Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಭಾಗಮಂಡಲ, NEWS DESK ಅ.11: ಭಾಗಮಂಡಲ ಮತ್ತು ತಲಕಾವೇರಿ ಗ್ರಾಮಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ನಿಗದಿತ ವೇಳಾಪಟ್ಟಿಯಂತೆ ಬಸ್ ಸೇವೆ ಆರಂಭಗೊಂಡಿದೆ. ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ಬಸ್ ಸೇವೆ ಆರಂಭಿಸಲು ಕ್ರಮ ಕೈಗೊಂಡ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಆಗಸ್ಟ್ 22, 2026ರಂದು ಶಾಸಕ ಎ.ಎಸ್. ಪೊನ್ನಣ್ಣ ಅವರು ಭಾಗಮಂಡಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಂಜೆ ನಿಗದಿತ ಸಮಯದಲ್ಲಿ ಬಸ್ ಸೌಲಭ್ಯವಿಲ್ಲದೆ ಎದುರಾಗುತ್ತಿದ್ದ ತೊಂದರೆಗಳನ್ನು ಅವರ ಗಮನಕ್ಕೆ ತಂದಿದ್ದರು. ಶಾಲಾ-ಕಾಲೇಜುಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ವಿವರಿಸಿ, ಸೂಕ್ತ ಬಸ್ ಸೇವೆ ಆರಂಭಿಸುವಂತೆ ಮನವಿ ಸಲ್ಲಿಸಿದ್ದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಬಸ್ ಸೇವೆ ಆರಂಭಿಸಲು ಸೂಚನೆ ನೀಡಿದ್ದರು. ಇದೀಗ ಶಾಸಕರ ಸೂಚನೆಯಂತೆ ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸಂಚಾರ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಿದೆ.

ಬಸ್ ಸಂಚಾರದ ವೇಳಾಪಟ್ಟಿ

ಮಡಿಕೇರಿಯಿಂದ ಬೆಳಿಗ್ಗೆ 6.30ಕ್ಕೆ ಹೊರಡುವ ಬಸ್ 7.45ಕ್ಕೆ ಭಾಗಮಂಡಲ ತಲುಪಲಿದೆ. ಬಳಿಕ ಬೆಳಿಗ್ಗೆ 8 ಗಂಟೆಗೆ ಭಾಗಮಂಡಲದಿಂದ ಹೊರಟು 8.20ಕ್ಕೆ ತಲಕಾವೇರಿ ತಲುಪಲಿದೆ. ಬೆಳಿಗ್ಗೆ 8.30ಕ್ಕೆ ತಲಕಾವೇರಿಯಿಂದ ಹೊರಡುವ ಬಸ್ 9 ಗಂಟೆಗೆ ಭಾಗಮಂಡಲ ತಲುಪಿದ ನಂತರ ನಾಪೋಕ್ಲು ಮತ್ತು ಮೂರ್ನಾಡು ಮಾರ್ಗವಾಗಿ ಮಡಿಕೇರಿಗೆ ತೆರಳಿ ಬೆಳಿಗ್ಗೆ 11 ಗಂಟೆಗೆ ತಲುಪಲಿದೆ.

ಮಧ್ಯಾಹ್ನ 11.30ಕ್ಕೆ ಮಡಿಕೇರಿಯಿಂದ ಹೊರಡುವ ಬಸ್ 12.45ಕ್ಕೆ ಭಾಗಮಂಡಲ ತಲುಪಲಿದೆ. ಮಧ್ಯಾಹ್ನ 1.30ಕ್ಕೆ ಭಾಗಮಂಡಲದಿಂದ ಹೊರಟು 2.45ಕ್ಕೆ ಮಡಿಕೇರಿ ತಲುಪಲಿದೆ. ಮಧ್ಯಾಹ್ನ 3.30ಕ್ಕೆ ಮಡಿಕೇರಿಯಿಂದ ಹೊರಡುವ ಬಸ್ ಸಂಜೆ 4.45ಕ್ಕೆ ಭಾಗಮಂಡಲ ತಲುಪಲಿದೆ.

ಸಂಜೆ 5 ಗಂಟೆಗೆ ಭಾಗಮಂಡಲದಿಂದ ಹೊರಡುವ ಬಸ್ 5.20ಕ್ಕೆ ತಲಕಾವೇರಿ ತಲುಪಲಿದೆ. ಸಂಜೆ 5.30ಕ್ಕೆ ತಲಕಾವೇರಿಯಿಂದ ಹೊರಟು 5.50ಕ್ಕೆ ಭಾಗಮಂಡಲ ತಲುಪಲಿದ್ದು, ಸಂಜೆ 6 ಗಂಟೆಗೆ ಭಾಗಮಂಡಲದಿಂದ ಹೊರಡುವ ಬಸ್ ರಾತ್ರಿ 7.15ಕ್ಕೆ ಮಡಿಕೇರಿ ತಲುಪಲಿದೆ.

