯೋಗೇಶ್

ಅಕ್ಟೋಬರ್ 30, 2026

ಯುವ ಸಂಸತ್ತು ಕಾರ್ಯಕ್ರಮ : ಯುವ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯತ್ವ ಗುಣ ಬೆಳೆಸಿಕೊಳ್ಳಲು ಸಹಕಾರಿ : ಮಂದ್ರೀರ ಮೋಹನ್ ದಾಸ್

ಅಕ್ಟೋಬರ್ 30, 2026

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.