ತಲಕಾವೇರಿಯಲ್ಲಿ ಪೂಜೆ

ಬಸ್ ಸೇವೆ ಆರಂಭವಾದ ಹಿನ್ನೆಲೆಯಲ್ಲಿ ತಲಕಾವೇರಿಯಲ್ಲಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಸಂಚಾರಿ ಅಧಿಕಾರಿ ಇರಸಪ್ಪ, ಚಾಲಕ ಮನುಕುಮಾರ್, ನಿರ್ವಾಹಕ ರಾಮಚಂದ್ರ, ವಕೀಲರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸದಸ್ಯ ಸುನಿಲ್ ಪತ್ರಾವೋ, ಪ್ರಚಾರ ಸಮಿತಿ ಅಧ್ಯಕ್ಷ ಗೌರೀಶ್ ರೈ, ದೇವಾಲಯದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಬಸ್ ಸೇವೆ ಆರಂಭಿಸಲು ಸಹಕರಿಸಿದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿ ಅಭಿನಂದನೆ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಕರಗೋತ್ಸವಕ್ಕೆ ಚಾಲನೆ: ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣೆ ಆರಂಭ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಸಾರಿಗೆ ಇಲಾಖೆಯಲ್ಲಿ ಮತ್ತೊಂದು ಸಂಕಷ್ಟ: ಟಿಕೆಟ್ ರೋಲ್ ಕೊರತೆ, 3–4 ಪ್ರಯಾಣಿಕರಿಗೆ ಒಂದೇ ಟಿಕೆಟ್!

ಅಕ್ಟೋಬರ್ 11, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, NEWS DESK : ರಾಜ್ಯದ ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಸಂಕಷ್ಟದ ಪರಿಣಾಮಗಳು ಮುಂದುವರಿದಿದ್ದು, ಡೀಸೆಲ್ ಕೊರತೆಯ ಬೆನ್ನಲ್ಲೇ ಇದೀಗ…

ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಗಡುವು ವಿಸ್ತರಣೆ

ಅಕ್ಟೋಬರ್ 11, 2026

ಹಿಂದೂ ಗೆಳೆಯರ ಬಳಗದ ಅಧ್ಯಕ್ಷರಾಗಿ ಟಿ.ವಿ. ಪ್ರಕಾಶ್ ನೇಮಕ

ಅಕ್ಟೋಬರ್ 11, 2026

ಕೊಡಗರಹಳ್ಳಿ, ಕಂಬಿಬಾಣೆ ಹಾಗೂ ಸುಂಟಿಕೊಪ್ಪದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಅಕ್ಟೋಬರ್ 11, 2026

ಭಾಗಮಂಡಲ–ತಲಕಾವೇರಿ ಮಾರ್ಗದಲ್ಲಿ ಬಸ್ ಸೇವೆ ಆರಂಭ: ಶಾಸಕರಿಗೆ ಗ್ರಾಮಸ್ಥರ ಅಭಿನಂದನೆ; ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ವರ್ಷಗಳ ಬೇಡಿಕೆಗೆ ಸ್ಪಂದನೆ

ಅಕ್ಟೋಬರ್ 11, 2026

ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ : ಯುವ ಸಮೂಹ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ರಾಯಭಾರಿಗಳಾಗಬೇಕು : ಆನಂದ ಕರಂದ್ಲಾಜೆ ಕರೆ

ಅಕ್ಟೋಬರ್ 11, 2026

ಗೌರಮ್ಮ ದತ್ತಿ ಕಥಾ ಸ್ಪರ್ಧೆ: ಆಕಾಂಕ್ಷ ಎಂ.ಎಸ್.ಗೆ ಪ್ರಥಮ ಬಹುಮಾನ

ಅಕ್ಟೋಬರ್ 11, 2026

ವೃದ್ಧಾಪ್ಯದಲ್ಲಿ ಪೋಷಕರಿಗೆ ಪ್ರೀತಿ, ಆರೈಕೆ ನೀಡಿ: ಬಿಲ್ಲರಿ ಕುಟ್ಟಡ ಪ್ರಭು ಅಯ್ಯಪ್ಪ; ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಹಿರಿಯರ ಸಮಸ್ಯೆ ಆಲಿಸಿ, ಸಹಾಯ ಮಾಡುವ ಮನೋಭಾವ ಬೆಳೆಸಿಕೊಳ್ಳಿ

ಅಕ್ಟೋಬರ್ 11, 2026

ಪ್ರಜಾಪ್ರಭುತ್ವ ಉಳಿಸಿ, ಮತದಾನದ ಹಕ್ಕು ರಕ್ಷಿಸಿ: ಸಿದ್ದಾಪುರದಲ್ಲಿ ಪ್ರತಿಭಟನೆ; ಎಸ್‌ಐಆರ್‌ ಪ್ರಕ್ರಿಯೆ ವಿರುದ್ಧ ಆಕ್ರೋಶ; ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಅಕ್ಟೋಬರ್ 11, 2026

ಮೂರ್ನಾಡು ಪಿಯು ಕಾಲೇಜಿನ ಎನ್‌ಎಸ್‌ಎಸ್ ಶಿಬಿರಕ್ಕೆ ಚಾಲನೆ; ವಿದ್ಯಾರ್ಥಿಗಳು ನಾಯಕತ್ವದ ಗುಣ ಬೆಳೆಸಿಕೊಳ್ಳಲು ಕರೆ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.